ಉಜಿರೆ: ಓಮ್ನಿ ಕಾರು ಬೆಂಕಿಗೆ ಆಹುತಿ
ಬೆಳ್ತಂಗಡಿ, ಮೇ 12: ಉಜಿರೆ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಟಿಬಿ ಕ್ರಾಸ್ ಎಂಬಲ್ಲಿ ಚಲಿಸುತ್ತಿದ್ದ ಓಮ್ನಿ ಕಾರೊಂದು ಬೆಂಕಿಗೆ ಆಹುತಿಯಾದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಮುಂಡಾಜೆ ನಿವಾಸಿ ಮುಹಮ್ಮದ್ ಶರ್ೀರಿಗೆ ಸೇರಿದ ಕಾರು ಇದಾಗಿದ್ದು, ಆಕಸ್ಮಿಕವಾಗಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರನ್ನು ನಿಲ್ಲಿಸಿ ಪ್ರಯಾಣಿಕರು ಕಾರಿನಿಂದ ಇಳಿದಿದ್ದಾರೆ. ಯಾರಿಗೂ ಯಾವುದೇ ಅಪಾಯಗಳಾಗಿಲ್ಲ. ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸಿದ್ದಾರೆ. ಕಾರು ಸಂಪೂರ್ಣ ಸುಟ್ಟು ಹೋಗಿದೆ. ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದೆ
Next Story





