ಮೇ 5: ಶಾಸಕ ಲೋಬೊ ನೇತೃತ್ವದಲ್ಲಿ ದೇವಸ್ಥಾನ, ಚರ್ಚ್, ಮಸೀದಿಯಲ್ಲಿ ಮಳೆಗಾಗಿ ಪ್ರಾರ್ಥನೆ
ಮಂಗಳೂರು, ಮೇ 4: ನಾಡಿನಲ್ಲಿ ತಲೆದೋರಿರುವ ನೀರಿನ ಸಮಸ್ಯೆಯ ಹಿನ್ನೆಲೆಯಲ್ಲಿ ವರುಣನ ಕೃಪೆಯಿಂದ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಶಾಸಕ ಜೆ.ಆರ್. ಲೋಬೊ ನೇತೃತ್ವದಲ್ಲಿ ಮಂಗಳೂರು ನಗರ ಬ್ಲಾಕ್ ಮತ್ತು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಮಳೆಗಾಗಿ ವಿಶೇಷ ಪ್ರಾರ್ಥನೆ ನಡೆಯಲಿದೆ.
ಬೆಳಗ್ಗೆ 8 ಗಂಟೆಗೆ ಮಂಗಳಾದೇವಿ ದೇವಸ್ಥಾನದಲ್ಲಿ, ಬೆಳಗ್ಗೆ 9 ಗಂಟೆಗೆ ಕೊಡಿಯಾಲ್‌ಬೈಲ್‌ನಲ್ಲಿರುವ ಬಿಷಪ್ ಹೌಸ್‌ನಲ್ಲಿ ಹಾಗೂ 10 ಗಂಟೆಗೆ ಕುದ್ರೋಳಿಯ ಜಾಮೀಯಾ ಮಸೀದಿಯಲ್ಲಿ ಪ್ರಾರ್ಥನೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story





