ಮೇ 13ರಂದು ಮೂಡುಬಿದಿರೆಯಲ್ಲಿ ಸರಕಾರಿ ಈಜುಕೊಳ ಉದ್ಘಾಟನೆ
ಮೂಡುಬಿದಿರೆ, ಮೇ 12: ಕರ್ನಾಟಕ ಸರಕಾರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೂಡುಬಿದಿರೆಯ ಈಜುಕೊಳ ಮೇ.13 ರಂದು ಉದ್ಘಾಟನೆಗೊಳ್ಳಲಿದೆ.
ಮೇ 13ರಂದು ಸಂಜೆ 6 ಗಂಟೆಗೆ ಸ್ವರಾಜ್ಯ ಮೈದಾನ ಬಳಿಯಿರುವ ಈಜುಕೊಳ ಸಂಕೀರ್ಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಈಜುಕೊಳವನ್ನು ಉದ್ಘಾಟಿಸಲಿದ್ದಾರೆ.
ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾ.ಗಣೇಶ್ ಕಾರ್ಣಿಕ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಜೆ.ಆರ್.ಲೋಬೊ, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಪುರಸಬಾ ಅಧ್ಯಕ್ಷೆ ರೂಪಾ ಎಸ್.ಶೆಟ್ಟಿ, ಉಪಾಧ್ಯಕ್ಷೆ ಶಕುಂತಳಾ ದೇವಾಡಿಗ, ಸ್ಥಾಯಿ ಸಮಿತಿ ಅಧ್ಯಕ್ಷ ಕೊರಗಪ್ಪ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುರೇಶ್ ಕೋಟ್ಯಾನ್, ಪುರಸಭಾ ಸದಸ್ಯ ಮನೋಜ್ ಶೆಟ್ಟಿ, ರೋಟರಿ ಕ್ಲಬ್ ಅಧ್ಯಕ್ಷ ಪಿ.ಕೆ.ಥೋಮಸ್ ಅತಿಥಿಗಳಾಗಿ ಆಗಮಿಸಲಿದ್ದಾರೆಂದು ಸಚಿವ ಕೆ.ಅಭಯಚಂದ್ರ ಜೈನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





