Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಜಿಪನಡು: ಬಿಸಿಲ ಧಗೆಗೆ ಬತ್ತಿದ ಪುರಾತನ...

ಸಜಿಪನಡು: ಬಿಸಿಲ ಧಗೆಗೆ ಬತ್ತಿದ ಪುರಾತನ ಕೆರೆ!

ಹೂಳೆತ್ತಿದರೆ ಸಿಗಲಿದೆ ನೀರ ಸೆಲೆ

ವಾರ್ತಾಭಾರತಿವಾರ್ತಾಭಾರತಿ6 May 2016 11:56 PM IST
share
ಸಜಿಪನಡು: ಬಿಸಿಲ ಧಗೆಗೆ ಬತ್ತಿದ ಪುರಾತನ ಕೆರೆ!

ಇಮ್ತಿಯಾಝ್ ಶಾ, ತುಂಬೆ

ಬಂಟ್ವಾಳ, ಮೇ 6 : ದಿನೇ ದಿನೇ ಹೆಚ್ಚುತ್ತಿರುವ ಬಿಸಿಲ ಧಗೆಗೆ ಸಜಿಪನಡು ಗ್ರಾಮದ ಮುಳ್ಳಿಂಜೆಯ ಕೊಲ್ಯ ಎಂಬಲ್ಲಿರುವ ಪುರಾತನ ಕೆರೆಯಲ್ಲಿ ದಶಕದ ಬಳಿಕ ಇದೇ ಮೊದಲ ಬಾರಿಗೆ ಪೂರ್ತಿಯಾಗಿ ನೀರು ಬತ್ತಿಹೋಗಿದು,್ದ ಕೆರೆ ನೀರನ್ನು ಅವಲಂಬಿಸಿದವರು ನೀರಿಗಾಗಿ ಬವ ಣೆಪಡುವಂತಾಗಿದೆ. ಸಜಿಪನಡು ಗ್ರಾಪಂ ವ್ಯಾಪ್ತಿಯ ಸುಮಾರು 24 ಸೆಂಟ್ಸ್ ವಿಸ್ತೀ ರ್ಣವಿರುವ ಈ ಪುರಾತನ ಕೆರೆ ಯಲ್ಲಿ ನೀರು ಪೂರ್ತಿಯಾಗಿ ಬತ್ತುವುದು ಅಪರೂಪ. ಹಾಗಾಗಿ ಸ್ಥಳೀಯ ಕೃಷಿಕರು ಹಾಗೂ ನಾಗರಿಕರು ನೀರಿನ ಸಮಸ್ಯೆಯನ್ನು ಎದುರಿಸುತ್ತಿರಲಿಲ್ಲ. ಕೆರೆಯಲ್ಲಿ ನೀರಿದ್ದರೆ ಸ್ಥಳೀಯ ಬಾವಿಗಳಲ್ಲೂ ನೀರಿಗೆ ಯಾವುದೇ ಕೊರತೆಯುಂಟಾಗುತ್ತಿರಲಿಲ್ಲ. 2003ರಲ್ಲಿ ಮಳೆ ಯಿಲ್ಲದೆ ನಾಡು ಬರಕ್ಕೆ ತುತ್ತಾಗಿದ್ದ ಸಂದರ್ಭ ಈ ಕೆರೆ ಸಂಪೂರ್ಣವಾಗಿ ಬತ್ತಿತ್ತು. ಆ ಬಳಿಕ ಇದೇ ಮೊದಲ ಬಾರಿಗೆ ಕೆರೆ ನೀರು ಬತ್ತಿ ಹೋಗಿದೆ ಎಂದು ಸ್ಥಳೀಯರು ಅಭಿಪ್ರಾಯ ಪಡುತ್ತಾರೆ. ಈ ಬಾರಿ ಕೆರೆ ನೀರು ಪೂರ್ತಿಯಾಗಿ ಬತ್ತಿ ಹೋಗಿರುವುದಕ್ಕೆ ಬಿಸಿಲ ಧಗೆ ಒಂದು ಕಾರಣ ವಾದರೆ, ಕೆರೆಯಲ್ಲಿ ತುಂಬಿರುವ ಭಾರೀ ಪ್ರಮಾ ಣದ ಹೂಳು ಕೂಡಾ ನೀರು ಬತ್ತಲು ಇನ್ನೊಂದು ಕಾರಣವಾಗಿದೆ. ಹೂಳಿನಿಂದಾಗಿ ಕೆರೆಯಲ್ಲಿ ನೀರಿನ ಒರತೆಯೇ ಇಲ್ಲವಾಗಿದೆ. ಈ ಕೆರೆಯ ಸಮೀಪದಲ್ಲೇ ಇರುವ ಕೆರೆಗಿಂತ ಆಳವಾಗಿರುವ ಬಾವಿಗಳಲ್ಲಿ ಈಗಾಗಲೇ ನೀರು ಬತ್ತಿದರೂ ಬಿಸಿಲ ಧಗೆಗೆ ಭೂಮಿ ಒಣಗಿ ಹೋದ ಈ ಸಮಯದಲ್ಲೂ ಕೆರೆಯ ಒಂದೆರಡು ಕಡೆ ನೀರಿನಾಂಶದಿಂದ ಮಣ್ಣು ಒದ್ದೆಯಾಗಿದೆ. ಒಂದು ವೇಳೆ ಕೆರೆಯಿಂದ ಹೂಳು ತೆಗೆದಲ್ಲಿ ಶಾಶ್ವತ ನೀರು ಲಭ್ಯವಾಗುವುದರಲ್ಲಿ ಸಂಶಯ ವಿಲ್ಲ ಎಂಬ ಮಾತು ಸ್ಥಳೀಯರಿಂದ ಕೇಳಿ ಬರುತ್ತಿವೆ.

ಐದಾರು ದಶಕಗಳ ಹಿಂದೆ ಈ ಕೆರೆಯನ್ನು ದುರಸ್ಥಿಗೊಳಿಸಿ ಅಭಿವೃದ್ಧಿಪಡಿಸಲಾಗಿತ್ತು. ಕೆರೆಯ ಹೂಳೆತ್ತಿ ಸುತ್ತ ಕಲ್ಲು ಕಟ್ಟಲಾಗಿತ್ತು. ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಕರು ಇರುವುದರಿಂದ ಎಂತಹ ಬೇಸಿಗೆಯಲ್ಲೂ ತಮ್ಮ ತೋಟ ಹಾಗೂ ಗದ್ದೆಗಳಿಗೆ ಇದೇ ಕೆರೆಯ ನೀರನ್ನು ಬಳಸುತ್ತಿದ್ದರು. ಹಾಗೆಯೇ ಸ್ಥಳೀಯರು ಕೂಡಾ ತಮ್ಮ ದೈನಂದಿನ ಚಟುವಟಿಕೆಗೆ ಈ ಕೆರೆಯ ನೀರನ್ನು ಉಪಯೋಗಿಸುತ್ತಿದ್ದರು. ‘ಈ ಬಾರಿಯ ವಿಪರೀತ ತಾಪಮಾನದಿಂದ ಮತ್ತು ಭಾರೀ ಪ್ರಮಾಣದಲ್ಲಿ ಹೂಳು ತುಂಬಿ ರುವುದರಿಂದ ಕೆರೆಯ ನೀರು ಸಹಜವಾಗಿಯೇ ಬತ್ತಿ ಹೋಗಿದೆ. ಆದರೆ ಈ ಭಾಗದ ನಾಗರಿ ಕರಿಗೆ ಕುಡಿಯಲು ಬೋರ್‌ವೆಲ್ ನೀರಿನ ವ್ಯವಸ್ಥೆ ಮಾಡಲಾಗಿದೆ. ಸ್ಥಳೀಯರ ಮನವಿಯ ಮೇರೆಗೆ ಗ್ರಾಪಂ ಕೆರೆಯ ಹೂಳೆತ್ತಲು ಮುಂದಾಗಿದೆ. ಉದ್ಯೋಗ ಖಾತರಿ ಯೋಜನೆಯಡಿ ಹೂಳೆತ್ತುವ ಕಾರ್ಯ ವನ್ನು ತಕ್ಷಣವೇ ಕೈಗೆತ್ತಿಕೊಳ್ಳಲಾಗುವುದು’ ಎಂದು ಗ್ರಾಪಂ ಅಧ್ಯಕ್ಷ ಮುಹಮ್ಮದ್ ನಾಸಿರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X