ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಮಂಜೇಶ್ವರ, ಮೇ 12: ಗಾಂಜಾ ಮಾರಾಟ ದಂಧೆಯಲ್ಲಿ ನಿರತರಾಗಿದ್ದ ಇಬ್ಬರನ್ನು ಮಂಜೇಶ್ವರ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ.
ಬಂಧಿತರನ್ನು ಬಡಾಜೆ ನಿವಾಸಿ ಮುಹಮ್ಮದ್ ಹನೀಫ್ (20), ಮಂಜೇಶ್ವರ ಗುಡ್ಡಕೇರಿ ನಿವಾಸಿ ಮುನೀರ್ ಮುಖ್ತಾರ್(23) ಎಂದು ಗುರುತಿಸಲಾಗಿದೆ. ಬಂಧಿತರಿಂದ 220 ಗ್ರಾಂ. ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
Next Story





