ಬಂಟರ ಯಾನೆ ನಾಡವರ ಮಾತೃ ಸಂಘದ ಶತಮಾನೋತ್ಸವ ಕಟ್ಟಡ ಸಂಕೀರ್ಣಕ್ಕೆ ಶಿಲಾನ್ಯಾಸ

ಮಂಗಳೂರು, ಮೇ.12; ದೇಶದಲ್ಲಿರುವ ಹಲವಾರು ಸಮುದಾಯಗಳಿಗೆ ಹೋಲಿಸಿದರೆ ಬಂಟ ಸಮುದಾಯ ತಮ್ಮ ಸಮುದಾಯಕ್ಕೆ ನೀಡಿದ ಕೊಡುಗೆ ಅಪಾರವಾದದು ಎಂದು ಕರ್ನಾಟಕ ಡಿಜಿ ಮತ್ತು ಐಜಿಪಿ ಓಂಪ್ರಕಾಶ್ ಹೇಳಿದರು.
ನಗರದ ಬಂಟ್ಸ್ ಹಾಸ್ಟೆಲ್ ನಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಶತಮಾನೋತ್ಸವ ಕಟ್ಟಡಗಳ ಸಂಕೀರ್ಣದ ಶಿಲಾನ್ಯಾಸ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ತನ್ನ ಸಮುದಾಯಕ್ಕೋಸ್ಕರ ಪ್ರದರ್ಶಿಸುತ್ತಿರುವ ಒಗ್ಗಟ್ಟು, ಕರುಣೆ, ಸಹಾಯ ಮಾಡುವ ಮನಸ್ಸು ಬಂಟ ಸಮುದಾಯದಲ್ಲಿ ಜಾಸ್ತಿಯಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ.ಎನ್. ವಿನಯ್ ಹೆಗ್ಡೆ ಮತ್ತು ಎ.ಜೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎ.ಜೆ. ಶೆಟ್ಟಿ ನಾಮಫಲಕ ಅನಾವರಣಗೈದರು.
ಸಮಾರಂಭದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕಿ ಶಕುಂತಳಾ ಶೆಟ್ಟಿ, ವಿಧಾನಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ , ಮಾಜಿ ಸಚಿವ ನಾಗರಾಜ್ ಶೆಟ್ಟಿ, ಬಂಟರ ಸಂಘ ಮುಂಬಯಿ ಅಧ್ಯಕ್ಷ ವಿಶ್ವನಾಥ ಶೆಟ್ಟಿ ಕರ್ನಿರೆ, ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಶೇಖರ್ ಶೆಟ್ಟಿ, ಬಂಟರ ಸಂಘ ಮುಂಬಯಿ ಮಾಜಿ ಅಧ್ಯಕ್ಷ ಮೇರ್ಕಳ ತ್ಯಾಂಪಣ್ಣ ಶೆಟ್ಟಿ, ಮಾಜಿ ಶಾಸಕ ಬಿ.ಅಪ್ಪಣ್ಣ ಹೆಗ್ಡೆ, ಉದ್ಯಮಿ ಪದ್ಮನಾಭ ಪಯ್ಯಡೆ, ಸತೀಶ್ಚಂದ್ರ ಹೆಗ್ಡೆ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷೆ ಪ್ರೇಮಲತಾ ಸತೀಶ್ ಚಂದ್ರ ಹೆಗ್ಡೆ, ಎಂಆರ್‌ಜಿ ಗ್ರೂಪ್ ಚೇರ್‌ಮೆನ್ ಕೆ.ಪ್ರಕಾಶ್ ಶೆಟ್ಟಿ, ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಬ್ರಿಗೇಡಿಯರ್ ಐ.ಎನ್.ರೈ, ಮುಂಬಯಿ ಬಂಟರ ಸಂಘ ಮಹಿಳಾ ವಿಭಾಗ ಅಧ್ಯಕ್ಷೆ ಲತಾ ಜಯರಾಮ್ ಶೆಟ್ಟಿ, ಮಾಜಿ ಅಧ್ಯಕ್ಷೆ ಆಶಾ ಮನೋಹರ್ ಹೆಗ್ಡೆ, ಬೆಂಗಳೂರು ಬಂಟರ ಸಂಘ ಜೊತೆ ಕಾರ್ಯದರ್ಶಿ ಮಂಜುಳಾ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕೆಂಚನೂರು ಸೋಮಶೇಖರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮೇಘನಾಥ್ ಶೆಟ್ಟಿ, ಕೋಶಾಧಿಕಾರಿ ಸಿ.ಎ.ಮನಮೋಹನ ಶೆಟ್ಟಿ, ಜೊತೆ ಕಾರ್ಯದರ್ಶಿ ಹೇಮನಾಥ ಶೆಟ್ಟಿ ಕಾವು ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ನಿವ್ಯ ಶೆಟ್ಟಿ ಹಾಗೂ ಆರ್ಕಿಟೆಕ್ಟ್ ಸನತ್ ಕುಮಾರ್‌ರನ್ನು ಅಭಿನಂದಿಸಲಾಯಿತು.
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಹೇಮನಾಥ ಶೆಟ್ಟಿ ವಂದಿಸಿದರು. ನವೀನ್ ಶೆಟ್ಟಿ ಎಡ್ಮೆಮಾರ್, ರಾಜೇಶ್ವರಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.







