ಟಿಪ್ಪರ್ ಢಿಕ್ಕಿ; ಬೈಕ್ ಸವಾರ ಸಾವು
ಮಣಿಪಾಲ, ಮೇ 4: ಉಡುಪಿಯಿಂದ ಮಣಿಪಾಲದತ್ತ ತೆರಳುತ್ತಿದ್ದ ಬೈಕ್‌ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ಪೂರ್ವಾಹ್ನ 11:30ಕ್ಕೆ ಮಣಿಪಾಲ ಸೆಕೆಂಡ್‌ಹ್ಯಾಂಡ್ ಬಜಾರ್ ಬಳಿ ನಡೆದಿದೆ.
ಮೃತ ಬೈಕ್ ಸವಾರನನ್ನು ಮಣಿಪಾಲದ ಶಂಕರನಾಯಕ್ ಎಂದು ಗುರುತಿಸಲಾಗಿದೆ.
ಇವರು ತನ್ನ ಪುತ್ರ ಶಶಾಂಕ್‌ನನ್ನು ಬೈಕ್‌ನಲ್ಲಿ ಕುಳ್ಳಿರಿಸಿಕೊಂಡು ತೆರಳುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್ ಢಿಕ್ಕಿ ಹೊಡೆಯಿತು. ಇದರಿಂದ ತಂದೆ-ಮಗ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಬಳಿಕ ಮಣಿಪಾಲ ಆಸ್ಪತ್ರೆಯಲ್ಲಿ ಶಂಕರನಾಯಕ್ ಮೃತಪಟ್ಟರು ಎಂದು ಪ್ರಕರಣ ದಾಖಲಿಸಿಕೊಂಡಿರುವ ಮಣಿಪಾಲ ಪೊಲೀಸರು ತಿಳಿಸಿದ್ದಾರೆ.
Next Story





