Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಚಿವ ಎಚ್.ಕೆ.ಪಾಟೀಲ್ ರಾಜೀನಾಮೆಗೆ...

ಸಚಿವ ಎಚ್.ಕೆ.ಪಾಟೀಲ್ ರಾಜೀನಾಮೆಗೆ ಶೆಟ್ಟರ್ ಆಗ್ರಹ

ನೀರಿನ ಪ್ರಯೋಗಾಲಯ ಟೆಂಡರ್ ಅವ್ಯವಹಾರ

ವಾರ್ತಾಭಾರತಿವಾರ್ತಾಭಾರತಿ6 May 2016 11:39 PM IST
share
ಸಚಿವ ಎಚ್.ಕೆ.ಪಾಟೀಲ್ ರಾಜೀನಾಮೆಗೆ ಶೆಟ್ಟರ್ ಆಗ್ರಹ

ಬೆಂಗಳೂರು, ಮೇ 6: ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ ಹಾಗೂ ನೀರಿನ ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ ಟೆಂಡರ್‌ನಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿರುವ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿನ ತನ್ನ ಕೊಠಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಈ ಅವ್ಯವಹಾರಗಳ ಬಗ್ಗೆ ನ್ಯಾಯಾಂಗ ತನಿಖೆ ಸೇರಿದಂತೆ ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಟೆಂಡರ್ ಗೋಲ್‌ಮಾಲ್: ಗ್ರಾಮೀಣ ಪ್ರದೇಶಗಳಲ್ಲಿನ ನೀರಿನ ಪರೀಕ್ಷೆಗೆ 176 ತಾಲೂಕುಗಳಲ್ಲಿ ಪ್ರಯೋಗಾಲಯ ಸ್ಥಾಪಿಸಲು ಒಟ್ಟು 190 ಕೋಟಿ ರೂ. ಮೀಸಲಿಟ್ಟಿದ್ದು, ಟೆಂಡರ್ ಕರೆಯಲಾಗಿದೆ. ಆದರೆ, ಈ ಟೆಂಡರ್ ಪ್ರಕ್ರಿಯೆಯಲ್ಲಿ ಭಾರೀ ಗೋಲ್‌ಮಾಲ್ ನಡೆದಿದೆ ಎಂದು ದಾಖಲೆಗಳನ್ನು ಬಹಿರಂಗಪಡಿಸಿದರು.
ಪ್ರಯೋಗಾಲಯವೇ ಇಲ್ಲದ ‘ಪ್ರಸಾದ ರಾಯ ಪಾಟಿ’ ಎಂಬ ವ್ಯಕ್ತಿಗೆ 80 ತಾಲೂಕುಗಳಲ್ಲಿನ ಗ್ರಾಮ ಗಳ ನೀರಿನ ಪರೀಕ್ಷೆ ಟೆಂಡ ರ್ ನೀಡಲಾಗಿದೆ. ಆದರೆ,ಆತ ಟೆಂಡರ್ ಪಡೆದ ಬಳಿಕ ಕಂಪೆನಿ ಸ್ಥಾಪಿಸಿದ್ದು, ಟೆಂಡರ್ ಷರತ್ತು ಸಂಪೂ ರ್ಣ ಉಲ್ಲಂಘನೆಯಾಗಿದೆ. ಇದರಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತ ನಡೆಸಿರುವುದು ಸ್ಪಷ್ಟ ಎಂದು ಗಂಭೀರ ಆರೋಪ ಮಾಡಿದರು.
 ಆ ಬಳಿಕ ಎರಡು ಬಾರಿ 20 ಮತ್ತು 46 ತಾಲೂಕು ಗಳು ಸೇರಿದಂತೆ ಒಟ್ಟು 146 ತಾಲೂಕುಗಳಲ್ಲಿ ನೀರಿನ ಪ್ರಯೋಗಾಲಯ ಘಟಕ ಸ್ಥಾಪನೆಗೆ ಗುತ್ತಿಗೆ ನೀಡಲಾಗಿದೆ. ಆದರೆ, ‘ರೇ ಎನ್ವೈರಾನ್ ಏಜೆನ್ಸಿ’ಗೆ ನೀರಿನ ಪರೀಕ್ಷೆಯ ಜ್ಞಾನವೇ ಇಲ್ಲ ಎಂದು ಜಗದೀಶ್ ಶೆಟ್ಟರ್ ದೂರಿದರು.
7 ಬೋರ್‌ವೆಲ್-30 ಸ್ಯಾಂಪಲ್ಸ್:  ಇಲ್ಲಿನ ಹಾವೇರಿ ಜಿಲ್ಲೆ ರಾಣಿಬೆನ್ನೂರಿನ ಉಕ್ಕುಂದ ಗ್ರಾಮದಲ್ಲಿ ಕೇವಲ 7 ಕೊಳವೆಬಾವಿಗಳಿವೆ. ಆದರೆ, ‘ರೇ ಎನ್ವೈರಾನ್ ಏಜೆನ್ಸಿ’ 30 ನೀರಿನ ಮಾದರಿ(ಸ್ಯಾಂಪಲ್ಸ್)ಗಳನ್ನು ಸಂಗ್ರಹಿಸಿ ವರದಿ ನೀಡಿದೆ. ಒಂದು ನೀರಿನ ಮಾದರಿ ಪರೀಕ್ಷೆಗೆ 950 ರೂ.ನಂತೆ 28,500 ರೂ.ನ ನಕಲಿ ದಾಖಲೆ ಸೃಷ್ಟಿಸಿ ಲೂಟಿ ಮಾಡಿದೆ ಎಂದು ಅವ್ಯವಹಾರವನ್ನು ಬಹಿರಂಗಪಡಿಸಿದರು.
ಇದೇ ರೀತಿಯಲ್ಲಿ ರಾಜ್ಯದಲ್ಲಿನ ವಿವಿಧ ತಾಲೂಕುಗಳಲ್ಲಿ ನೀರಿನ ಪರೀಕ್ಷೆ ನೆಪದಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆಸಿದೆ. ಆ ಹಿನ್ನೆಲೆಯಲ್ಲಿ ಈ ಬಗ್ಗೆ ಸಮಗ್ರ ತನಿಖೆ ಆಗಬೇಕು. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ಕೂಡಲೇ ಸ್ಪಷ್ಟಣೆ ನೀಡಬೇಕೆಂದು ಆಗ್ರಹಿಸಿದರು.
ಉದ್ದೇಶಿತ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆಗೆ 334.88 ಕೋಟಿ ರೂ. ಈವರೆಗೂ ಬಿಡುಗಡೆ ಮಾಡಿದ್ದು, ಆ ಪೈಕಿ 125.80 ಕೋಟಿ ರೂ. ವೆಚ್ಚ ಮಾಡಲಾಗಿದೆ. ಆದರೆ, ರಾಜ್ಯಾದ್ಯಂತ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ಪ್ರಚಾರ ಮಾಡಲಾಗುತ್ತಿದೆ.
ಈ ಘಟಕಗಳ ಸ್ಥಾಪನೆ ಹಾಗೂ ನೀರಿನ ಶುದ್ಧಿಕರಣಕ್ಕೆ ಅಳವಡಿಸಿರುವ ಯಂತ್ರಗಳ ಖರೀದಿಯಲ್ಲಿ ಅವ್ಯವಹಾರ, ಸ್ವಜನಪಕ್ಷಪಾತ ನಡೆದಿರುವುದು ಸ್ಪಷ್ಟ. ಆದುದರಿಂದ ಈ ಬಗ್ಗೆಯೂ ತನಿಖೆ ಆಗಬೇಕು. ಆ ಹಿನ್ನೆಲೆಯಲ್ಲಿ ಸಚಿವ ಎಚ್.ಕೆ. ಪಾಟೀಲ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. ಗೋಷ್ಠಿಯಲ್ಲಿ ಶಾಸಕರಾದ ಎಸ್.ಆರ್.ವಿಶ್ವನಾಥ್, ಡಾ.ಅಶ್ವತ್ಥ್ು ನಾರಾಯಣ, ವಿಜಯ್‌ಕುಮಾರ್ ಉಪಸ್ಥಿತರಿದ್ದರು.

ಶುದ್ಧ ಸುಳು್ಳ
 ಏಳು ಸಾವಿರ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸುವ ವಾಗ್ದಾನ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್, ಮೂರು ವರ್ಷಗಳಲ್ಲಿ ಕೇವಲ 1,189 ಘಟಕಗಳನ್ನಷ್ಟೇ ಸ್ಥಾಪಿಸಿದ್ದಾರೆ. ಆದರೆ, ಎಲ್ಲ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ಶುದ್ಧ ಸುಳ್ಳು ಹೇಳುತ್ತಿದ್ದಾರೆ ಎಂದು ಶೆಟ್ಟರ್ ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X