Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೊಲೀಸ್ ಅಧಿಕಾರಿಯಿಂದ ದೈಹಿಕ ದೌರ್ಜನ್ಯ...

ಪೊಲೀಸ್ ಅಧಿಕಾರಿಯಿಂದ ದೈಹಿಕ ದೌರ್ಜನ್ಯ ಆರೋಪ

ಸಂತ್ರಸ್ತೆಯಿಂದ ಮಹಿಳಾ ದೌರ್ಜನ್ಯ ತಡೆ ಸಮಿತಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ4 May 2016 10:05 PM IST
share

ಬೆಂಗಳೂರು, ಮೇ 4: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಪೊಲೀಸ್ ಇನ್ಸ್‌ಪೆಕ್ಟರ್ ಸತೀಶ್ ವಿರುದ್ಧ ಅವರ ಪತ್ನಿ ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ ತಡೆ ಸಮಿತಿಗೆ ದೂರು ನೀಡಿದ್ದಾರೆ.

ಬುಧವಾರ ಶಾಸಕರ ಭವನದಲ್ಲಿ ಸಮಿತಿಯ ಅಧ್ಯಕ್ಷ ವಿ.ಎಸ್.ಉಗ್ರಪ್ಪರನ್ನು ಭೇಟಿ ಮಾಡಿದ ಸಂತ್ರಸ್ತ ಮಹಿಳೆ ಮಾನಸಾ, ಪೊಲೀಸ್ ಇನ್ಸ್‌ಪೆಕ್ಟರ್ ಆಗಿರುವ ತನ್ನ ಪತಿ ನನ್ನ ಮೇಲೆ ದೈಹಿಕ ಹಲ್ಲೆ ನಡೆಸುತ್ತಿದ್ದಾರೆ. ಆದುದರಿಂದ, ನನಗೆ ನ್ಯಾಯ ದೊರಕಿಸಿಕೊಡಬೇಕೆಂದು ಮನವಿ ಸಲ್ಲಿಸಿದ್ದಾರೆ.

 ಮದುವೆ ಸಂದರ್ಭದಲ್ಲಿ ವರದಕ್ಷಿಣೆ ರೂಪವಾಗಿ 3 ಲಕ್ಷ ರೂ.ನಗದು ಹಾಗೂ 300 ಗ್ರಾಂ ಚಿನ್ನಾಭರಣವನ್ನು ಸತೀಶ್‌ಗೆ ನೀಡಲಾಗಿತ್ತು. ಆದರೆ, ಇದೀಗ ಮತ್ತೆ ವರದಕ್ಷಿಣೆಗಾಗಿ ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಾನಸಾ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಮಾನಸಾ ನೀಡಿದ ದೂರನ್ನು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಗ್ರಪ್ಪ, ಎಂ.ಟೆಕ್ ಪದವೀಧರೆಯಾಗಿರುವ ಮಾನಸಾ ಅವರ ಪತಿ ಪೊಲೀಸ್ ಇನ್ಸ್‌ಪೆಕ್ಟರ್ ಸತೀಶ್ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಅಕ್ರಮ ಸಂಬಂಧ ಇಟ್ಟುಕೊಂಡಿರುವ ಬಗ್ಗೆ ದೂರು ನೀಡಿದ್ದಾರೆ ಎಂದರು.

ಜನರನ್ನು ರಕ್ಷಣೆ ಮಾಡಬೇಕಾದ ಪೊಲೀಸ್ ಅಧಿಕಾರಿಗಳು ತಮ್ಮ ಕುಟುಂಬದವರಿಗೆ ಕಿರುಕುಳ ನೀಡುವುದು ಎಷ್ಟರಮಟ್ಟಿಗೆ ಸರಿ. ಇಂತಹ ಅಧಿಕಾರಿಗಳಿಗೆ ಕಾನೂನು ರೀತಿ ಶಿಕ್ಷೆಯಾಗಬೇಕು. ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಅವರೊಂದಿಗೆ ಮಾತನಾಡಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಅವರು ಹೇಳಿದರು.

ನನ್ನ ಪತಿಯು ನನಗೆ ನಿತ್ಯವೂ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದಾರೆ. ಕಳೆದ ಎರಡು ವರ್ಷದಿಂದ ನೊಂದು ಹೋಗಿದ್ದೇನೆ. ಅಲ್ಲದೆ, ನನ್ನ ಪತಿಗೆ ಚನ್ನರಾಯಪಟ್ಟಣದ ಟೌನ್ ಪೊಲೀಸ್‌ಠಾಣೆಯ ಪೇದೆ ಪುನೀತಾ ಜೊತೆ ಅಕ್ರಮ ಸಂಬಂಧವಿದೆ. ಅವರು ನನ್ನ ಪತಿಗೆ ದಿನಕ್ಕೆ ಕನಿಷ್ಠ 20 ಬಾರಿಯಾದರೂ ದೂರವಾಣಿ ಕರೆ ಮಾಡುತ್ತಾರೆ ಎಂದು ಸಂತ್ರಸ್ತ ಮಹಿಳೆ ಮಾನಸಾ ಆರೋಪಿಸಿದರು.

ನನ್ನ ಪತಿ ಬೆದರಿಕೆ ಸ್ವಭಾವದವರು. ಆದರೆ, ಅವರಿಗೆ ಪುನೀತಾ ಮತ್ತು ಕಂದಾಯ ನಿರೀಕ್ಷಕ ಮುಕುಂದ್ ಎಂಬವರು ಪ್ರೇರೇಪಿಸುತ್ತಿದ್ದಾರೆ. ಅಲ್ಲದೆ, ಸತೀಶ್‌ಗೆ ವಿಚ್ಛೇದನ ನೀಡಬೇಕು. ಇಲ್ಲದಿದ್ದರೆ ಕೊಲೆ ಮಾಡಿಸುತ್ತೇವೆ ಎಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ಅವರು ದೂರಿದರು.

ನನ್ನ ಪತಿಯ ಮನೆಯವರು ಅವರಿಗೆ ಬೆಂಬಲ ನೀಡುತ್ತಿದ್ದಾರೆ. 50 ಲಕ್ಷ ರೂ.ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದಾರೆ. ಅಲ್ಲದೆ, ತನಗೆ ಎರಡು ಬಾರಿ ಹತ್ಯೆ ಮಾಡುವ ಪ್ರಯತ್ನವನ್ನು ಮಾಡಿದ್ದಾರೆ ಎಂದು ಮಾನಸಾ ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X