ಅಗ್ರ ಸ್ಥಾನ ಕಾಯ್ದುಕೊಂಡ ಸಾನಿಯಾ-ಹಿಂಗಿಸ್
ಡಬ್ಲ್ಯುಟಿಎ ಡಬಲ್ಸ್ ರ್ಯಾಂಕಿಂಗ್:
ಹೊಸದಿಲ್ಲಿ, ಮೇ 10: ಸಾನಿಯಾ ಮಿರ್ಝಾ ಹಾಗೂ ಮಾರ್ಟಿನಾ ಹಿಂಗಿಸ್ ಅವರು ಡಬ್ಲ್ಯುಟಿಎ ಡಬಲ್ಸ್ ರ್ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಇಂಡೋ-ಸ್ವಿಸ್ ಜೋಡಿ ಸಾನಿಯಾ-ಹಿಂಗಿಸ್ ಇತ್ತೀಚೆಗೆ ನಡೆದ ಮ್ಯಾಡ್ರಿಡ್ ಓಪನ್ ಫೈನಲ್‌ನಲ್ಲಿ ಸೋತಿದ್ದರು. ಆದಾಗ್ಯೂ ತಲಾ 12045 ಅಂಕ ಗಳಿಸಿ ಅಗ್ರ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಮಹಿಳೆಯರ ಸಿಂಗಲ್ಸ್‌ನಲ್ಲಿ ಅಮೆರಿಕದ ಆಟಗಾರ್ತಿ ಸೆರೆನಾ ವಿಲಿಯಮ್ಸ್ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಜರ್ಮನಿಯ ಆ್ಯಂಜೆಲಿಕ್ ಕರ್ಬರ್ ಎರಡನೆ ಸ್ಥಾನದಲ್ಲಿದ್ದಾರೆ.
Next Story





