Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೃಷಿ ಹೊಂಡ ಕಾಮಗಾರಿಗಳಿಗೆ ಆದ್ಯತೆ ನೀಡಿ:...

ಕೃಷಿ ಹೊಂಡ ಕಾಮಗಾರಿಗಳಿಗೆ ಆದ್ಯತೆ ನೀಡಿ: ಜಯಶ್ರೀ ಮೊಗೇರ

ಕಾರವಾರ: ಜಿಪಂ ಮಾಸಿಕ ಕೆಡಿಪಿ ಸಭೆ

ವಾರ್ತಾಭಾರತಿವಾರ್ತಾಭಾರತಿ12 May 2016 10:16 PM IST
share
ಕೃಷಿ ಹೊಂಡ ಕಾಮಗಾರಿಗಳಿಗೆ ಆದ್ಯತೆ ನೀಡಿ: ಜಯಶ್ರೀ ಮೊಗೇರ

ಕಾರವಾರ, ಮೇ 12: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೃಷಿ ಹೊಂಡ, ಬೂ ಅಭಿವೃದ್ಧಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಒತ್ತಾಯಿಸಿದ್ದಾರೆ. ಅವರು ಜಿಲ್ಲಾ ಪಂಚಾಯತ್ ಮಾಸಿಕ ಕೆಡಿಪಿ ಸಭೆೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗಗಳು ಉದ್ಯೋಗ ಖಾತ್ರಿ ಅಡಿ ಹೆಚ್ಚಿನ ಕಾಮಗಾರಿಗಳನ್ನು ಸೃಷ್ಟಿಸಬೇಕು. ಕಳೆದ ವರ್ಷ 80 ಸಾವಿರ ಮಾನವ ದಿನಗಳಷ್ಟು ಕೆಲಸಗಳನ್ನು ಒದಗಿಸಲಾಗಿದೆ ಎಂದು ಅವರು ಹೇಳಿದರು.

ಬೀಜ ರಸಗೊಬ್ಬರ ದಾಸ್ತಾನು:

  ಮಳೆಗಾಲ ಆರಂಭದ ಪೂರ್ವದಲ್ಲೇ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಬೇಕು. ಕಳೆದ ವರ್ಷ ಮಳೆ ಸರಿಯಾಗಿ ಆಗದ ಹಿನ್ನೆಲೆಯಲ್ಲಿ ಬಿತ್ತನೆ ಬೀಜ ಕೊರತೆಯಾಗುವ ಸಾಧ್ಯತೆ ಇದ್ದು, ಈಗಲೇ ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು. ಎಲ್ಲಾ ರೀತಿಯ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಇರಿಸಬೇಕು. ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

 ವರದಿ ಸಲ್ಲಿಸಲು ಸೂಚನೆ: ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಹಾಗೂ ಕೆಆರ್‌ಐಡಿಎಲ್ ಮೂಲಕ ಜಿಲ್ಲೆಯಲ್ಲಿ ಹಲವು ಇಲಾಖೆಗಳ ನೂರಾರು ಕಟ್ಟಡಗಳನ್ನು ನಿರ್ಮಿಸಲಾಗಿದೆ. ಈ ಕುರಿತು ಆಯಾ ಇಲಾಖೆಗಳು ಪರಿಶೀಲನೆ ನಡೆಸಿ ಒಂದು ವಾರದ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಅವರು ಸೂಚನೆ ನೀಡಿದ ಅವರು, ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ಮತ್ತು ಸಮವಸ್ತ್ರಗಳನ್ನು ಶಾಲೆ ಪ್ರಾರಂಭವಾಗುವ ಮೊದಲೇ ಒದಗಿಸಬೇಕು ಎಂದರು. ಈ ಕುರಿತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಡಿಡಿಪಿಐ ಅವರಿಗೆ ತಿಳಿಸಿದರು.

ಶಿಷ್ಟಾಚಾರ ಪಾಲಿಸಿ: ಎಲ್ಲಾ ಇಲಾಖೆಗಳು ಯಾವುದೇ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿ, ಶಿಷ್ಟಾಚಾರ ಪ್ರಕಾರ ಕಾರ್ಯಕ್ರಮ ಆಯೋಜಿಸಬೇಕು. ಶಿಷ್ಟಾಚಾರ ಉಲ್ಲಂಘನೆ ಕಂಡು ಬಂದರೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೇರ ಹೊಣೆ ಮಾಡಲಾಗುವುದು. ಇದೇ ರೀತಿ ಫಲಾನುಭವಿಗಳ ಆಯ್ಕೆ ಸಂದರ್ಭದಲ್ಲಿಯೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಪ್ರಸಾದ್ ಮನೋಹರ್ ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿ ಹಾಗೂ ಇಂಗ್ಲಿಷ್ ಭಾಷಾ ಕೌಶಲ್ಯ, ವೃತ್ತಿಪರ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜುಲೈ ತಿಂಗಳಿನಿಂದ ಈ ಕಾರ್ಯ ಜಿಲ್ಲೆಯ ಎಲ್ಲಾ ಹಾಸ್ಟೆಲ್‌ಗಳಲ್ಲಿ ಆರಂಭವಾಗಲಿದೆ ಎಂದು ಮಾಹಿತಿ ನಿಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸಂತೋಷ ರೇಣಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X