Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇ 12ರಂದು ಬಂಟರ ಯಾನೆ ನಾಡವರ ಮಾತೃ ಸಂಘದ...

ಮೇ 12ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಶತಮಾನೋತ್ಸವ ಕಟ್ಟಡಕ್ಕೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ9 May 2016 8:37 PM IST
share
ಮೇ 12ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಶತಮಾನೋತ್ಸವ ಕಟ್ಟಡಕ್ಕೆ ಶಿಲಾನ್ಯಾಸ

ಮಂಗಳೂರು, ಮೇ 9: ಬಂಟರ ಯಾನೆ ನಾಡವರ ಮಾತೃ ಸಂಘದ ಶತಮಾನೋತ್ಸವ ಕಟ್ಟಡ ಸಂಕೀರ್ಣದ ಶಿಲಾನ್ಯಾಸ ಸಮಾರಂಭ ಮೇ 12ರಂದು ಸಂಜೆ 4 ಗಂಟೆಗೆ ನಗರದ ಬಂಟ್ಸ್ ಹಾಸ್ಟೆಲ್ ವಠಾರದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಸುಮಾರು 230 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗಲಿರುವ 4 ಅಂತಸ್ತಿನ ಕಟ್ಟಡ ಸಂಕೀರ್ಣವು 4ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ.ಶಿಲಾನ್ಯಾಸ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಅರಣ್ಯ ಹಾಗೂ ಪರಿಸರ ಖಾತೆ ಸಚಿವ ಬಿ.ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲ್, ಆರ್‌ಎನ್ ಶೆಟ್ಟಿ ಸಮೂಹ ಸಂಸ್ಥೆಗಳ ಸಿಎಮ್‌ಡಿ ಡಾ.ಆರ್.ಎನ್.ಶೆಟ್ಟಿ, ನಿಟ್ಟೆ ವಿಶ್ವ ವಿದ್ಯಾನಿಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಶಂಕುತಳಾ ಶೆಟ್ಟಿ, ಪ್ರತಾಪ್ ಚಂದ್ರ ಶೆಟ್ಟಿ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ನಾಗರಾಜ ಶೆಟ್ಟಿ, ಕರ್ನಾಟಕ ಸರಕಾರದ ಡಿಜಿ ಮತ್ತು ಐಜಿಪಿ ಓಂಪ್ರಕಾಶ್, ವರ್ಲ್ಡ್ ಬಂಟ್ಸ್ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಎಂ .ಶಾಂತಾರಾಮ ಶೆಟ್ಟಿ, ಮುಂಬಯಿಯ ಉದ್ಯಮಿ ಸುಧೀರ್ ಶೆಟ್ಟಿ, ಉದ್ಯಮಿ ಪ್ರಕಾಶ್ ಶೆಟ್ಟಿ, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಂ.ಮೋಹನ ಆಳ್ವ, ಕೆನರಾ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕ ಹರ್ಧೀಶ್ ಕುಮಾರ್, ಪದ್ಮನಾಭ ಪಯ್ಯಡೆ, ಜಾಗತಿಕ ಬಂಟರ ಸಂಘದ ಉಪಾಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಮುಂಬಯಿ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ಶೇಖರ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಡಾ.ನರೇಶ್ ಶೆಟ್ಟಿ, ಮುಂಬಯಿ ಬಂಟರ ಸಂಘದ ಉಪಾಧ್ಯಕ್ಷ ಪ್ರಭಾಕರ ಎಲ್ ಶೆಟ್ಟಿ, ಮಾಜಿ ಅಧ್ಯಕ್ಷ ಮೇರ್ಕಳ ತ್ಯಾಂಪಣ್ಣ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ಲತಾ ಜಯರಾಮಶೆಟ್ಟಿ, ಮಾಜಿ ಅಧ್ಯಕ್ಷೆ ಆಶಾ ಮನೋಹರ ಹೆಗ್ಡೆ, ಬೆಂಗಳೂರು ಬಂಟರ ಸಂಘದ ಕಾರ್ಯದರ್ಶಿ ಮಂಜುಳಾ ಶೆಟ್ಟಿ, ಬಿಗ್ರೇಡಿಯರ್ ಐ.ಎನ್.ರೈ, ಕೊಲ್ಲೂರು ಮೂಕಾಂಬಿಕ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಅಪ್ಪಣ್ಣ ಹೆಗ್ಡೆ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಅಜಿತ್ ಕುಮಾರ್ ರೈ ತಿಳಿಸಿದರು.

ಬಂಟರ ಸಂಘ ಜಿಲ್ಲೆಯಲ್ಲಿ ಆರಂಭಗೊಂಡ ಪ್ರಥಮ ನೊಂದಾಯಿತ ಸಂಘವಾಗಿದ್ದು, ಬಂಟರ ಸಂಘಕ್ಕೆ 100 ವರ್ಷ ತುಂಬಿದ ಸಲುವಾಗಿ ಶತಮಾನೋತ್ಸವದ ಕಟ್ಟಡ ಸಂಕೀರ್ಣವನ್ನು ನಿರ್ಮಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಈ ಕಟ್ಟಡ ಸಂಕೀರ್ಣದಲ್ಲಿ 6 ಲಕ್ಷ ಚದರ ಅಡಿಯ ವಾಣಿಜ್ಯ ಸಂಕೀರ್ಣ, 2,000 ಆಸನ ವ್ಯವಸ್ಥೆ ಇರುವ ಸುಸಜ್ಜಿತ ಸಭಾಭವನ, 1,250 ವಾಹನ ನಿಲುಗಡೆ ಪ್ರದೇಶ, ಸಭೆ ಸಮಾರಂಭ ನಡೆಸಲು ಸಭಾ ಭವನ, ಮೂರು ಪ್ರತ್ಯೇಕ ಲಾಬಿಗಳು, 4ನೆ ಮಹಡಿಯಲ್ಲಿ 50 ಸಾವಿರ ಚದರ ಅಡಿಯಷ್ಟು ಓಪನ್ ಟೆರೇಸ್, ವಿಶ್ವ ದರ್ಜೆಯ ಜಿಮ್‌ಗಳು ಮತ್ತು ಕ್ಲಬ್‌ಗಳು ನಿರ್ಮಾಣಗೊಳ್ಳಲಿವೆ.

ಶಿಲಾನ್ಯಾಸ ಸಮಾರಂಭದ ಸಂದರ್ಭದಲ್ಲಿ ವಾಹನ ನಿಲುಗಡೆಗೆ ಬಂಟ್ಸ್ ಹಾಸ್ಟೆಲ್ ಬಳಿ ಇರುವ ಸಿ.ವಿ.ನಾಯಕ್ ಸಭಾಭವನ, ರಾಮಕೃಷ್ಣ ಕಾಲೇಜಿನ ಹಿಂಭಾಗದ ಕದ್ರಿ ಕಂಬಳ ಪಿಂಟೋಸ್ ಲೇನ್ ಮಧ್ಯದಲ್ಲಿ ಇರುವ ಹೆಗ್ಡೆ ಕಂಪೌಂಡ್ ಮತ್ತು ಶ್ರೀ ರಾಮಕೃಷ್ಣ ಕಾಲೇಜಿನ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಅಜಿತ್ ಕುಮಾರ್ ರೈ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಕೆಂಚನೂರು ಸೋಮಶೇಖರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮೇಘನಾಥ್ ಶೆಟ್ಟಿ, ಕೋಶಾಧಿಕಾರಿ ಮನಮೋಹನ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X