ಬೆಳ್ತಂಗಡಿ, ಮೇ 12: ನಡ ಗ್ರಾಪಂ ಅಧ್ಯಕ್ಷೆ ಜಯಂತಿ (43) ಬುಧವಾರ ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಕಳೆದ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಾಗಿ ಸ್ಪರ್ಸಿ ಗೆಲುವು ಸಾಸಿದ್ದ ಇವರು ಪರಿಶಿಷ್ಟ ಜಾತಿ ಮಹಿಳಾ ಮೀಸಲಾತಿಯಲ್ಲಿ ನಡ ಗ್ರಾಪಂ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಮೃತರು ಪತಿ ಕಟ್ಟು ನಲ್ಕೆ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.