Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೇರಳದಲ್ಲಿ ಸಿಪಿಎಂ- ಕಾಂಗ್ರೆಸ್ ಮಧ್ಯೆ...

ಕೇರಳದಲ್ಲಿ ಸಿಪಿಎಂ- ಕಾಂಗ್ರೆಸ್ ಮಧ್ಯೆ ಒಳಒಪ್ಪಂದದ ರಾಜಕೀಯ: ಮೋದಿ ಆರೋಪ

ಕಾಸರಗೋಡಿನಲ್ಲಿ ಪ್ರಧಾನಿಯಿಂದ ಎನ್‌ಡಿಎ ಪರ ಚುನಾವಣಾ ಪ್ರಚಾರ

ವಾರ್ತಾಭಾರತಿವಾರ್ತಾಭಾರತಿ8 May 2016 12:01 PM IST
share
ಕೇರಳದಲ್ಲಿ ಸಿಪಿಎಂ- ಕಾಂಗ್ರೆಸ್ ಮಧ್ಯೆ ಒಳಒಪ್ಪಂದದ ರಾಜಕೀಯ: ಮೋದಿ ಆರೋಪ

ಕಾಸರಗೋಡು, ಮೇ 8: ಕೇರಳದಲ್ಲಿ ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ಒಳಒಪ್ಪಂದದ ರಾಜಕೀಯ ನಡೆಯುತ್ತಿದೆ. ಅದರಂತೆ ಪ್ರತಿ ಐದು ವರ್ಷಕ್ಕೊಮ್ಮೆ ಈ ಎರಡು ಪಕ್ಷಗಳು ಅಧಿಕಾರಕ್ಕೇರುತ್ತಿವೆ. ಆದರೆ ಈ ಚುನಾವಣೆ ಹಿಂಸಾ ರಾಜಕೀಯದಿಂದ ಕೇರಳವನ್ನು ರಕ್ಷಿಸುವ, ಯುವಜನರ ಭವಿಷ್ಯ ನಿರ್ಧರಿಸುವ ಚುನಾವಣೆಯಾಗಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.

ಕೇರಳ ವಿಧಾಸನಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಇಂದು ಕಾಸರಗೋಡಿಗೆ ಆಗಮಿಸಿದ ಅವರು ಇಲ್ಲಿನ ನಗರಸಭಾ ಕ್ರೀಡಾಂಗಣದಲ್ಲಿ ಪ್ರಚಾರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಿದ್ದರು.
ಕೇರಳ ಹಿಂಸಾ ರಾಜಕೀಯದಲ್ಲಿ ನಲುಗಿ ಹೋಗಿದೆ. ಇದರಲ್ಲಿ ಹಲವು ರಾಜಕೀಯ ಮುಖಂಡರು ಹತ್ಯೆಯಾಗಿದ್ದಾರೆ. ಬಿಜೆಪಿಯ 150ಕ್ಕೂ ಅಧಿಕ ಕಾರ್ಯಕರ್ತರು ಹಿಂಸಾ ರಾಜಕೀಯಕ್ಕೆ ಬಲಿಯಾಗಿದ್ದಾರೆ. ಇದಕ್ಕೆ ಅಂತ್ಯ ಹಾಡಬೇಕಾಗಿದೆ ಎಂದು ಪ್ರಧಾನಿ ನುಡಿದರು.
ಅಡಿಕೆ ಕೃಷಿಕರ ಸಮಸ್ಯೆಗೆ ಕೇಂದ್ರ ಸರಕಾರ ಸರಕಾರತ್ಮಕವಾಗಿ ಸ್ಪಂದಿಸಿದೆ. ಅಡಿಕೆ, ತೆಂಗು ಕೃಷಿಕರ ಸಮಸ್ಯೆಗೆ ಪರಿಹಾರ ಕಲ್ಪಿಸಿದೆ. ಭಾರತಕ್ಕೆ ಸ್ವಾತಂತ್ರ ಲಭಿಸಿದ 75ನೆ ವಾರ್ಷಿಕೋತ್ಸವ ಆಚರಿಸುತ್ತಿರುವ 2022ರ ವೇಳೆಗೆ ಕೃಷಿಕರ ಆದಾಯ ಇಮ್ಮಡಿಗೊಳಿಸಲು ಕೇಂದ್ರ ಸರಕಾರ ಯೋಜನೆ ಹಾಕಿದೆ ಎಂದವರು ಹೇಳಿದರು.
 ಸಮಾರಂಭದಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಮಂಗಳೂರು ಸಂಸದ ನಳಿಗಿಕುಮಾರ್ ಕಟೀಲು, ವಿವಿಧ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳಾದ ಕೆ.ಸುರೇಂದ್ರನ್, ಕುಂಟಾರು ರವೀಶ್ ತಂತ್ರಿ, ಕೆ.ಶ್ರೀಕಾಂತ್, ಎಂ.ಭಾಸ್ಕರನ್, ಎಂ.ಪಿ.ರಾಘವನ್, ಕರ್ನಾಟಕ ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಪ್ರಮೀಳಾ ಸಿ. ನಾಯಕ್, ಸಿ.ಕೆ.ಪದ್ಮನಾಭನ್ ಮೊದಲಾದವರು ಉಪಸ್ಥಿತರಿದ್ದರು.
ಮಲಯಾಳದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ

ಮಲಯಾಳದಲ್ಲಿ ಭಾಷಣ ಆರಂಭಿಸಿದ ಮೋದಿಯವರು ಮಲಯಾಳದಲ್ಲೇ ಕೊನೆಗೊಳಿಸುವ ಮೂಲಕ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಿದರು.
 ಬೆಳಗ್ಗೆ 9:45ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮೋದಿಯವರು, ಅಲ್ಲಿಂದ 10:25ರ ಸುಮಾರಿಗೆ ಹೆಲಿಕಾಪ್ಟರ್‌ನಲ್ಲಿ ಕಾಸರಗೋಡು ಸರಕಾರಿ ಕಾಲೇಜು ಹೆಲಿಪ್ಯಾಡ್‌ನಲ್ಲಿ ಬಂದಿಳಿದರು. ಅಲ್ಲಿಂದ 10:40ಕ್ಕೆ ವೇದಿಕೆಗೆ ಆಗಮಿಸಿದ ಅವರು 25 ನಿಮಿಷಗಳ ಕಾಲ ಭಾಷಣ ಮಾಡಿದರು. 11:20ಕ್ಕೆ ವೇದಿಕೆಯಿಂದ ನಿರ್ಗಮಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X