ಉತ್ಪಾದನೆ ಕುಂಠಿತವಾದರೂ ಆಹಾರದ ಕೊರತೆ ಉಂಟಾಗದು: ಸಚಿವ ಕೃಷ್ಣ ಭೆರೇಗೌಡ

ಬೆಂಗಳೂರು, ಮೇ 7: ರಾಜ್ಯದಲ್ಲಿನ ತೀವ್ರ ಸ್ವರೂಪದ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ದ್ವಿದಳ ಧಾನ್ಯಗಳ ಉತ್ಪಾದನೆ ಕುಂಠಿತವಾದರೂ, ರಾಜ್ಯದಲ್ಲಿ ಆಹಾರ ಕೊರತೆ ಉಂಟಾಗುವುದಿಲ್ಲ ಎಂದು ಕೃಷಿ ಸಚಿವ ಕೃಷ್ಣ ಭೈರೇ ಗೌಡ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.
ಶನಿವಾರ ವಿಕಾಸಸೌಧದಲ್ಲಿ ತನ್ನ ಕೊಠಡಿ ಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾ ಡಿದ ಅವರು, ದ್ವಿದಳ ಧಾನ್ಯಗಳ ಉತ್ಪಾದನೆ ಕಡಿಮೆಯಾ ಗಲಿದ್ದು, ಕೇಂದ್ರ ಸರಕಾರ ಬೆಲೆ ಏರಿಕೆ ನಿಯಂತ್ರಣಕ್ಕೆ ವಿದೇಶ ದಿಂದ ದ್ವಿದಳ ಧಾನ್ಯಗಳನ್ನು ಆಮದು ಮಾಡಿಕೊಳ್ಳುತ್ತಿದೆ ಎಂದರು.
ಪ್ರಸಕ್ತ ವರ್ಷ ಹಿಂಗಾರು ಹಾಗೂ ಮುಂಗಾರು ಹಂಗಾಮಿನಲ್ಲಿ ಒಟ್ಟು 110ಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪಾದನೆ ಆಗುವ ನಿರೀಕ್ಷೆಯಿದೆ. ಕಳೆದ ಸಾಲಿಗಿಂತಲೂ ಈ ಬಾರಿ 16 ಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪಾದನೆಯಲ್ಲಿ ಕುಂಠಿತವಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ವಿವರ ನೀಡಿದರು.
ಬರ ಪರಿಸ್ಥಿತಿ ನಿರ್ವಹಣೆಗೆ ರಾಜ್ಯ ಸರಕಾರ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಗಳನ್ನು ಕೈಗೊಂಡಿದ್ದು, ಕೇಂದ್ರ ಸರಕಾರ ನೀಡಿರುವ 1,852 ಕೋಟಿ ರೂ.ಗಳು ಸೇರಿದಂತೆ ಒಟ್ಟು 2,400 ರೂ.ಗಳನ್ನು ಈವರೆಗೂ ವೆಚ್ಚ ಮಾಡ ಲಾಗಿದೆ. ಕುಡಿಯುವ ನೀರಿಗೆ 300 ಕೋಟಿ ರೂ.ಗಳನ್ನು ರಾಜ್ಯ ಸರಕಾರ ಒದಗಿಸಿದೆ ಎಂದರು.
ಆದರೆ, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿನ 152 ತಾಲೂಕು ಗಳಲ್ಲಿ ಬರ ಪರಿಸ್ಥಿತಿಯಿದ್ದರೂ, ಅಂದಿನ ಸಿಎಂ, ಸಚಿವರು ಹಾಗೂ ಸಂಪುಟ ಉಪ ಸಮಿತಿ ಒಂದೂ ಸಭೆಯನ್ನು ಮಾಡಲಿಲ್ಲ. ಆದರೆ, ರಾಜ್ಯ ಸರಕಾರ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಂಡಿದೆ ಎಂದು ತಿರುಗೇಟು ನೀಡಿದರು.
ಬೆಳೆ ನಷ್ಟ ಪರಿಹಾರಕ್ಕೆ ಕೇಂದ್ರ ಬಿಡುಗಡೆ ಮಾಡಿದ್ದ 1,540ಕೋಟಿ ರೂ.ಗಳ ಪೈಕಿ ಶೇ.80ರಷ್ಟನ್ನು ಆರ್‌ಟಿಜಿಎಸ್ ಮೂಲಕ ಈಗಾಗಲೇ ರೈತರ ಖಾತೆಗೆ ಪಾವತಿಸಿದ್ದು, ಉಳಿದ ಮೊತ್ತವನ್ನು ಶೀಘ್ರದಲ್ಲೇ ರೈತರಿಗೆ ವಿತರಣೆ ಮಾಡಲಾಗುವುದು ಎಂದ ಅವರು, ಇನ್ನೂ ಎರಡು-ಮೂರು ದಿನಗಳಲ್ಲಿ ಬರ ಅಧ್ಯಯನ ಪ್ರವಾಸ ಕೈಗೊಂಡಿದ್ದ ಸಂಪುಟ ಉಪ ಸಮಿತಿ ಮುಖ್ಯಮಂತ್ರಿಗಳಿಗೆ ವರದಿ ನೀಡಲಿದೆ ಎಂದು ಹೇಳಿದರು.
ಕಡಿಮೆ ಬೆಲೆಗೆ ಬಿತ್ತನೆ ಬೀಜ
ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆ ಆಗುವ ನಿರೀಕ್ಷೆಯಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನಿಗೆ ಸೂಚಿಸಲಾಗಿದೆ ಎಂದ ಅವರು, ಮುಂಗಾರು ಹಂಗಾಮಿಗೆ ಉದ್ದು, ಹೆಸರು, ಸೋಯಾ, ಶೇಂಗಾ ಸೇರಿದಂತೆ ಬಿತ್ತನೆ ಬೀಜಗಳನ್ನು ಕಡಿಮೆ ಬೆಲೆಗೆ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
21.78 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ, 2.47ಲಕ್ಷ ಮೆಟ್ರಿಕ್ ಟನ್ ಬಿತ್ತನೆ ಬೀಜ ಸರಕಾರಿ ಗೋದಾಮಿನಲ್ಲಿ ದಾಸ್ತಾನಿದೆ. ಅದೇ ರೀತಿಯಲ್ಲಿ ಮಾರುಕಟ್ಟೆಯಲ್ಲಿ ಹೆಚ್ಚಿನ ಪ್ರಮಾಣದ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನಿದೆ ಎಂದು ಕೃಷ್ಣ ಭೈರೇಗೌಡ ಇದೇ ವೇಳೆ ವಿವರ ನೀಡಿದರು.
ಬರ ಪರಿಸ್ಥಿತಿ ನಿರ್ವಹಣೆಗೆ ರಾಜ್ಯ ಸರಕಾರ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಗಳನ್ನು ಕೈಗೊಂಡಿದ್ದು, ಕೇಂದ್ರ ಸರಕಾರ ನೀಡಿರುವ 1,852 ಕೋಟಿ ರೂ.ಗಳು ಸೇರಿದಂತೆ ಒಟ್ಟು 2,400 ರೂ.ಗಳನ್ನು ಈವರೆಗೂ ವೆಚ್ಚ ಮಾಡ ಲಾಗಿದೆ. ಕುಡಿಯುವ ನೀರಿಗೆ 300 ಕೋಟಿ ರೂ.ಗಳನ್ನು ರಾಜ್ಯ ಸರಕಾರ ಒದಗಿಸಿದೆ.
- ಕೃಷ್ಣ ಭೈರೇಗೌಡ, ಕೃಷಿ ಸಚಿವ







