ಪುತ್ತೂರು, ಮೇ 10: ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಸೇರಾಜೆ ಎಂಬಲ್ಲಿನ ನಿವಾಸಿ ಅಂಗನವಾಡಿ ಕಾರ್ಯಕರ್ತೆ ಸುಧಾ ಎಂಬವರ ಮನೆಯ ಕೊಟ್ಟಿಗೆಗೆ ಬೆಂಕಿ ತಗುಲಿ ಕೊಟ್ಟಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು ಸಾವಿರಾರು ನಷ್ಟ ಸಂಭವಿಸಿದೆ.
ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೊಟ್ಟಿಗೆ ಸುಟ್ಟು ಭಸ್ಮವಾಗಿದೆ.