ಹಿಮಾಚಲ ಪ್ರದೇಶದಲ್ಲಿ ಕಣಿವೆಗೆ ಬಸ್ ಉರುಳಿ ಬಿದ್ದು 9 ಸಾವು

ಶಿಮ್ಲಾ, ಮೇ 8: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಜೋಗಿಂದರ್‌ನಗರ್ ಎಂಬಲ್ಲಿ ಸರಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದ ಪರಿಣಾಮವಾಗಿ ಬಸ್‌ನಲ್ಲಿದ್ದ 9 ಮಂದಿ ಮೃತಪಟ್ಟು , 39 ಮಂದಿ ಗಾಯಗೊಂಡ ಘಟನೆ ಶನಿವಾರ ತಡ ರಾತ್ರಿ ಸಂಭವಿಸಿದೆ.
55 ಮಂದಿ ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಎಚ್ ಆರ್ ಟಿಸಿ ಬಸ್ ಆಳವಾದ ಕಣಿವೆಗೆ ಉರುಳಿ ಬಿದ್ದಿದ್ದು, 9 ಮಂದಿ ಪ್ರಯಾಣಿಕರು ಬಸ್‌ನ ಅಡಿಗೆ ಸಿಲುಕಿಕೊಂಡು ಸ್ಥಳದಲ್ಲೇ ಮೃತಪಟ್ಟರು. ಶಿಮ್ಲಾದಿಂದ 210 ಕಿ. ಮೀ ದೂರದ ಜೋಗಿಂದರ್‌ನಗರದಲ್ಲಿ ಈ ದುರಂತ ಸಂಭವಿಸಿದೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಇನ್ನೂ ಏರುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Next Story





