ಎನ್ನೆಸ್ಸೆಸ್ ದೈನಂದಿನ ಚಟುವಟಿಕೆಗಳ ಸಮಾರೋಪ

ಉಡುಪಿ, ಮೇ 4: ವಿದ್ಯಾರ್ಥಿಗಳಿಗೆ ತಮ್ಮ ಸೃಜನಶೀಲ ಪ್ರತಿಭೆಗಳನ್ನು ತೋರಿಸಲು ಸಾಕಷ್ಟು ಅವಕಾಶಗಳನ್ನು ಇತ್ತೀಚೆಗೆ ಕಾಲೇಜುಗಳು ಕಲ್ಪಿಸಿಕೊಡುತ್ತಿದ್ದು, ಅದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿಜಯಾ ಬ್ಯಾಂಕ್ ನಿವೃತ್ತ ಹಿರಿಯ ಪ್ರಬಂಧಕ ಹಾಗೂ ರಾಜಕೀಯ ಮುಖಂಡ ಲೂವಿಸ್ ಲೋಬೊ ಹೇಳಿದ್ದಾರೆ.
ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಪ್ರಾಂಶುಪಾಲ ಡಾ.ನೇರಿ ಕರ್ನೇಲಿಯೊ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಎನ್ನೆಸ್ಸೆಸ್ ಅಧಿಕಾರಿಗಳಾದ ಅಂಪಾರು ನಿತ್ಯಾನಂದ ಶೆಟ್ಟಿ, ರೊನಾಲ್ಡ್ ರೊಡ್ರಿಗಸ್ ಉಪಸ್ಥಿತರಿದ್ದರು. ಸುಶ್ಮಿತಾ ಸ್ವಾಗತಿಸಿದರು. ಪಾವನಾ ವಂದಿಸಿದರು. ನಿರ್ಮಲಾ ಕಾರ್ಯಕ್ರಮ ನಿರೂಪಿಸಿದರು.
Next Story





