Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾನ್‌ಗೆ ಸಂಬಂಧಿಸಿ ಅಮೆರಿಕದಿಂದ...

ಇರಾನ್‌ಗೆ ಸಂಬಂಧಿಸಿ ಅಮೆರಿಕದಿಂದ ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆ

120 ಅಲಿಪ್ತ ದೇಶಗಳ ಆರೋಪ

ವಾರ್ತಾಭಾರತಿವಾರ್ತಾಭಾರತಿ6 May 2016 11:09 PM IST
share

ವಿಶ್ವಸಂಸ್ಥೆ, ಮೇ 6: ಇರಾನ್‌ನ ಮುಟ್ಟುಗೋಲು ಹಾಕಲಾದ ಎರಡು ಬಿಲಿಯನ್‌ಡಾಲರ್ (ಸುಮಾರು 13,285 ಕೋಟಿ ರೂಪಾಯಿ) ವೌಲ್ಯದ ಸೊತ್ತುಗಳನ್ನು ಬಳಸಿ ಆ ದೇಶಕ್ಕೆ ಸಂಬಂಧಿಸಿದ ದಾಳಿಗಳ ಸಂತ್ರಸ್ತರಿಗೆ ಪರಿಹಾರ ನೀಡಬಹುದಾಗಿದೆ ಎಂಬ ಅಮೆರಿಕದ ಸುಪ್ರೀಂ ಕೋರ್ಟ್‌ನ ತೀರ್ಪು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಿದೆ ಎಂದು ಇರಾನ್ ನೇತೃತ್ವದ 120 ದೇಶಗಳ ಅಲಿಪ್ತ ಚಳವಳಿ ಆರೋಪಿಸಿದೆ.
ಅಲಿಪ್ತ ಚಳವಳಿಯ ಸಮನ್ವಯ ಬ್ಯೂರೊ ಈ ಸಂಬಂಧ ಹೇಳಿಕೆಯೊಂದನ್ನು ಹೊರಡಿಸಿದೆ.

ಇದಕ್ಕೂ ಮೊದಲು, ಕಳೆದ ವಾರ ತನ್ನ ನಿಧಿಗಳನ್ನು ರಕ್ಷಿಸುವುದಕ್ಕಾಗಿ ಅಮೆರಿಕ ಮತ್ತು ತನ್ನ ನಡುವಿನ ವಿವಾದಲ್ಲಿ ಮಧ್ಯಪ್ರವೇಶಿಸುವಂತೆ ಇರಾನ್ ವಿಶ್ವಸಂಸ್ಥೆಗೆ ಮನವಿ ಮಾಡಿತ್ತು. ‘‘ಈ ತೀರ್ಪು ನ್ಯಾಯಾಲಯದ ಆದೇಶದ ಸೋಗಿನಲ್ಲಿರುವ ದರೋಡೆಯಾಗಿದೆ’’ ಎಂದು ಇರಾನ್‌ನ ವಿದೇಶ ಸಚಿವ ಮುಹಮ್ಮದ್ ಜಾವೇದ್ ಝರೀಫ್ ಬಣ್ಣಿಸಿದ್ದಾರೆ.
ಸರಕಾರಗಳು ಮತ್ತು ಅವುಗಳ ಸಂಸ್ಥೆಗಳಿಗೆ ನೀಡಲಾಗಿರುವ ಸಾರ್ವಭೌಮ ವಿನಾಯಿತಿಯ ರದ್ದತಿ ಅಮೆರಿಕದ ಅಂತಾರಾಷ್ಟ್ರೀಯ ಮತ್ತು ಒಪ್ಪಂದ ಬದ್ಧತೆಗಳ ಉಲ್ಲಂಘನೆಯಾಗಿದೆ ಎಂದು ಅಭಿವೃದ್ಧಿಶೀಲ ದೇಶಗಳೇ ಹೆಚ್ಚಿನ ಸದಸ್ಯರಾಗಿರುವ ಅಲಿಪ್ತ ಚಳವಳಿ ಹೇಳಿದೆ.

‘‘ಸರಕಾರಗಳಿಗೆ ನೀಡುವ ವಿನಾಯಿತಿ’’ಯ ತತ್ವಗಳನ್ನು ಗೌರವಿಸುವಂತೆ ಅದು ಅಮೆರಿಕ ಸರಕಾರಕ್ಕೆ ಕರೆ ನೀಡಿದೆ ಹಾಗೂ ಇದನ್ನು ಮಾಡಲು ಅಮೆರಿಕ ವಿಫಲವಾದರೆ ಅಂತಾರಾಷ್ಟ್ರೀಯ ಬಾಂಧವ್ಯಗಳಲ್ಲಿ ಏರುಪೇರು ಮತ್ತು ಅಸ್ಥಿರತೆ ಸೇರಿದಂತೆ ಪ್ರತಿಕೂಲ ಪರಿಣಾಮಗಳಾಗಲಿವೆ ಎಂದು ಅಲಿಪ್ತ ಚಳವಳಿ ಎಚ್ಚರಿಸಿದೆ.

ಹೀಗೆ ಮಾಡಲು ಅಮೆರಿಕ ವಿಫಲವಾದರೆ, ಅದು ಅಂತಾರಾಷ್ಟ್ರೀಯ ಕಾನೂನಿನ ಆಡಳಿತವನ್ನು ಕಡೆಗಣಿಸಿದಂತಾಗುತ್ತದೆ ಹಾಗೂ ಅಂತಾರಾಷ್ಟ್ರೀಯ ತಪ್ಪು ಕೃತ್ಯವನ್ನು ಮಾಡಿದಂತೆ ಆಗುತ್ತದೆ ಎಂಬುದಾಗಿಯೂ ಅದು ಹೇಳಿದೆ.

ಲೆಬನಾನ್‌ನಲ್ಲಿ 1983ರಲ್ಲಿ ನಡೆದ ಬಾಂಬ್‌ಸ್ಫೋಟ ಹಾಗೂ ಇರಾನ್ ನಡೆಸಿದೆಯೆಂದು ಹೇಳಲಾದ ಇತರ ದಾಳಿಗಳ ಸಂತ್ರಸ್ತರ ಕುಟುಂಬಗಳಿಗೆ ಇರಾನ್‌ನ ಮುಟ್ಟುಗೋಲು ಹಾಕಲಾದ 2 ಬಿಲಿಯ ಡಾಲರ್ ಸೊತ್ತುಗಳಿಂದ ಪರಿಹಾರ ಕೊಡಬಹುದಾಗಿದೆ ಎಂಬುದಾಗಿ ಅಮೆರಿಕದ ಸುಪ್ರೀಂ ಕೋರ್ಟ್‌ಣಎಪ್ರಿಲ್ 23ರಂದು ತೀರ್ಪು ನೀಡಿತ್ತು.
ಸಿರಿಯ: 48 ಗಂಟೆಗಳ ಯುದ್ಧವಿರಾಮ ಜಾರಿ
ಅಲೆಪ್ಪೊ (ಸಿರಿಯ), ಮೇ 6: ಸಿರಿಯದ ಸಂಘರ್ಷಪೀಡಿತ ಎರಡನೆ ನಗರ ಅಲೆಪ್ಪೊದಲ್ಲಿ ಗುರುವಾರ 48 ಗಂಟೆಗಳ ಅಸ್ಥಿರ ಯುದ್ಧವಿರಾಮ ಜಾರಿಗೆ ಬಂದಿದೆ. ಅಧ್ಯಕ್ಷ ಬಶರ್ ಅಲ್-ಅಸದ್ ಮತ್ತು ಬಂಡುಕೋರ ಗುಂಪುಗಳು ಹೆಚ್ಚುತ್ತಿರುವ ರಾಜತಾಂತ್ರಿಕ ಒತ್ತಡಕ್ಕೆ ಮಣಿದ ಹಿನ್ನೆಲೆಯಲ್ಲಿ ಯುದ್ಧಕ್ಕೆ ತಾತ್ಕಾಲಿಕ ತಡೆ ಬಿದ್ದಿದೆ.
ನಿಟ್ಟುಸಿರು ಬಿಟ್ಟ ನಿವಾಸಿಗಳು ಎರಡು ವಾರಗಳ ಭೀಕರ ಕಾಳಗದ ಬಳಿಕ ರಸ್ತೆಗಳಿಗೆ ಬಂದರು.
ಗುರುವಾರ ಮುಂಜಾನೆ 1 ಗಂಟೆಯಿಂದ ಯುದ್ಧವಿರಾಮ ಜಾರಿಗೆ ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X