Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಥಶಿಲ್ಪಿ ಅಶ್ವತ್ಥಪುರ ಬಾಬುರಾಯ...

ರಥಶಿಲ್ಪಿ ಅಶ್ವತ್ಥಪುರ ಬಾಬುರಾಯ ಆಚಾರ್ಯರಿಗೆ ಗ್ರಾಮಸಭಾ ಗೌರವ

ತೆಂಕಮಿಜಾರು ಗ್ರಾಮಸಭೆ

ವಾರ್ತಾಭಾರತಿವಾರ್ತಾಭಾರತಿ11 May 2016 8:40 PM IST
share
ರಥಶಿಲ್ಪಿ ಅಶ್ವತ್ಥಪುರ ಬಾಬುರಾಯ ಆಚಾರ್ಯರಿಗೆ ಗ್ರಾಮಸಭಾ ಗೌರವ

ಮೂಡುಬಿದಿರೆ, ಮೇ 11: ಇಲ್ಲಿನ ತೆಂಕಮಿಜಾರು ಗ್ರಾಮ ಪಂಚಾಯತ್‌ನ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ದ್ವಿತಿಯ ಸಾಲಿನ ಗ್ರಾಮಸಭೆಯಲ್ಲಿ ರಥಶಿಲ್ಪಿ, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಅಶ್ವತ್ಥಪುರ ಬಾಬುರಾಯ ಆಚಾರ್ಯರಿಗೆ ಗ್ರಾಮ ಸಭಾ ಗೌರವವನ್ನು ನೀಡಿ ಗೌರವಿಸಲಾಯಿತು.

ಕಳೆದ ವರ್ಷ ಯಕ್ಷಗಾನದ ಹಾಸ್ಯ ಕಲಾವಿದ ಮಿಜಾರು ಅಣ್ಣಪ್ಪರಿಗೆ ಈ ಗೌರವವನ್ನು ನೀಡುವ ಮೂಲಕ ಈ ಪುರಸ್ಕಾರವನ್ನು ಆರಂಭಿಸಲಾಗಿದ್ದು, ಗ್ರಾ.ಪಂ.ವ್ಯಾಪ್ತಿಯಲ್ಲಿರುವ ಸಾಧಕರನ್ನು ಗುರುತಿಸುವ ಉತ್ತಮ ಕೆಲಸವನ್ನು ಪಂಚಾಯತ್ ಮಾಡುತ್ತಾ ಬರುತ್ತಿದೆ.

ಸರಕಾರಿ ಶಾಲೆಗಳಿಗೂ ಬಸ್ಸಿನ ವ್ಯವಸ್ಥೆ ಕಲ್ಪಿಸಿ

ಖಾಸಗಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಅಲ್ಲಿ ಮಕ್ಕಳಿಗೆ ಬೇಕಾದ ಸೌಕರ್ಯಗಳು ಕೂಡಾ ಹೆಚ್ಚಿವೆ ಅಲ್ಲದೆ ಮಕ್ಕಳಿಗೆ ಹೋಗಿ ಬರಲು ಬಸ್ಸಿನ ವ್ಯವಸ್ಥೆಯೂ ಇದೆ. ಆದ್ದರಿಂದ ಸರಕಾರಿ ಶಾಲೆಗಳಿಗೂ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಿದರೆ ಶಾಲೆಗೆ ಬರುವ ಮಕ್ಕಳ ಸಂಖ್ಯೆಯೂ ಹೆಚ್ಚಾಗಬಹುದೆಂದು ಸದಸ್ಯ ರಮೇಶ್ ಶೆಟ್ಟಿ ಶಿಕ್ಷಣ ಇಲಾಖಾಧಿಕಾರಿಗಳನ್ನು ಆಗ್ರಹಿಸಿದರು. ಸರಕಾರಿ ಶಾಲೆಗಳಿಗೆ ಬಸ್ಸಿನ ವ್ಯವಸ್ಥೆಯನ್ನು ಮಾಡುವ ಯೋಜನೆಗಳು ಬಂದಿಲ್ಲ. ಶಾಲೆಗೆ ಬರುವ ಕೆಲವು ಮಕ್ಕಳಿಗೆ ವಾಹನದ ಚಾರ್ಜನ್ನು ನೀಡಲಾಗುವುದು. ಮುಂದೆ ಈ ಬಗ್ಗೆ ಗ್ರಾಮಸಭೆಯಲ್ಲಿ ಬಂದ ಮನವಿಯನ್ನು ಸರಕಾರದ ಗಮನಕ್ಕೆ ತರಲಾಗುವುದೆಂದು ಶಿಕ್ಷಣ ಇಲಾಖೆಯ ರಾಜಶ್ರೀ ತಿಳಿಸಿದರು.

ಮೆಸ್ಕಾಂ ಇಲಾಖೆಯಿಂದ ಆಗುತ್ತಿರುವ ಸಮಸ್ಯೆಯ ಬಗ್ಗೆ, ತೋಟಗಾರಿಕೆ ಮತ್ತು ಕೃಷಿ ಇಲಾಖೆಯಿಂದ ಸಣ್ಣ ರೈತರಿಗೆ ಸಿಗುವ ಸವಲತ್ತುಗಳ ಬಗ್ಗೆ ಚರ್ಚೆ ನಡೆಯಿತು.

ನೀರಿನ ಸಮಸ್ಯೆಯಿಲ್ಲ

ನೀರಿಲ್ಲ ಎಂದು ಪ್ರತಿ ವರ್ಷವೂ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಪಂಚಾಯತ್‌ನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಆದರೆ ಈ ಬಾರಿ ನೀರಿಲ್ಲ ಎಂಬ ಮಾತು ಗ್ರಾಮಸಭೆಯಲ್ಲಿ ಕೇಳಿ ಬಂದಿಲ್ಲ. ಕಾರಣ ಕಳೆದ ಮಳೆಗಾಲದ ಸಮಯದಲ್ಲಿ ನೂತನ ಮಾದರಿಗಳಲ್ಲಿ ಅಣೆಕಟ್ಟುಗಳಲ್ಲಿ ನೀರು ನಿಲ್ಲುವಂತೆ ಮಾಡಿರುವುದರಿಂದ ನೀರಿನ ಸಮಸ್ಯೆ ಪಂಚಾಯತ್ ವ್ಯಾಪ್ತಿಗೆ ಬಾಧಿಸಿಲ್ಲದಿರುವುದು ಗ್ರಾಮಸ್ಥರಿಗೆ ಸಂತಸ ನೀಡಿದೆ.

ವಿವಿಧ ಇಲಾಖಾಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಉಪಾಧ್ಯಕ್ಷೆ ಹೇಮಾವತಿ ಹಾಗೂ ಸದಸ್ಯರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾಯೀಶ ಚೌಟ ಸ್ವಾಗತಿಸಿ ಜಮಾ ಖರ್ಚಿನ ವರದಿ ಮಂಡಿಸಿದರು. ಸಿಬಂದಿ ರಾಕೇಶ್ ಭಟ್ ವಾರ್ಷಿಕ ವರದಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X