Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಂ ಅಧ್ಯಕ್ಷತೆಯಲ್ಲಿ ‘ಬೆಂಗಳೂರು...

ಸಿಎಂ ಅಧ್ಯಕ್ಷತೆಯಲ್ಲಿ ‘ಬೆಂಗಳೂರು ವಿಷನ್‌ಗ್ರೂಪ್’: ಸಚಿವ ಕೆ.ಜೆ.ಜಾರ್ಜ್

ವಾರ್ತಾಭಾರತಿವಾರ್ತಾಭಾರತಿ10 May 2016 11:43 PM IST
share
ಸಿಎಂ ಅಧ್ಯಕ್ಷತೆಯಲ್ಲಿ ‘ಬೆಂಗಳೂರು ವಿಷನ್‌ಗ್ರೂಪ್’: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು, ಮೇ 10: ರಾಜಧಾನಿ ಬೆಂಗಳೂರಿನ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಸಲಹೆ, ಸೂಚನೆಗಳನ್ನು ಕ್ರೋಡೀಕರಿಸಲು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ‘ಬೆಂಗಳೂರು ವಿಷನ್‌ಗ್ರೂಪ್’ ರಚನೆ ಮಾಡಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯ ನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಬೆಂಗಳೂರು ವಿಷನ್ ಗ್ರೂಪ್ ರಚಿಸಲಾಗಿದ್ದು, ಇದರಿಂದಾಗಿ ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಅಧಿಕಾರ ಮೊಟಕುಗೊಳ್ಳುವುದಿಲ್ಲ ಎಂದು ಸ್ಪಷ್ಟನೆನೀಡಿದರು.
ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ಹೆಚ್ಚಿನ ಆಸಕ್ತಿ ಇರುವವರನ್ನು ಈ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಅಲ್ಲದೆ, ವಲಯವಾರು ತಜ್ಞರನ್ನು ಸೇರಿಸಿಕೊಂಡು ಸ್ಥಳೀಯವಾಗಿ ಅಭಿವೃದ್ಧಿ ಯೋಜನೆಗಳನ್ನು ಸಿದ್ಧಪಡಿಸಲು ಚಿಂತನೆ ನಡೆಸಲಾಗಿದೆ ಎಂದು ಜಾರ್ಜ್ ಹೇಳಿದರು.

ವಿಷನ್‌ಗ್ರೂಪ್ ನಗರದ ಅಭಿವೃದ್ಧಿ ಹಾಗೂ ಸಮಸ್ಯೆಗಳಿಗೆ ಪರಿಹಾರಗಳನ್ನು ಮಾತ್ರ ಸೂಚಿಸಲಿದ್ದು, ಅವುಗಳನ್ನು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿರುವ ಮಹಾ ನಗರ ಯೋಜನಾ ಸಮಿತಿಯು ಪರಿಶೀಲನೆ ನಡೆಸಿ ಉತ್ತಮವಾದದ್ದು ಆಯ್ಕೆ ಮಾಡಿಕೊಳ್ಳಲಿದೆ ಎಂದು ಅವರು ತಿಳಿಸಿದರು.

ಬೆಂಗಳೂರು ನಗರದ ಅಭಿವೃದ್ಧಿಯ ದೃಷ್ಟಿಯಿಂದ ಸಮಾಜದ ವಿವಿಧ ವಲಯದವರೊಂದಿಗೆ ಕೈಜೋಡಿಸ ಲಾಗುತ್ತಿದೆ. ವಿಷನ್‌ಗ್ರೂಪ್‌ನಲ್ಲಿ ಇನ್ಫೋಸಿಸ್ ಮುಖಸ್ಥ ನಾರಾಯಣಮೂರ್ತಿ, ವಿಪ್ರೋ ಮುಖ್ಯಸ್ಥ ಅಝೀಮ್‌ಪ್ರೇಮ್‌ಜಿ, ಬಯೋಕಾನ್ ಮುಖ್ಯಸ್ಥೆ ಕಿರಣ್‌ಮಜುಂದಾರ್ ಷಾ, ಮೋಹನ್‌ದಾಸ್ ಪೈ ಸೇರಿದಂತೆ ಇನ್ನಿತರ ಗಣ್ಯರನ್ನು ಈ ತಂಡಕ್ಕೆ ಸೇರಿಸಿಕೊಳ್ಳ ಲಾಗಿದೆ ಎಂದು ಜಾರ್ಜ್ ಹೇಳಿದರು.
ಬೆಂಗಳೂರು ವಿಷನ್‌ಗ್ರೂಪ್ ರಚನೆ ಸಂಬಂಧ ಎ.28ರಂದು ಹೊರಡಿಸಲಾಗಿದ್ದ ಆದೇಶವನ್ನು ಮಾರ್ಪಡಿಸಿ ಬಿಬಿಎಂಪಿ ಮೇಯರ್ ಹಾಗೂ ನಗರಾಭಿವೃದ್ಧಿ ತಜ್ಞ ವಿವೇಕ್ ಮೆನನ್ ಅವರನ್ನು ಒಳಗೊಂಡ ಒಟ್ಟು 25 ಸದಸ್ಯರಿರುವ ತಂಡವನ್ನು ರಚಿಸಿ ಪರಿಷ್ಕೃತ ಆದೇಶವನ್ನು ಹೊರಡಿಸಲಾಗಿದೆ ಎಂದು ಜಾರ್ಜ್ ಹೇಳಿದರು.

ನಗರದ ಘನತ್ಯಾಜ್ಯ ನಿರ್ವಹಣೆ ಸಂಬಂಧ ಕಾಲ ಕಾಲಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಹಕಾರಿಯಾ ಗುವಂತೆ ಘನತ್ಯಾಜ್ಯ ನಿರ್ವಹಣಾ ಸಮಿತಿಯನ್ನು ರಚನೆ ಮಾಡುವ ಚಿಂತನೆ ನಡೆದಿದೆ. ಈ ತಿಂಗಳ ಅಂತ್ಯಕ್ಕೆ ವಿಷನ್‌ಗ್ರೂಪ್‌ನ ಮೊದಲ ಸಭೆ ನಡೆಯಲಿದೆ. ಇದಕ್ಕೆ ಯಾವುದೆ ಪ್ರತ್ಯೇಕ ಕಚೇರಿಯಿರುವುದಿಲ್ಲ ಎಂದು ಅವರು ತಿಳಿಸಿದರು.
ಬಿಬಿಎಂಪಿ ವಿಭಜನೆ ಸಂಬಂಧ ವಿಧಾನ ಮಂಡಲ ದಲ್ಲಿ ಅನುಮೋದನೆ ಪಡೆದುಕೊಂಡಿದ್ದ ವಿಧೇಯಕ ವನ್ನು ರಾಜ್ಯಪಾಲರು ರಾಷ್ಟ್ರಪತಿಗೆ ಕಳುಹಿಸಿಕೊಟ್ಟಿದ್ದಾರೆ. ರಾಷ್ಟ್ರಪತಿ ಭವನದಿಂದ ಕೆಲವು ಸ್ಪಷ್ಟನೆಗಳನ್ನು ಕೋರಿದ್ದು,ಸರಕಾರ ಅದನ್ನು ಒದಗಿಸಲಿದೆ ಎಂದು ಜಾರ್ಜ್ ಪ್ರಶ್ನೆ ಯೊಂದಕ್ಕೆ ಉತ್ತರಿಸಿದರು.
ಮೆಟ್ರೊ ನಿಲ್ದಾಣಗಳ ಬಳಿ ವಾಹನ ನಿಲುಗಡೆ ಮಾಡಲು ಸ್ಥಳಾವಕಾಶವಿಲ್ಲದೆ ಸಾರ್ವಜನಿಕರು ಪರದಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಸ್ಥಳ ಲಭ್ಯವಿರುವ ಕಡೆಗಳಲ್ಲಿ ಬಹುಮಹಡಿ ವಾಹನ ನಿಲುಗಡೆ ಕಟ್ಟಡಗಳನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಕಬ್ಬನ್‌ಪಾರ್ಕ್ ಮೆಟ್ರೊ ನಿಲ್ದಾಣದ ಬಳಿ ಗಣಕೀಕೃತ ಕಾರು ನಿಲುಗಡೆ ವ್ಯವಸ್ಥೆ ಸಂಬಂಧ ಚರ್ಚೆ ನಡೆದಿದೆ ಎಂದು ಅವರು ತಿಳಿಸಿದರು.

ಬಿಬಿಎಂಪಿ ವಿಭಜನೆಗೆ ಬದ್ಧ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆಗೆ ರಾಜ್ಯ ಸರಕಾರ ಬದ್ಧವಾಗಿದ್ದು, ಈ ವಿಚಾರದಲ್ಲಿ ಹಿಂದಕ್ಕೆ ಸರಿಯುವ ಪ್ರಶ್ನೆಯೆ ಇಲ್ಲ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿದ ಅವರು, ವಿಧಾನ ಮಂಡಲದ ಉಭಯ ಸದನಗಳಲ್ಲಿ ಬಿಬಿಎಂಪಿ ವಿಭಜನೆಗೆ ಸಂಬಂಧಿಸಿದ ವಿಧೇಯಕ ವನ್ನು ಅಂಗೀ ಕರಿಸಿ ರಾಜ್ಯಪಾಲರ ಅನುಮೋದನೆಗೆ ಕಳುಹಿಸಿಕೊ ಡಲಾಗಿತ್ತು ಎಂದರು.
ಆದರೆ, ರಾಜ್ಯಪಾಲರು ವಿಧೇಯಕವನ್ನು ರಾಷ್ಟ್ರ ಪತಿಗೆ ರವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ, ನಗರಾಭಿವೃದ್ಧಿ ಇಲಾಖೆಯು ರಾಜ್ಯ ಸರಕಾರದಿಂದ ಕೇಳಿದ್ದ ವಿವರಣೆಗಳನ್ನು ಒದಗಿಸಲಾಗಿದೆ. ರಾಷ್ಟ್ರಪತಿ ಮಸೂದೆಗೆ ಅಂಕಿತ ಹಾಕಿದರೆ ಬಿಬಿಎಂಪಿಯನ್ನು ವಿಭಜನೆ ಮಾಡಿ, ವಿಸರ್ಜಿಸ ಲಾಗುವುದು ಎಂದು ಜಾರ್ಜ್ ಹೇಳಿದರು.
ರಾಷ್ಟ್ರಪತಿಗಳ ಅಂಕಿತದ ಬಳಿಕವಷ್ಟೇ ಬಿಬಿಎಂಪಿ ಯನ್ನು ಮೂರು ವಿಭಾಗಗಳಾಗಿ ವಿಭಜನೆ ಮಾಡುವ ಪ್ರಕ್ರಿಯೆ ನಡೆಯಲಿದೆ ಎಂದ ಜಾರ್ಜ್, ಬಿಬಿಎಂಪಿ ವಿಸರ್ಜನೆ ಬಳಿಕ ಮರು ಚುನಾವಣೆ ನಡೆಯುವ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು. ನಗರದ ಬೆಳ್ಳಂದೂರು ಕೆರೆ ಪುನಶ್ಚೇತನ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಕೆರೆಯ ಸಂರಕ್ಷಣೆ ಕಾರ್ಯ ವನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಲು ಅಧಿಕಾರಿಗಳು, ತಜ್ಞರು ಹಾಗೂ ಸರಕಾರೇತರ ಸಂಘ ಸಂಸ್ಥೆಗಳನ್ನೊಳಗೊಂಡ 18 ಮಂದಿ ‘ಪರಿಣಿತರ ಸಮಿತಿ’ಯನ್ನು ರಚಿಸಿ ಸರಕಾರ ಆದೇಶ ಹೊರಡಿಸ ಲಾಗಿದೆ ಎಂದು ಜಾರ್ಜ್ ಹೇಳಿದರು.


ಮೆಟ್ರೊ ಮಾದರಿಯಲ್ಲಿ ಮೊನೊ
ಮೆಟ್ರೊ ಮಾದರಿಯಲ್ಲಿ ಮೊನೊ ರೈಲು ಸಂಚಾರ ಆರಂಭಿಸುವ ಸಂಬಂಧ ಚಿಂತನೆ ನಡೆದಿದ್ದು, ಮಲೇಶಿಯಾ ಮೂಲದ ಸಂಸ್ಥೆಯೊಂದು ಆಸಕ್ತಿ ವಹಿಸಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಬಿಬಿಎಂಪಿ ಮೈತ್ರಿ ಭದ್ರ
ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಮೈತ್ರಿ ಯೂ ಬಿಬಿಎಂಪಿಗೆ ಮಾತ್ರ ಸೀಮಿತವಾಗಿದ್ದು, ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ಗಳಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತಿರುವುದು ಅವರಿಗೆ ಬಿಟ್ಟ ವಿಚಾರ. ಆದರೆ, ಬಿಬಿಎಂಪಿಯಲ್ಲಿ ಜೆಡಿಎಸ್ ಜೊತೆ ಮಾಡಿಕೊಂಡಿರುವ ಮೈತ್ರಿ ಐದು ವರ್ಷಗಳ ಕಾಲ ಮುಂದುವರಿಯಲಿದೆ ಎಂದು ಜಾರ್ಜ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X