ಯುಡಿಎಫ್ ಅಭ್ಯರ್ಥಿಗಳ ಪರ ಸಚಿವ ಡಿಕೆಶಿ ಪ್ರಚಾರ
ಕೇರಳ ವಿಧಾನಸಭಾ ಚುನಾವಣೆ

ಬೆಂಗಳೂರು, ಮೇ 7: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟದ ಅಭ್ಯರ್ಥಿಗಳ ಪರವಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಪ್ರಚಾರ ನಡೆಸಿದ್ದಾರೆ.
ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಸೂಚನೆ ಹಿನ್ನೆಲೆಯಲ್ಲಿ ಕೇರಳಕ್ಕೆ ತೆರಳಿರುವ ಸಚಿವ ಶಿವಕುಮಾರ್, ಮಾಜಿ ಕೇಂದ್ರ ಸಚಿವ ಎ.ಕೆ.ಆ್ಯಂಟನಿ, ಶಾಸಕ ಕೆಎನ್‌ಎ ಖಾದರ್‌ಸೇರಿದಂತೆ ಇನ್ನಿತರ ಪ್ರಮುಖ ನಾಯಕರೊಂದಿಗೆ ಚೆಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ತುಳಸಿ ಟೀಚರ್ ಪರವಾಗಿ ಚುನಾವಣಾ ಪ್ರಚಾರ ಕೈಗೊಂಡರು. ಮೇ 9ರಂದು ಕೇರಳದ ತ್ರಿಶೂರ್‌ನಲ್ಲಿ ಸೋನಿಯಾಗಾಂಧಿ ನಡೆಸಲಿರುವ ಚುನಾವಣಾ ಪ್ರಚಾರ ಸಭೆಯನ್ನು ಶಿವಕುಮಾರ್ ಆಯೋಜಿಸಲಿದ್ದಾರೆ.
Next Story





