ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ವಿತರಣೆ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
ಮಂಗಳೂರು, ಮೇ 4: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ತೀವ್ರತರನಾದ (ಶೇ.75 ಅಂಗವಿಕಲತೆ ಹೊಂದಿರುವ) ದೈಹಿಕ ವಿಕಲ ಚೇತನರಿಗೆ ಶಿಕ್ಷಣ ಹಾಗೂ ಉದ್ಯೋಗ ಮಾಡುತ್ತಿರುವ ಸ್ಥಳಗಳಿಗೆ ಹೋಗಿ ಬರಲು ಅನುಕೂಲವಾಗುವಂತೆ ಯಂತ್ರಚಾಲಿತ ದ್ವಿಚಕ್ರವಾಹನವನ್ನು ಒದಗಿಸುವ ಯೋಜನೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಮೇ 30ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿಯ ದೂ.ಸಂ.0824-2458173, 2455999ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
·
Next Story