ಅಲ್ಲಲ್ಲಿ ಕಾರ್ಮಿಕ ದಿನಾಚರಣೆ
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಸಭೆ-ಸಮಾರಂಭ, ಮೆರವಣಿಗೆ ನಡೆಯಿತು.
ಬೆಳ್ತಂಗಡಿ: ಸಿಐಟಿಯು
ಬೆಳ್ತಂಗಡಿ, ಮೇ 3: ಮಾರ್ಕ್ಸ್‌ವಾದಿಗಳು ಹಾಗೂ ಅಂಬೇಡ್ಕರ್ ವಾದಿಗಳ ನಡುವೆ ಒಡಕು ತರುವ ಪ್ರಯತ್ನಗಳು ಇತ್ತೀಚಿನ ದಿನಗಳಲ್ಲಿ ಕೆಲವು ಶಕ್ತಿಗಳಿಂದ ನಡೆಯುತ್ತಿದ್ದು, ಇದು ಯಶಸ್ವಿಯಾಗಲಾರದು. ಮುಂದಿನ ದಿನಗಳಲ್ಲಿ ಮಾರ್ಕ್ಸವಾದಿಗಳು ಹಾಗೂ ಅಂಬೇಡ್ಕರ್ ವಾದಿಗಳು ಒಟ್ಟಾಗಿ ದೇಶದಲ್ಲಿ ಚಳವಳಿಯನ್ನು ಮುನ್ನಡೆಸಬೇಕಾದ ಅಗತ್ಯವಿದೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಕರೆ ನೀಡಿದರು. ಬೆಳ್ತಂಗಡಿಯಲ್ಲಿ ಸಿಐಟಿಯು ಹಾಗೂ ಇತರೆ ಸಂಘಟನೆಗಳ ನೇತೃತ್ವದಲ್ಲಿ ನಡೆದ ಮೇ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಪ್ರೊ.ಪಿ.ಟಿ ಅಂಟ್ಯನಿ ಕಾರ್ಯಕ್ರಮ ಉದ್ಘಾಟಿಸಿದರು. ಸಿಐಟಿಯು ತಾಲೂಕು ಅಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ವಸಂತ ನಡ, ಬೀಡಿ ಕಾರ್ಮಿಕರ ಸಂಘಟನೆಯ ಮುಖಂಡರುಗಳಾದ ನೆಬಿಸಾ, ರೋಹಿಣಿ, ಈಶ್ವರಿ, ಜಯರಾಮ ಮಯ್ಯ, ವಿವಿಧ ಸಂಘಟನೆಗಳ ಮುಖಂಡರುಗಳಾದ ಲೋಕೇಶ್ ಕುದ್ಯಾಡಿ, ಮಹೇಶ್, ದೇವಕಿ, ಶ್ಯಾಮರಾಜ್, ಕಿರಣ ಪ್ರಭ, ಧನಂಜಯ ಪಟ್ರಮೆ ಮತ್ತಿತರರು ಉಪಸ್ಥಿತರಿದ್ದರು. ಶೇಖರ ಲಾಯಿಲ ವಂದಿಸಿದರು.
ದ.ಕ.ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ
ಮಂಗಳೂರು: ಬಂಡವಾಳಶಾಹಿಗಳ ಬೆಂಬಲದಿಂದ ಅಧಿಕಾರ ಪಡೆದು ಅವರನ್ನು ಬೆಂಬಲಿಸುತ್ತಿರುವವರಿಂದ ಕಾರ್ಮಿಕರ ಹಿತರಕ್ಷಣೆ ಸಾಧ್ಯವಿದೆಯೇ? ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಪ್ರಶ್ನಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್‌ನ ಕಾರ್ಮಿಕ ಘಟಕದ ವತಿಯಿಂದ ನಗರದ ರವೀಂದ್ರ ಕಲಾಭವನದ ಸಭಾಂಗಣದಲ್ಲಿ ನಡೆದ ಕಾರ್ಮಿಕ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಲೋಕೇಶ್ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಪ್ರಭಾರ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಕಾಂಗ್ರೆಸ್ ಘಟಕದ ಪದಾಧಿಕಾರಿಗಳಾದ ಪದ್ಮನಾಭ ನರಿಂಗಾನ, ಕೆ. ಅಶ್ರಫ್, ಹೇಮನಾಥ ಶೆಟ್ಟಿ, ಎಂ.ಎಸ್.ಮುಹಮ್ಮದ್, ಶಾಹುಲ್‌ಹವಿ
ುೀದ್, ಅನಿತಾ ಹೇಮನಾಥ ಶೆಟ್ಟಿ, ನಝೀರ್ ಮಠ, ಮುಹಮ್ಮದ್‌ರಫಿ, ಜಯಂತಿ, ಮುಹಮ್ಮದ್ ಅಶ್ರಫ್ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಮಿಕರಾದ ಪರಮೇಶ್ವರ, ಆಲಿಯಬ್ಬ ಮೂಡುಶೆಡ್ಡೆ, ಭೋಜಕೋಟ್ಯಾನ್, ಅಪ್ಪುಸ್ವಾಮಿ, ಜಯಂತಿ ಮೊದಲಾದವರು ಉಪಸ್ಥಿತರಿ ದ್ದರು. ಹುಸೈನ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.
ಮೂಡುಬಿದಿರೆ: ಸಿಐಟಿಯು
ಮೂಡುಬಿದಿರೆ: ನಮಗೆ ಸಮಾನತೆ ಸಿಗಬೇಕೆಂಬ ಉದ್ದೇಶದಿಂದ ಸರಕಾರಗಳನ್ನು ಆಯ್ಕೆ ಮಾಡಲಾಗಿದೆ. ಆದರೆ ನಮ್ಮನ್ನಾಳುವ ಸರಕಾರಗಳು ಕಾರ್ಮಿಕ ವಿರೋಧಿ ನೀತಿಯನ್ನು ಜಾರಿಗೆ ತರುವ ಮೂಲಕ ಮತ್ತೊಮ್ಮೆ ಕಾರ್ಮಿಕರನ್ನು ಗುಲಾಮಗಿರಿಯ ಸಂಕೋಲೆಯಲ್ಲಿ ಬಂಧಿಸಲು ಪ್ರಯತ್ನಿಸುತ್ತಿದೆ ಎಂದು ಸಿಐಟಿಯು ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಕಾಂ.ಎಸ್.ವರಲಕ್ಷ್ಮೀ ಹೇಳಿದರು.
ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಅಂಗವಾಗಿ ಮೂಡುಬಿದಿರೆಯಲ್ಲಿ ಸಿಐಟಿಯು ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಯಾದವ ಶೆಟ್ಟಿ, ಸಿಐಟಿಯು ಜಿಲ್ಲಾಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ, ಸಿಐಟಿಯು ನಾಯಕಿ ರಮಣಿ, ವಲಯಾಧ್ಯಕ್ಷ ಶಂಕರ ವಾಲ್ಪಾಡಿ, ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಸೀತಾರಾಮ ಶೆಟ್ಟಿ, ರೈತ ಸಂಘದ ಅಧ್ಯಕ್ಷ ಸುಂದರ ಶೆಟ್ಟಿ, ಗೇರು ಉದ್ಯಮ ಕಾರ್ಮಿಕರ ಸಂಘದ ಅಧ್ಯಕ್ಷೆ ಯಶೋದಾ, ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವಿಜಯಾ ಉಪಸ್ಥಿತರಿದ್ದರು. ಸಿಐಟಿಯು ವಲಯ ಪ್ರಧಾನ ಕಾರ್ಯದರ್ಶಿ ರಾಧಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅಕ್ಷರ ದಾಸೋಹದ ಅಧ್ಯಕ್ಷೆ ಗಿರಿಜಾ ವಂದಿಸಿದರು.
ಸುಳ್ಯ: ಕಟ್ಟಡ ನಿರ್ಮಾಣ ಕಾರ್ಮಿಕರ ಫೆಡರೇಶನ್
ಸುಳ್ಯ: ಇನ್ನೊಬ್ಬರ ಸಂಪತ್ತನ್ನು ಹೆಚ್ಚಿಸುವ ಕೆಲಸವನ್ನು ಕಾರ್ಮಿಕರು ಮಾಡುತ್ತಾ ಬರುತ್ತಿದ್ದಾರೆ. ಆದರೆ ಅವರ ಸಂಪತ್ತು ಹೆಚ್ಚುವುದೇ ಇಲ್ಲ. ಕಾರ್ಮಿಕ ತನ್ನ ಶಕ್ತಿಯನ್ನು ನಿತ್ಯ ನಷ್ಟ ಮಾಡಿಕೊಳ್ಳುತ್ತಾ ಬರುತ್ತಿದ್ದಾನೆ. ಆದರೆ ಆತನಿಗೆ ಶಕ್ತಿ ತುಂಬುವ ಕೆಲಸ ನಡೆಯುವುದಿಲ್ಲ ಎಂದು ಕಾರ್ಮಿಕ ಸಂಘಟನೆಯ ಜಿಲ್ಲಾ ಅಧ್ಯಕ್ಷ ಬಿ.ಎಂ.ಭಟ್ ಹೇಳಿದರು.
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್‌ನ ಸುಳ್ಯ ಘಟಕದ ಆಶ್ರಯದಲ್ಲಿ ನಡೆದ ಕಾರ್ಮಿಕ ದಿನಾಚರಣೆಯ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಸಭಾಧ್ಯಕ್ಷತೆಯನ್ನು ಸಂಘಟನೆಯ ಅಧ್ಯಕ್ಷ ಕೆ.ಪಿ.ಜಾನಿ ಕಲ್ಲುಗುಂಡಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ದೇವಚಳ್ಳದ ರಘು ಮೇಸ್ತ್ರಿಯವರನ್ನು ಕಾರ್ಮಿಕ ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು. ವರ್ತಕ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ತಾಲೂಕು ಇಂಜಿನಿಯರ್ ಅಸೋಸಿಯೇಶನ್ ಅಧ್ಯಕ್ಷ ಜೀವನ್ ನಾರ್ಕೋಡು, ಸಂಘಟನೆ ನಗರ ಸಮಿತಿ ಅಧ್ಯಕ್ಷ ವಿಶ್ವನಾಥ ನೆಲ್ಲಿ ಬಂಗಾರಡ್ಕ, ಕಟ್ಟಡ ಸಮಿತಿ ಗೌರವಾಧ್ಯಕ್ಷ ನೆಲ್ಸನ್ ಪಿ.ವಿ., ಕಟ್ಟಡ ಸಮಿತಿ ಅಧ್ಯಕ್ಷ ನಾಗರಾಜ ಮೇಸ್ತ್ರಿ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶಿವರಾಮ ಗೌಡ, ಕೋಶಾಧಿಕಾರಿ ಬಿಜು ಅಗಸ್ಟಿನ್ ಉಪಸ್ಥಿತರಿದ್ದರು. ಶರತ್ ಕಲ್ಲುಗುಂಡಿ ಕಾರ್ಯಕ್ರಮ ನಿರೂಪಿಸಿದರು. ಮಂಗಳೂರು: ಸಿಐಟಿಯು
ಮಂಗಳೂರು: ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ನಗರದ ಎನ್‌ಜಿಒ ಸಭಾಂಗಣದಲ್ಲಿ ಕಾರ್ಮಿಕರ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಸಿಐಟಿಯು ಜಿಲ್ಲಾ ಅಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ, ದೇಶದಲ್ಲಿ ಅಧಿಕಾರಕ್ಕೆ ಬಂದಿರುವ ನರೇಂದ್ರ ಮೋದಿ ಸರಕಾರ ಕಾರ್ಮಿಕ ವರ್ಗವನ್ನು ಶೋಷಣೆ ಮಾಡುತ್ತಿದ್ದು, ಕಾರ್ಮಿಕ ನೀತಿಯನ್ನು ಸಡಿಲಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
ಸಿಐಟಿಯು ನಗರ ಸಮಿತಿ ಅಧ್ಯಕ್ಷೆ ಜಯಂತಿ ಬಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಮಿಕ ಮುಖಂಡರುಗಳಾದ ಸುನೀಲ್ ಕುಮಾರ್ ಬಜಾಲ್, ಭಾರತಿ ಬೋಳಾರ್, ಯೋಗೀಶ್ ಜೆಪ್ಪಿನಮೊಗರು, ಸಂತೋಷ್ ಶಕ್ತಿನಗರ, ಲಿಂಗಪ್ಪ ನಂತೂರು, ಪ್ರೇಮನಾಥ ಜಲ್ಲಿಗುಡ್ಡೆ, ಎಚ್.ಎಂ.ಬಾವ, ವಿಲ್ಲಿ ವಿಲ್ಸನ್, ಸಂತೋಷ್ ಕುಮಾರ್ ಎಸ್.ಆರ್. ಉಪಸ್ಥಿತರಿದ್ದರು.
ತುಳುನಾಡ ರಕ್ಷಣಾ ವೇದಿಕೆ
ಮಂಗಳೂರು: ತುಳುನಾಡ ರಕ್ಷಣಾ ವೇದಿಕೆಯಿಂದ ನಗರದ ಹೊಟೇಲ್ ವುಡ್‌ಲ್ಯಾಂಡ್‌ನಲ್ಲಿ ನಡೆದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಮಂಗಳೂರು ನಗರ ಸಂಚಾರ ಪೊಲೀಸ್ ಉಪವಿಭಾಗದ ಎಸಿಪಿ ಉದಯ್ ಎಂ. ನಾಯಕ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕಾರ್ಮಿಕ ಅಧಿಕಾರಿ ಮೇರಿ, ತುರವೇ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು, ವೇದಿಕೆಯ ಮುಖಂಡರಾದ ಕೆ.ಮುನೀರ್ ಬಾವ, ಪ್ರಶಾಂತ್ ರಾವ್ ಕಡಬ, ಆನಂದ್ ಅಮೀನ್ ಅಡ್ಯಾರ್ ಉಪಸ್ಥಿತರಿದ್ದರು. ಸಿರಾಜ್ ಅಡ್ಕರೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಅಪಘಾತ ವಿಮೆಯ ಕಾರ್ಡನ್ನು ರಿಕ್ಷಾ ಚಾಲಕರಿಗೆ ವಿತರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಸಭೆ-ಸಮಾರಂಭ, ಮೆರವಣಿಗೆ ನಡೆಯಿತು.
ಬೆಳ್ತಂಗಡಿ: ಸಿಐಟಿಯು ಬೆಳ್ತಂಗಡಿ, ಮೇ 3: ಮಾರ್ಕ್ಸ್‌ವಾದಿಗಳು ಹಾಗೂ ಅಂಬೇಡ್ಕರ್ ವಾದಿಗಳ ನಡುವೆ ಒಡಕು ತರುವ ಪ್ರಯತ್ನಗಳು ಇತ್ತೀಚಿನ ದಿನಗಳಲ್ಲಿ ಕೆಲವು ಶಕ್ತಿಗಳಿಂದ ನಡೆಯುತ್ತಿದ್ದು, ಇದು ಯಶಸ್ವಿಯಾಗಲಾರದು. ಮುಂದಿನ ದಿನಗಳಲ್ಲಿ ಮಾರ್ಕ್ಸವಾದಿಗಳು ಹಾಗೂ ಅಂಬೇಡ್ಕರ್ ವಾದಿಗಳು ಒಟ್ಟಾಗಿ ದೇಶದಲ್ಲಿ ಚಳವಳಿಯನ್ನು ಮುನ್ನಡೆಸಬೇಕಾದ ಅಗತ್ಯವಿದೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಕರೆ ನೀಡಿದರು. ಬೆಳ್ತಂಗಡಿಯಲ್ಲಿ ಸಿಐಟಿಯು ಹಾಗೂ ಇತರೆ ಸಂಘಟನೆಗಳ ನೇತೃತ್ವದಲ್ಲಿ ನಡೆದ ಮೇ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಪ್ರೊ.ಪಿ.ಟಿ ಅಂಟ್ಯನಿ ಕಾರ್ಯಕ್ರಮ ಉದ್ಘಾಟಿಸಿದರು. ಸಿಐಟಿಯು ತಾಲೂಕು ಅಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ವಸಂತ ನಡ, ಬೀಡಿ ಕಾರ್ಮಿಕರ ಸಂಘಟನೆಯ ಮುಖಂಡರುಗಳಾದ ನೆಬಿಸಾ, ರೋಹಿಣಿ, ಈಶ್ವರಿ, ಜಯರಾಮ ಮಯ್ಯ, ವಿವಿಧ ಸಂಘಟನೆಗಳ ಮುಖಂಡರುಗಳಾದ ಲೋಕೇಶ್ ಕುದ್ಯಾಡಿ, ಮಹೇಶ್, ದೇವಕಿ, ಶ್ಯಾಮರಾಜ್, ಕಿರಣ ಪ್ರಭ, ಧನಂಜಯ ಪಟ್ರಮೆ ಮತ್ತಿತರರು ಉಪಸ್ಥಿತರಿದ್ದರು. ಶೇಖರ ಲಾಯಿಲ ವಂದಿಸಿದರು.
ದ.ಕ.ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ
ಮಂಗಳೂರು: ಬಂಡವಾಳಶಾಹಿಗಳ ಬೆಂಬಲದಿಂದ ಅಧಿಕಾರ ಪಡೆದು ಅವರನ್ನು ಬೆಂಬಲಿಸುತ್ತಿರುವವರಿಂದ ಕಾರ್ಮಿಕರ ಹಿತರಕ್ಷಣೆ ಸಾಧ್ಯವಿದೆಯೇ? ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಪ್ರಶ್ನಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್‌ನ ಕಾರ್ಮಿಕ ಘಟಕದ ವತಿಯಿಂದ ನಗರದ ರವೀಂದ್ರ ಕಲಾಭವನದ ಸಭಾಂಗಣದಲ್ಲಿ ನಡೆದ ಕಾರ್ಮಿಕ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಲೋಕೇಶ್ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಪ್ರಭಾರ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಕಾಂಗ್ರೆಸ್ ಘಟಕದ ಪದಾಧಿಕಾರಿಗಳಾದ ಪದ್ಮನಾಭ ನರಿಂಗಾನ, ಕೆ. ಅಶ್ರಫ್, ಹೇಮನಾಥ ಶೆಟ್ಟಿ, ಎಂ.ಎಸ್.ಮುಹಮ್ಮದ್, ಶಾಹುಲ್‌ಹವಿ
ುೀದ್, ಅನಿತಾ ಹೇಮನಾಥ ಶೆಟ್ಟಿ, ನಝೀರ್ ಮಠ, ಮುಹಮ್ಮದ್‌ರಫಿ, ಜಯಂತಿ, ಮುಹಮ್ಮದ್ ಅಶ್ರಫ್ ಮೊದಲಾದವರು ಉಪಸ್ಥಿತರಿದ್ದರು.ಕಾರ್ಮಿಕರಾದ ಪರಮೇಶ್ವರ, ಆಲಿಯಬ್ಬ ಮೂಡುಶೆಡ್ಡೆ, ಭೋಜಕೋಟ್ಯಾನ್, ಅಪ್ಪುಸ್ವಾಮಿ, ಜಯಂತಿ ಮೊದಲಾದವರು ಉಪಸ್ಥಿತರಿ ದ್ದರು. ಹುಸೈನ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.
ಮೂಡುಬಿದಿರೆ: ಸಿಐಟಿಯು
ಮೂಡುಬಿದಿರೆ: ನಮಗೆ ಸಮಾನತೆ ಸಿಗಬೇಕೆಂಬ ಉದ್ದೇಶದಿಂದ ಸರಕಾರಗಳನ್ನು ಆಯ್ಕೆ ಮಾಡಲಾಗಿದೆ. ಆದರೆ ನಮ್ಮನ್ನಾಳುವ ಸರಕಾರಗಳು ಕಾರ್ಮಿಕ ವಿರೋಧಿ ನೀತಿಯನ್ನು ಜಾರಿಗೆ ತರುವ ಮೂಲಕ ಮತ್ತೊಮ್ಮೆ ಕಾರ್ಮಿಕರನ್ನು ಗುಲಾಮಗಿರಿಯ ಸಂಕೋಲೆಯಲ್ಲಿ ಬಂಧಿಸಲು ಪ್ರಯತ್ನಿಸುತ್ತಿದೆ ಎಂದು ಸಿಐಟಿಯು ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಕಾಂ.ಎಸ್.ವರಲಕ್ಷ್ಮೀ ಹೇಳಿದರು.
ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಅಂಗವಾಗಿ ಮೂಡುಬಿದಿರೆಯಲ್ಲಿ ಸಿಐಟಿಯು ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಯಾದವ ಶೆಟ್ಟಿ, ಸಿಐಟಿಯು ಜಿಲ್ಲಾಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ, ಸಿಐಟಿಯು ನಾಯಕಿ ರಮಣಿ, ವಲಯಾಧ್ಯಕ್ಷ ಶಂಕರ ವಾಲ್ಪಾಡಿ, ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಸೀತಾರಾಮ ಶೆಟ್ಟಿ, ರೈತ ಸಂಘದ ಅಧ್ಯಕ್ಷ ಸುಂದರ ಶೆಟ್ಟಿ, ಗೇರು ಉದ್ಯಮ ಕಾರ್ಮಿಕರ ಸಂಘದ ಅಧ್ಯಕ್ಷೆ ಯಶೋದಾ, ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವಿಜಯಾ ಉಪಸ್ಥಿತರಿದ್ದರು. ಸಿಐಟಿಯು ವಲಯ ಪ್ರಧಾನ ಕಾರ್ಯದರ್ಶಿ ರಾಧಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅಕ್ಷರ ದಾಸೋಹದ ಅಧ್ಯಕ್ಷೆ ಗಿರಿಜಾ ವಂದಿಸಿದರು.
ಸುಳ್ಯ: ಕಟ್ಟಡ ನಿರ್ಮಾಣ ಕಾರ್ಮಿಕರ ಫೆಡರೇಶನ್
ಸುಳ್ಯ: ಇನ್ನೊಬ್ಬರ ಸಂಪತ್ತನ್ನು ಹೆಚ್ಚಿಸುವ ಕೆಲಸವನ್ನು ಕಾರ್ಮಿಕರು ಮಾಡುತ್ತಾ ಬರುತ್ತಿದ್ದಾರೆ. ಆದರೆ ಅವರ ಸಂಪತ್ತು ಹೆಚ್ಚುವುದೇ ಇಲ್ಲ. ಕಾರ್ಮಿಕ ತನ್ನ ಶಕ್ತಿಯನ್ನು ನಿತ್ಯ ನಷ್ಟ ಮಾಡಿಕೊಳ್ಳುತ್ತಾ ಬರುತ್ತಿದ್ದಾನೆ. ಆದರೆ ಆತನಿಗೆ ಶಕ್ತಿ ತುಂಬುವ ಕೆಲಸ ನಡೆಯುವುದಿಲ್ಲ ಎಂದು ಕಾರ್ಮಿಕ ಸಂಘಟನೆಯ ಜಿಲ್ಲಾ ಅಧ್ಯಕ್ಷ ಬಿ.ಎಂ.ಭಟ್ ಹೇಳಿದರು.
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್‌ನ ಸುಳ್ಯ ಘಟಕದ ಆಶ್ರಯದಲ್ಲಿ ನಡೆದ ಕಾರ್ಮಿಕ ದಿನಾಚರಣೆಯ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.ಸಭಾಧ್ಯಕ್ಷತೆಯನ್ನು ಸಂಘಟನೆಯ ಅಧ್ಯಕ್ಷ ಕೆ.ಪಿ.ಜಾನಿ ಕಲ್ಲುಗುಂಡಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ದೇವಚಳ್ಳದ ರಘು ಮೇಸ್ತ್ರಿಯವರನ್ನು ಕಾರ್ಮಿಕ ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು. ವರ್ತಕ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ತಾಲೂಕು ಇಂಜಿನಿಯರ್ ಅಸೋಸಿಯೇಶನ್ ಅಧ್ಯಕ್ಷ ಜೀವನ್ ನಾರ್ಕೋಡು, ಸಂಘಟನೆ ನಗರ ಸಮಿತಿ ಅಧ್ಯಕ್ಷ ವಿಶ್ವನಾಥ ನೆಲ್ಲಿ ಬಂಗಾರಡ್ಕ, ಕಟ್ಟಡ ಸಮಿತಿ ಗೌರವಾಧ್ಯಕ್ಷ ನೆಲ್ಸನ್ ಪಿ.ವಿ., ಕಟ್ಟಡ ಸಮಿತಿ ಅಧ್ಯಕ್ಷ ನಾಗರಾಜ ಮೇಸ್ತ್ರಿ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶಿವರಾಮ ಗೌಡ, ಕೋಶಾಧಿಕಾರಿ ಬಿಜು ಅಗಸ್ಟಿನ್ ಉಪಸ್ಥಿತರಿದ್ದರು. ಶರತ್ ಕಲ್ಲುಗುಂಡಿ ಕಾರ್ಯಕ್ರಮ ನಿರೂಪಿಸಿದರು.
ಮಂಗಳೂರು: ಸಿಐಟಿಯು ಮಂಗಳೂರು: ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ನಗರದ ಎನ್‌ಜಿಒ ಸಭಾಂಗಣದಲ್ಲಿ ಕಾರ್ಮಿಕರ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿದ ಸಿಐಟಿಯು ಜಿಲ್ಲಾ ಅಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ, ದೇಶದಲ್ಲಿ ಅಧಿಕಾರಕ್ಕೆ ಬಂದಿರುವ ನರೇಂದ್ರ ಮೋದಿ ಸರಕಾರ ಕಾರ್ಮಿಕ ವರ್ಗವನ್ನು ಶೋಷಣೆ ಮಾಡುತ್ತಿದ್ದು, ಕಾರ್ಮಿಕ ನೀತಿಯನ್ನು ಸಡಿಲಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.ಸಿಐಟಿಯು ನಗರ ಸಮಿತಿ ಅಧ್ಯಕ್ಷೆ ಜಯಂತಿ ಬಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಮಿಕ ಮುಖಂಡರುಗಳಾದ ಸುನೀಲ್ ಕುಮಾರ್ ಬಜಾಲ್, ಭಾರತಿ ಬೋಳಾರ್, ಯೋಗೀಶ್ ಜೆಪ್ಪಿನಮೊಗರು, ಸಂತೋಷ್ ಶಕ್ತಿನಗರ, ಲಿಂಗಪ್ಪ ನಂತೂರು, ಪ್ರೇಮನಾಥ ಜಲ್ಲಿಗುಡ್ಡೆ, ಎಚ್.ಎಂ.ಬಾವ, ವಿಲ್ಲಿ ವಿಲ್ಸನ್, ಸಂತೋಷ್ ಕುಮಾರ್ ಎಸ್.ಆರ್. ಉಪಸ್ಥಿತರಿದ್ದರು.