‘ಬಾಲ ಸಂಸದ’ ಕಾರ್ಯಕ್ರಮ
ಹೊಸದಿಲ್ಲಿ,ಮೇ 9: ಯೋಜನೆ ರೂಪಿಸುವಿಕೆ,ನಿರ್ಧಾರ ಕೈಗೊಳ್ಳುವುದು ಮತ್ತು ಶಾಲಾಡಳಿತ ಸೇರಿದಂತೆ ಎಲ್ಲ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆಯಂತಹ ಜೀವನ ಕೌಶಲಗಳನ್ನು ಮಕ್ಕಳಲ್ಲಿ ಬೆಳೆಸಲು ‘ಬಾಲ ಸಂಸದ’ ಕಾರ್ಯಕ್ರಮವನ್ನು ಕೇಂದ್ರ ಸರಕಾರವು ರೂಪಿಸುತ್ತಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮತಿ ಇರಾನಿ ಅವರು ಸೋಮವಾರ ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದರು.
ಈ ಕಾರ್ಯವು ಅಂತಿಮಗೊಂಡ ಬಳಿಕ ಕಾರ್ಯಕ್ರಮದ ಮಾರ್ಗಸೂಚಿಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಹಂಚಿಕೊಳ್ಳುವುದಾಗಿ ನುಡಿದರು.
Next Story





