Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೇತ್ರಾವತಿ ಸ್ನಾನಘಟ್ಟದಲ್ಲಿ ನೀರಿನ...

ನೇತ್ರಾವತಿ ಸ್ನಾನಘಟ್ಟದಲ್ಲಿ ನೀರಿನ ಪ್ರಮಾಣ ಇಳಿಕೆ: ಗ್ರಾ.ಪಂ.ನಿಂದ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ11 May 2016 8:21 PM IST
share
ನೇತ್ರಾವತಿ ಸ್ನಾನಘಟ್ಟದಲ್ಲಿ ನೀರಿನ ಪ್ರಮಾಣ ಇಳಿಕೆ: ಗ್ರಾ.ಪಂ.ನಿಂದ ಪರಿಶೀಲನೆ

ಬೆಳ್ತಂಗಡಿ, ಮೇ 11: ನೇತ್ರಾವತಿ ನದಿಯಲ್ಲಿ ನೀರು ಕಡಿಮೆಯಾಗುತ್ತಾ ಬರುತ್ತಿದ್ದು ಯಾತ್ರಾರ್ಥಿಗಳಿಗೆ ತೀರ್ಥಸ್ನಾನಕ್ಕೆ ತೊಂದರೆಯಾಗುತ್ತಿರುವುದರೊಂದಿಗೆ ನದಿಯ ಮೀನುಗಳು ಹಾಗೂ ಜಲಚರಗಳಿಗೂ ತೊಂದರೆಯಾಗುತ್ತಿರುವ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನೇತ್ರಾವತಿ ನದಿ ವೀಕ್ಷಣೆ ಕಾರ್ಯಕ್ರಮ ಬುಧವಾರ ಕ್ಷೇತ್ರದ ನೇತ್ರಾವತಿ ಸ್ನಾನಘಟ್ಟದಲ್ಲಿ ನಡೆಯಿತು.

ಸ್ನಾನಘಟ್ಟಕ್ಕೆ ಪ್ರತಿದಿನ 10 ರಿಂದ 15 ಸಾವಿರ ಭಕ್ತರು ಸ್ನಾನ ಮಾಡಲು ಬರುತ್ತಾರೆ. ವಿಶೇಷ ದಿನಗಳಲ್ಲಿ ಇದು ತುಂಬಾ ಹೆಚ್ಚಾಗಿರುತ್ತದೆ. ಇಲ್ಲಿರುವ ವೆಂಟೆಡ್ ಡ್ಯಾಂನಿಂದಾಗಿ ಅಂತರ್ಜಲ ಹೆಚ್ಚಾಗಿದೆ. ಆದರೆ ಈಗಿನ ಸನ್ನಿವೇಶದಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ನೀರಿನ ಕೊರತೆ ಕಂಡು ಬರುತ್ತಿದೆ. ಆದರೂ ಕ್ಷೇತ್ರ ಮತ್ತು ಪಂಚಾಯತ್ ಆಡಳಿತ ಒಟ್ಟಾಗಿ ಭಕ್ತರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತಿದೆ.

ನೀರಿನ ಮಿತಬಳಕೆಯ ಬಗ್ಗೆ ಜನರಿಗೆ ತಿಳುವಳಿಕೆ ನೀಡುತ್ತಿದೆ. ಎಸ್‌ಡಿಎಂ ಕಾಲೇಜಿನ ಎನ್ನೆಸ್ಸೆಸ್ ಹಾಗೂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಪ್ರತಿ ರವಿವಾರ ಮತ್ತು ಸೋಮವಾರ ಯಾತ್ರಿಕರಿಗೆ ಸ್ವಚ್ಛತೆಯ ಬಗ್ಗೆ ತಿಳುವಳಿಕೆ ನೀಡುತ್ತಿದ್ದಾರೆ.

ಪಂಚಾಯತ್ ವ್ಯಾಪ್ತಿಯಲ್ಲಿ ಇನ್ನು ಹೊಸ ಮನೆ ಮಂಜೂರು ಮಾಡುವಾಗ ಕಡ್ಡಾಯವಾಗಿ ಇಂಗು ಗುಂಡಿ, ಮಳೆಕೊಯ್ಲು ಮಾಡಲು ಸೂಚಿಸಲಾಗುವುದು. ಕೊರತೆಯ ನಡುವೆಯೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ, ಇದೇ ಸ್ಥಿತಿ ಮುಂದುವರಿದರೆ ಕುಡಿಯುವ ನೀರಿಗೂ ತೊಂದರೆ ಎದುರಾಗಲಿದೆ ಮುಂದಿನ ದಿನಗಳಲ್ಲಿ ನದಿಯಲ್ಲಿನ ಕಿಂಡಿ ಅಣೆಕಟ್ಟಿನಲ್ಲಿ ಹೂಳು ತೆಗೆದು ಸ್ವಚ್ಛತಾ ಕಾರ್ಯಕ್ರಮದ ಬಗ್ಗೆ ಚಿಂತಿಸಲಾಗಿದೆ ಎಂದು ಗ್ರಾ.ಪಂ. ಆಡಳಿತ ವಿವರಿಸಿದೆ.

ಕ್ಷೇತ್ರಕ್ಕೆ ನೇತ್ರಾವತಿ ನದಿಯೇ ಜೀವಾಳ. ಅಲ್ಲದೆ ತಾಲೂಕಿನ ಲಕ್ಷಾಂತರ ಮಂದಿ ಇದನ್ನು ನಂಬಿ ಜೀವನ ಮಾಡುತ್ತಿದ್ದಾರೆ. ಹೀಗಾಗಿ ನೇತ್ರಾವತಿ ತಿರುವು ಯೋಜನೆಯನ್ನು ಪಂಚಾಯತ್ ಆಡಳಿತ ತೀವ್ರವಾಗಿ ವಿರೋಧಿಸಿದೆಯಲ್ಲದೆ ಈ ಬಗ್ಗೆ ನಿರ್ಣಯ ಮಾಡಿ ಸರಕಾರಕ್ಕೆ ಕಳುಹಿಸಿದೆ. ಅಲ್ಲದೆ ಮೇ 19 ರಂದು ನಡೆಯುವ ತಾಲೂಕು ಬಂದ್‌ಗೆ ಸದಸ್ಯರು ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ ಎಂದು ಆಡಳಿತ ವಿವರಿಸಿದೆ.

ವೀಕ್ಷಣೆಯ ಸಂದರ್ಭ ಗ್ರಾಪಂ ಅಧ್ಯಕ್ಷ ಅಚ್ಯುತ ಪೂಜಾರಿ, ಜಿಪಂ ಸದಸ್ಯ ಕೊರಗಪ್ಪ ನಾಯ್ಕಾ, ತಾಪಂ ಸದಸ್ಯೆ ಧನಲಕ್ಷ್ಮೀ ಜನಾರ್ಧನ್, ದೇವಳ ವ್ಯವಸ್ಥಾಪಕ ಹರೀಶ್ ರಾವ್, ಪಿಡಿಒ ಉಮೇಶ್ ಕೆ., ಸದಸ್ಯರಾದ ಶ್ರೀನಿವಾಸ ರಾವ್, ಪ್ರಭಾಕರ ಪೂಜಾರಿ, ಸುಧಾಕರ ಗೌಡ, ಸಿದ್ಧಿಕ್, ದೇವಸ್ಯ ಟಿ.ವಿ., ಲಕ್ಷ್ಮೀ ಭಟ್, ರೀನಾ ಶಿಬಿ, ರವಿಜ ಎಸ್. ರಾವ್., ಹೊನ್ನಮ್ಮ, ಪ್ರೇಮಾ, ಸಿಬ್ಬಂದಿ ದೇವಿಪ್ರಸಾದ್ ಬೊಳ್ಮ ಮತ್ತು ಗ್ರಾಪಂ ಸಿಬ್ಬಂದಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X