Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೀರು ಪೂರೈಸುವಂತೆ ಆಗ್ರಹಿಸಿ ಖಾಲಿ ಕೊಡ...

ನೀರು ಪೂರೈಸುವಂತೆ ಆಗ್ರಹಿಸಿ ಖಾಲಿ ಕೊಡ ಹಿಡಿದು ಧರಣಿ

ವಾರ್ತಾಭಾರತಿವಾರ್ತಾಭಾರತಿ11 May 2016 9:34 PM IST
share
ನೀರು ಪೂರೈಸುವಂತೆ ಆಗ್ರಹಿಸಿ ಖಾಲಿ ಕೊಡ ಹಿಡಿದು ಧರಣಿ

ಕಾರವಾರ, ಮೇ 11: ಕಳೆದ ಕೆಲವು ದಿನಗಳಿಂದ ತಾಲೂಕಿನ ಅಸ್ನೋಟಿ ಗ್ರಾಪಂ ವ್ಯಾಪ್ತಿಯಲ್ಲಿ ಜಲ ಕ್ಷಾಮದಿಂದ ಜನರು ಕಂಗಾಲಾಗಿದ್ದು ಸೂಕ್ತ ನೀರಿನ ವ್ಯವಸ್ಥೆಯನ್ನು ಮಾಡಬೇಕು ಎಂದು ಅಸ್ನೋಟಿ ಗ್ರಾಮಸ್ಥರು ಖಾಲಿ ಕೊಡ ಪ್ರದರ್ಶಿಸುವ ಮೂಲಕ ತಾಲೂಕು ಆಡಳಿತದ ವಿರುದ್ಧ ಧರಣಿ ನಡೆಸಿದರು.

ಕಾರವಾರದ ಅಸ್ನೋಟಿ ಗ್ರಾಪಂ ವ್ಯಾಪ್ತಿಯ ಅಂಬೇವಾಡಾ, ಪ್ಲೊಟ್, ಮಡ್ಡಿಮಕ್ಕಿ, ಮಧ್ಯವಾಡಾ, ಭಗತ್‌ವಾಡಾ, ಹೊಸಾಳಿ ಕ್ರಾಸ್ ಸೇರಿದಂತೆ ವಿವಿಧೆಡೆಯ ನೀರಿನ ಮೂಲಗಳೆಲ್ಲ ಬತ್ತಿ ಹೋಗಿವೆ. ಗ್ರಾಪಂನಿಂದ ನಾಲ್ಕೈದು ದಿನಕೊಮ್ಮೆ ನೀರು ಪೂರೈಸುತ್ತಿದ್ದರೂ ಸಾಲುತ್ತಿಲ್ಲ ಎನ್ನುವುದು ಧರಣಿಕಾರರ ಅಳಲಾಗಿದ್ದು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ. ಶಾಸಕ ಸತೀಶ್ ಸೈಲ್, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಇತ್ತೀಚೆಗೆ ಕರೆದಿದ್ದ ಸಭೆಯಲ್ಲಿ ಅಸ್ನೋಟಿ ಗ್ರಾಪಂ ಪಿಡಿಒ ನೀರಿನ ಸಮಸ್ಯೆಯಿಲ್ಲ ಎಂದು ಹೇಳಿದ್ದಾರೆ. ಈಗ ಕೇಳಿದರೆ ನೀರಿನ ಮೂಲಗಳಲ್ಲಿ ಸಾಕಷ್ಟು ನೀರಿಲ್ಲ ಎನ್ನುತ್ತಾರೆ. ನಾಲ್ಕು ದಿನಕ್ಕೊಮ್ಮೆ ನೀರು ನೀಡಿದರೆ ಹೇಗೆ ಸಾಕಾಗುತ್ತದೆ. ಪಿಡಿಒ ನಿರ್ಲಕ್ಷದಿಂದ ನೀರಿನ ಸಮಸ್ಯೆ ಉಲ್ಬಣಿಸಿದೆ ಎಂದು ತಾಪಂ ಸದಸ್ಯ ಸುರೇಂದ್ರ ಗಾಂವ್ಕರ ದೂರಿದರು. ಗ್ರಾಪಂ ವ್ಯಾಪ್ತಿಯ ಬಹುತೇಕ ಮನೆಗಳಲ್ಲಿ ನಳ ಅಳವಡಿಸಲಾಗಿದೆ. ಆದರೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಕುಡಿಯುವ ನೀರಿಗೆ ತೊಂದರೆಯಾದರೆ ಟ್ಯಾಂಕರ್ ಮೂಲಕ ನೀರು ನೀಡಬೇಕೆಂದು ಸರಕಾರ ಆದೇಶಿಸಿದೆ. ಗ್ರಾಪಂ ಟ್ಯಾಂಕರ್ ನೀರು ನೀಡುತ್ತಿಲ್ಲ ಎಂದು ಸ್ಥಳೀಯ ಮಹಿಳೆ ನಿಖಿತಾ ಆರೋಪಿಸಿದರು. ಕೆರೆಗಳನ್ನು ಕಾಲಕಾಲಕ್ಕೆ ಹೂಳೆತ್ತಿ ಸುಸ್ಥಿತಿಯಲ್ಲಿ ಇಟ್ಟಿದ್ದರೆ ಪ್ರಸಕ್ತ ವರ್ಷ ಈ ರೀತಿ ನೀರಿನ ತೊಂದರೆಯಾಗುತ್ತಿರಲಿಲ್ಲ. ಅಧಿಕಾರಿಗಳ ಹಾಗೂ ಗ್ರಾಪಂನವರ ನಿರ್ಲಕ್ಷದಿಂದ ನಮ್ಮೂರಿಗೆ ನೀರಿನ ಅಭಾವ ಕಾಡುತ್ತಿದೆ. ನೀರು ನೀಡುವುದು ಅಧಿಕಾರಿಗಳ ಕರ್ತವ್ಯವಾಗಿದ್ದು ಬೇರೆ ಸಬೂಬು ನಮಗೆ ಬೇಕಾಗಿಲ್ಲ. ನೀರು ನೀಡಬೇಕು. ಇಲ್ಲದಿದ್ದಲ್ಲಿ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು. ಅಲ್ಲದೆ ಸ್ಥಳಕ್ಕೆ ಗ್ರಾಪಂ ಅಧ್ಯಕ್ಷರು ಹಾಗೂ ಶಾಸಕರು ಬರುವಂತೆ ಧರಣಿಕಾರರು ಪಟ್ಟು ಹಿಡಿದರು. ಬಳಿಕ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸತೀಶ ಸೈಲ್, ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ಗ್ರಾಮಸ್ಥರಿಗೆ ಯಾವುದೇ ತೊಂದರೆಯಾದರೂ ನೇರವಾಗಿ ನನ್ನನ್ನು ಭೇಟಿ ಮಾಡಿ. ಸದ್ಯಕ್ಕೆ ಟ್ಯಾಂಕರ್ ಮೂಲಕ ನೀರು ನೀಡಲು ಅಧಿಕಾರಿಗಳಿಗೆ ಸೂಚಿಸುತ್ತೇನೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನದಲ್ಲಿದ್ದು ಆದಷ್ಟು ಶೀಘ್ರ ಕಾಮಗಾರಿ ಪೂರ್ಣಗೊಳಿಸಿ ನೀರು ನೀಡಲು ಸೂಚಿಸುತ್ತೇನೆ ಎಂದು ಭರವಸೆ ನೀಡಿದರು.

ಒಂದು ವಾರದೊಳಗೆ ನೀರಿನ ಸಮಸ್ಯೆ ಬಗೆಹರಿಯದ ಪಕ್ಷದಲ್ಲಿ ರಸ್ತೆ ತಡೆ ನಡೆಸುವುದಾಗಿ ಗ್ರಾಮಸ್ಥರು ಶಾಸಕರ ಸಮ್ಮುಖದಲ್ಲಿಯೇ ಅಧಿಕಾರಿಗಳಿಗೆ ಎಚ್ಚರಿಸಿದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಪ್ರಶಾಂತ್‌ಕುಮಾರ್, ತಹಶೀಲ್ದಾರ್ ಜಿ.ಎನ್.ನಾಯ್ಕ, ಜಿಪಂ ಹಾಗೂ ತಾಪಂ ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X