Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಣ ಮಾತನಾಡಿದಾಗ ಸತ್ಯ ಸುಮ್ಮನಿರಬೇಕಾದ...

ಹಣ ಮಾತನಾಡಿದಾಗ ಸತ್ಯ ಸುಮ್ಮನಿರಬೇಕಾದ ಸ್ಥಿತಿ ನಮ್ಮಲ್ಲಿದೆ: ಕೆ.ಪಿ.ಅಹ್ಮದ್ ಹಾಜಿ

ಪುತ್ತೂರಿನಲ್ಲಿ ಉಲಮಾ-ಉಮರಾ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ7 May 2016 6:53 PM IST
share
ಹಣ ಮಾತನಾಡಿದಾಗ ಸತ್ಯ ಸುಮ್ಮನಿರಬೇಕಾದ ಸ್ಥಿತಿ ನಮ್ಮಲ್ಲಿದೆ: ಕೆ.ಪಿ.ಅಹ್ಮದ್ ಹಾಜಿ

ಪುತ್ತೂರು, ಮೇ 7: ಕುಡಿತ, ಮಾದಕ ದ್ರವ್ಯ ಸೇವನೆ, ಬಡ್ಡಿಗಳಂತಹ ಹರಾಂ ವ್ಯವಸ್ಥೆಗಳು ಇದೀಗ ಸಮುದಾಯಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಹಣ ಮಾತನಾಡಿದಾಗ ಸತ್ಯ ಸುಮ್ಮನಿರಬೇಕಾದ ಸ್ಥಿತಿ ನಮ್ಮಲ್ಲಿದೆ. ಇದು ಬದಲಾವಣೆಗೊಂಡು ಇಂತಹ ಸಾಮಾಜಿಕ ಪಿಡುಗುಗಳ ವಿರುದ್ದ ಜವಾಬ್ದಾರಿಯುತ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಕುಂಬ್ರ ಕರ್ನಾಟಕ ಇಸ್ಲಾಮಿಕ್ ಅಕಾಡೆಮಿ ಅಧ್ಯಕ್ಷ ಕೆ.ಪಿ. ಅಹ್ಮದ್ ಹಾಜಿ ಹೇಳಿದ್ದಾರೆ.

ಪುತ್ತೂರು ಕರವಡ್ತ ವಲಿಯುಲ್ಲಾಹಿ ತಂಙಳ್‌ರ ಉರೂಸ್ ಸಮಾರಂದ ಪ್ರಯುಕ್ತ ಪುತ್ತೂರು ಬದ್ರಿಯಾ ಮದ್ರಸ ಸಭಾಂಗಣದಲ್ಲಿ ನಡೆದ ಉಲಮಾ-ಉಮರಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಉಲಮಾ ಮತ್ತು ಉಮರಾಗಳಿಗೆ ಸಮುದಾಯದ ಮೇಲೆ ಮಹತ್ತರವಾದ ಜವಾಬ್ದಾರಿ ಇದೆ. ದಾರಿ ತಪ್ಪುತ್ತಿರುವ ಸಮುದಾಯವನ್ನು ಸರಿದಾರಿಗೆ ತರುವಲ್ಲಿ ಇವರು ಶ್ರಮ ವಹಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.

ಯಾವುದೋ ಕಾರಣಕ್ಕೆ ತಪ್ಪುಮಾಡಿ ಜೀವನ ಪರ್ಯಂತ ಕಷ್ಟ ಅನುಭವಿಸುವ ಅದೆಷ್ಟೋ ಯುವಕರಿದ್ದಾರೆ. ಇದು ಅವರ ಅರಿವಿನ ಕೊರತೆಯ ಕಾರಣದಿಂದ ಮಾಡಿದ ತಪ್ಪುಗಳಾಗಿರಬಹುದು. ಆದರೆ, ಇಂದು ಶಿಕ್ಷಣ ಕ್ಷೇತ್ರದಲ್ಲಿ ಅವಕಾಶಗಳಿದ್ದರೂ ಮುಸ್ಲಿಮ್ ಸಮುದಾಯದ ಮಕ್ಕಳು ಇಂದಿಗೂ ಶಿಕ್ಷಣ ವಂಚಿತರಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ಬಡತನ, ಅನಕ್ಷರತೆ, ವರದಕ್ಷಿಣೆ, ವೌಢ್ಯತೆಗಳ ಕಾರಣದಿಂದಾಗಿ ಸಮುದಾಯವು ಅಭಿವೃದ್ಧಿ ವಂಚಿತವಾಗಿದ್ದು, ಈ ಬಗ್ಗೆ ಚಿಂತನೆ ನಡೆಯಬೇಕಾಗಿದೆ ಎಂದರು.

ಪುತ್ತೂರು ತಾಲೂಕು ಮುಸ್ಲಿಮ್ ಸಂಯುಕ್ತ ಜಮಾಅತ್ ಅಧ್ಯಕ್ಷ ಕಮ್ಮಾಡಿ ಇಬ್ರಾಹೀಂ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಬದ್ರಿಯಾ ಮಸೀದಿ ಖತೀಬ್ ಎಸ್.ಬಿ. ಮುಹಮ್ಮದ್ ದಾರಿಮಿ ದುವಾ ನೆರವೇರಿಸಿದರು. ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾದ ಕಾರ್ಯದರ್ಶಿ ಕೊಯ್ಯೋಡು ಪಿ.ಪಿ. ಉಮರ್ ಮುಸ್ಲಿಯಾರ್ ಮುಖ್ಯ ಬಾಷಣ ಮಾಡಿದರು.

ಕುಂಬ್ರ ಕೆಐಸಿ ಮೆನೇಜರ್ ಹುಸೈನ್ ದಾರಿಮಿ ರೆಂಜಲಾಡಿ ಪ್ರಾಸ್ತಾವಿಕ ಭಾಷಣ ಮಾಡಿದರು. ಜಿಪಂ ಸದಸ್ಯ ಎಂ.ಎಸ್. ಮುಹಮ್ಮದ್, ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಕಮಿಟಿ ಅಧ್ಯಕ್ಷ ಅಬ್ದುಲ್ಲ ಹಾಜಿ, ಮಾಜಿ ಅಧ್ಯಕ್ಷ ಪಿ.ಬಿ.ಹಸನ್ ಹಾಜಿ ಪುತ್ತೂರು, ಉದ್ಯಮಿ ಮಹಮ್ಮದ್ ಹಾಜಿ ಕುಕ್ಕುವಳ್ಳಿ, ಅಬ್ದುಲ್ ಅಝೀಝ್ ಬುಶ್ರಾ, ನ್ಯಾಯವಾದಿ ಫಝಲ್ ರಹೀಂ , ಕೆ.ಎಂ. ಬಾವಾಹಾಜಿ, ಅಬ್ದುಲ್ಲತೀಪ್ ಪುತ್ತೂರು, ಅಬ್ದುರ್ರಹ್ಮಾನ್ ಆರಝಾದ್ ದರ್ಬೆ, ಯಾಕೂಬ್ ಹಾಜಿ ದರ್ಬೆ , ಜಮಾಅತ್ ಮಾಜಿ ಕಾರ್ಯದರ್ಶಿ ಹುಸೈನ್ ಕೆನರಾ ಮತ್ತಿತರರು ಉಪಸ್ಥಿತರಿದ್ದರು.

ಅನ್ಸಾರುದ್ದೀನ್ ಜಮಾಅತ್ ಕಾರ್ಯದರ್ಶಿ ಎಲ್.ಟಿ ರಝಾಕ್ ಸ್ವಾಗತಿಸಿದರು. ಮದ್ರಸ ಮೆನೇಜ್‌ಮೆಂಟ್ ಅಧ್ಯಕ್ಷ ರಶೀದ್ ಹಾಜಿ ಪರ್ಲಡ್ಕ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X