ಬೆಳ್ತಂಗಡಿ: ತಾ.ಪಂ. ಅಧ್ಯಕ್ಷೆಯಾಗಿ ಕಾಂಗ್ರೆಸ್ ಸದಸ್ಯೆ ದಿವ್ಯ ಜ್ಯೋತಿ ಅವಿರೋಧವಾಗಿ ಆಯ್ಕೆ
ಬೆಳ್ತಂಗಡಿ, ಮೇ 10: ತಾಲೂಕು ಪಂಚಾಯತ್ ಅಧ್ಯಕ್ಷೆಯಾಗಿ ಕಾಂಗ್ರೆಸ್ ಸದಸ್ಯೆ ದಿವ್ಯ ಜ್ಯೋತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮಹಿಳಾ ಮೀಸಲಾತಿಯಿತ್ತು.
ಉಪಾಧ್ಯಕ್ಷೆಯಾಗಿ ಬಿಜೆಪಿಯ ವೇದಾವತಿ ಆಯ್ಕೆಯಾಗಿದ್ದಾರೆ. ಈ ಸ್ಥಾನಕ್ಕೆ ಸಾಮಾನ್ಯ ಮಹಿಳಾ ಮೀಸಲಾತಿಯಿತ್ತು.
ತ ಪಂ ನಲ್ಲಿ ಬಿಜೆಪಿಗೆ ಬಹುಮತವಿದ್ದರೂ ಮೀಸಲಾತಿಯ ಕಾರಣದಿಂದ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಿದೆ.
Next Story