ಮೇ 21ರಂದು ಶಬೇ ಬರಾತ್
ಮಂಗಳೂರು, ಮೇ 7: ಇಂದು ಚಂದ್ರದರ್ಶನವಾಗಿರುವುದರಿಂದ ಮೇ 8ರಿಂದ ಶಾಬಾನ್ ತಿಂಗಳು ಆರಂಭಗೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ಮೇ 21ರಂದು ಶನಿವಾರ ಅಸ್ತಮಿಸಿದ ರವಿವಾರ ರಾತ್ರಿ ಚಾಂದ್ 15ರಂದು ಶಬೇ ಬರಾತ್ ಆಚರಿಸಲಾಗುವುದು ಎಂದು ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ತೀರ್ಮಾನಿಸಿರುವುದಾಗಿ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಕೋಶಾಧಿಕಾರಿ ಎಸ್.ಎಂ.ರಶೀದ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಅಲ್ಲದೆ, ಮೇ 21ರಂದು ಶನಿವಾರ ಅಸ್ತಮಿಸಿದ ರವಿವಾರ ರಾತ್ರಿ ಶಬೇ ಬರಾತ್ ಆಚರಿಸುವುದಾಗಿ ಉಡುಪಿ, ಚಿಕ್ಕಮಗಳೂರು ಹಾಗೂ ಹಾಸನ ಖಾಝಿ ಅಲ್ಹಾಜ್ ಪಿ.ಎಂ.ಇಬ್ರಾಹೀಂ ಮುಸ್ಲಿಯಾರ್ ಬೇಕಲ ತೀರ್ಮಾನಿಸಿರುವುದಾಗಿ ಪ್ರಕಟನೆ ತಿಳಿಸಿದೆ.
Next Story