ಕಾನೂನು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ಮಂಗಳೂರು, ಮೇ 4: ಜಮಾಅತೆ ಇಸ್ಲಾಮೀ ಹಿಂದ್‌ನ ಅಂಗ ಸಂಸ್ಥೆಯಾದ ಹ್ಯೂಮನ್ ವೆಲ್ಫೇರ್ ಫೌಂಡೇಶನ್ ದೆಹಲಿ (ವಿಶನ್ 2016) ಯೋಜನೆಯ ಅಂಗವಾಗಿ ಮುಸ್ಲಿಮರನ್ನು ಕಾನೂನು ಹಾಗೂ ಪತ್ರಿಕೋದ್ಯಮ ಕ್ಷೇತ್ರಗಳ ಕಲಿಕೆಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಂಗಳೂರಿನ 17 ಮಂದಿ ಕಾನೂನು ವಿದ್ಯಾರ್ಥಿನಿಯರಿಗೆ ಒಟ್ಟು 1 ಲಕ್ಷ 70 ಸಾವಿರ ರೂ. ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.
ಮಂಗಳೂರಿನ ಹಿದಾಯತ್ ಸೆಂಟರ್‌ನಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಸ್ಥಾನೀಯ ಅಧ್ಯಕ್ಷ ಮುಹಮ್ಮದ್ ಕುಂಞಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರಿನ ನ್ಯಾಯವಾದಿಗಳಾದ ಸರ್ಫರಾಝ್, ಅಶ್ರೀನ ಮತ್ತು ಎಸ್‌ಐಒ ದ.ಕ. ಜಿಲ್ಲಾಧ್ಯಕ್ಷ ರಫೀಕ್ ಬೀದರ್ ಭಾಗವಹಿಸಿದ್ದರು. ಎಸ್‌ಐಒ ತಾಲೂಕು ಅಧ್ಯಕ್ಷ ಆಶೀಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Next Story





