Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲಿಯಂಡ ತಂಡಕ್ಕೆ ಜಯ

ಕಲಿಯಂಡ ತಂಡಕ್ಕೆ ಜಯ

ಶಾಂತೆಯಂಡ ಕಪ್ ಹಾಕಿ ಉತ್ಸವಕ್ಕೆ ತೆರೆ

ವಾರ್ತಾಭಾರತಿವಾರ್ತಾಭಾರತಿ8 May 2016 10:09 PM IST
share
ಕಲಿಯಂಡ ತಂಡಕ್ಕೆ ಜಯ

ಮಡಿಕೇರಿ, ಮೇ 8: ಕೊಡವ ಕುಟುಂಬ ತಂಡಗಳ ನಡುವೆ ನಡೆದ 20ನೆ ವರ್ಷದ ಶಾಂತೆಯಂಡ ಕಪ್ ಹಾಕಿ ಉತ್ಸವದ ಅಂತಿಮ ಪಂದ್ಯದಲ್ಲಿ ಕಲಿಯಂಡ ತಂಡ ರೋಚಕ ಗೆಲುವು ದಾಖಲಿಸಿದೆ.

ಸೋಲನ್ನು ಅನುಭವಿಸುವ ಮೂಲಕ ಪಳಂಗಂಡ ತಂಡದ 6ನೆ ಬಾರಿಗೆ ಪ್ರಶಸ್ತಿಯನ್ನು ಪಡೆಯುವ ಕನಸು ನುಚ್ಚುನೂರಾಗಿ, ಮೂರನೆ ಬಾರಿಗೆ ರನ್ನರ್ಸ್‌ ಅಪ್ ಪ್ರಶಸ್ತಿಗೆ ಭಾಜನವಾಯಿತು.

ಸಹಸ್ರಾರು ಮಂದಿ ಕ್ರೀಡಾಭಿಮಾನಿಗಳ ಸಮ್ಮುಖದಲ್ಲಿ ಕ್ಷಣಕ್ಷಣಕ್ಕೂ ಕುತೂಹಲವನ್ನು ಹಿಡಿದಿಟ್ಟುಕೊಂಡು ಸಾಗಿದ ಅಂತಿಮ ಪಂದ್ಯದಲ್ಲಿ ಕಲಿಯಂಡ ತಂಡ ಸಡನ್ ಡೆತ್ ಮೂಲಕ ಪಳಂಗಂಡ ತಂಡವನ್ನು 6-5 ಗೋಲುಗಳ ಅಂತರದಿಂದ ಸೋಲಿಸುವ ಮೂಲಕ ಆಕರ್ಷಕ ಟ್ರೋಫಿ ಮತ್ತು 2 ಲಕ್ಷ ರೂ. ನಗದು ಬಹುಮಾನವನ್ನು ಪಡೆದುಕೊಂಡಿತು.

ಬಲಿಷ್ಠ ಪಳಂಗಂಡ, ಉತ್ಸಾಹಿ ಯುವ ಹಾಕಿ ಪಟುಗಳನ್ನು ಒಳಗೊಂಡ ಕಲಿಯಂಡ ತಂಡ ಮೊದಲ ಕ್ವಾರ್ಟರ್‌ನಲ್ಲಿ ದಾಳಿಗೆ ಪ್ರತಿದಾಳಿ ಎಂಬಂತೆ ಸಂಘರ್ಷದ ಆಟಕ್ಕೆ ಒತ್ತು ನೀಡುವ ಮೂಲಕ ಪಂದ್ಯದ ಕಾವೇರಿತು. ಪಳಂಗಂಡ ತಂಡ 10ನೆ ನಿಮಿಷದಲ್ಲಿ ಪಡೆದ ಪೆನಾಲ್ಟಿ ಕಾರ್ನರ್‌ನಲ್ಲಿ ತಂಡದ ಸ್ಟಾರ್ ಆಟಗಾರ ಅಮರ್ ಅಯ್ಯಮ್ಮ ಮಿಂಚಿನ ಗೋಲು ಸಿಡಿಸಿ ತಂಡಕ್ಕೆ ಮಹತ್ವದ 1-0 ಗೋಲಿನ ಮುನ್ನಡೆಯನ್ನು ದೊರಕಿಸಿಕೊಟ್ಟರು. ದ್ವಿತೀಯ ಕ್ವಾರ್ಟರ್‌ನಲ್ಲಿ ಕಲಿಯಂಡ ರಕ್ಷಣೆಯೊಂದಿಗೆ ದಾಳಿಯ ಆಟಕ್ಕೆ ಒತ್ತು ನೀಡಿ ಪಳಂಗಂಡ ತಂಡದ ಡಿ ಆವರಣಕ್ಕೆ ಸತತ ದಾಳಿಗಳನ್ನು ಸಂಘಟಿಸಿ 5 ಪೆನಾಲ್ಟಿ ಕಾರ್ನರ್ ಅವಕಾಶಗಳನ್ನು ಪಡೆದುಕೊಂಡಿತಾದರೂ ಗೋಲಾಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ. ಮೂರನೆ ಕ್ವಾರ್ಟರ್ ಆರಂಭದಲ್ಲೆ ಕಲಿಯಂಡ ತಂಡದ ಮುನ್ಪಡೆ ಆಟಗಾರರಾದ ಭರತ್, ಕಾರ್ಯಪ್ಪ ಸಂಘಟಿಸಿದ ದಾಳಿಯಲ್ಲಿ ದೊರಕಿದ ಅವಕಾಶವನ್ನು ಕಿರಣ್ ಕಾರ್ಯಪ್ಪ ಅಷ್ಟೇ ಚಾಕಚಕ್ಯತೆಯಿಂದ ಬಳಸಿಕೊಂಡು ಬಿರುಸಿನಿಂದ ಹೊಡೆದ ಚೆಂಡು ಪಳಂಗಂಡ ತಂಡದ ಗೋಲನ್ನು ವಂಚಿಸುವುದರೊಂದಿಗೆ ಪಂದ್ಯ 1-1 ಗೋಲಿನ ಸಮಸ್ಥಿತಿಯಲ್ಲಿ ನೆಲೆಸಿತು. ಕೊನೆಯ ನಾಲ್ಕನೆ ಕ್ವಾರ್ಟರ್‌ನಲ್ಲಿ ಇತ್ತಂಡಗಳಿಗೂ ಗೋಲುಗಳಿಸುವ ಮುಕ್ತ ಅವಕಾಶಗಳು ದೊರೆತರೂ ಅದು ಗೋಲಾಗಿ ಪರಿವರ್ತಿತವಾಗದೆ ಪಂದ್ಯ ಡ್ರಾನಲ್ಲಿ ಮುಕ್ತಾಯಗೊಂಡಿತು.

ವಿಜೇತ ತಂಡವನ್ನು ನಿರ್ಧರಿಸುವ ಶೂಟೌಟ್‌ನಲ್ಲಿ ಪಳಂಗಂಡ ತಂಡದ ಅಜಯ್, ಕಾಳಪ್ಪ, ಅಮರ್ ಮತ್ತು ಮುತ್ತಣ್ಣ ಗೋಲು ಗಳಿಸಿದರೆ, ಕಲಿಯಂಡ ತಂಡದ ಭರತ್, ಕಾರ್ಯಪ್ಪ, ಬಿದ್ದಪ್ಪ ಮತ್ತು ದೇವಯ್ಯ ಗೋಲುಗಳಿಸುವುದರೊಂದಿಗೆ ಪಂದ್ಯ ಮಗದೊಮ್ಮೆ ಸಮಬಲದಲ್ಲಿ ನೆಲೆಸಿತು. ನಂತರ ನಡೆದ ಸಡನ್ ಡೆತ್‌ನಲ್ಲಿ ಕಲಿಯಂಡ ಕಾರ್ಯಪ್ಪಗೋಲುಗಳಿಸುವುದರೊಂದಿಗೆ ಕಲಿಯಂಡ ತಂಡ 2016ರ ಶಾಂತೆಯಂಡ ಕಪ್ ಹಾಕಿ ಉತ್ಸವದ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿತು.

ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಆಟಗಾರರನ್ನು ಪರಿಚಯಿಸಿಕೊಂಡು ಬೆಳ್ಳಿಯ ಚೆಂಡನ್ನು ಬೆಳ್ಳಿಯ ಸ್ಟಿಕ್‌ನಿಂದ ಹೊಡೆಯುವ ಮೂಲಕ ಅಂತಿಮ ಪಂದ್ಯಾಟವನ್ನು ಉದ್ಘಾಟಿಸಿದರು.

ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರನ್ನರ್ಸ್‌ ಅಪ್ ಪಳಂಗಂಡಕ್ಕೆ 1 ಲಕ್ಷ ರೂ. ನಗದು ಮತ್ತು ಟ್ರೋಫಿಯನ್ನು ವಿತರಿಸಿದರೆ, ಇಬ್ನಿಸ್ಪಾ ರೆಸಾರ್ಟ್‌ನ ಕ್ಯಾಪ್ಟನ್ ಸೆಬಾಸ್ಟಿನ್ ವಿಜೇತ ಕಲಿಯಂಡ ತಂಡಕ್ಕೆ ಪ್ರಶಸ್ತಿಯನ್ನು ವಿತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X