ಆಳ್ವಾಸ್‌ನ ಕಾವ್ಯಾಗೆ ಕ್ರೀಡಾರತ್ನ ಪ್ರಶಸ್ತಿ

ಮೂಡುಬಿದಿರೆ, ಮೇ 11: ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಕಾವ್ಯ ಎಂ.ಆರ್. ಕರ್ನಾಟಕ ಸರಕಾರ ಕೊಡಮಾಡುವ 2014ನೆ ಸಾಲಿನ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮೈಸೂರಿನ ಮಾನಸಗಂಗೋತ್ರಿಯಲ್ಲಿ ಜರಗಿದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶಸ್ತಿಯನ್ನು ವಿತರಿಸಿದರು.
ಸುಮಾರು 10 ಬಾರಿ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ ಕಾವ್ಯಾ ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿಗೂ ಭಾಜನರಾಗಿದ್ದಾರೆ. ಇವರ ಸಾಧನೆಗೆ ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ.
Next Story





