ಉಳ್ಳಾಲ ಕೊಲೆಯತ್ನ ಪ್ರಕರಣ: ಇನ್ನೋರ್ವ ಆರೋಪಿಯ ಬಂಧನ
ಉಳ್ಳಾಲ, ಮೇ 13: ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಟಿ.ಸಿ.ರೋಡ್ ಸಮೀಪದ ನಿವಾಸಿ ಧನರಾಜ್ (25) ಎಂಬಾತನ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಉಳ್ಳಾಲ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ನೇತೃತ್ವದ ಪೊಲೀಸರ ತಂಡ ಶುಕ್ರವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಉಳ್ಳಾಲ ಸೀ ಗ್ರೌಂಡ್ ನಿವಾಸಿ ಮುಸ್ತಫಾ ಎಂದು ಹೆಸರಿಸಲಾಗಿದೆ.
ಓರ್ವ ಆರೋಪಿ ಮಿಲ್ಲತ್ ನಗರ ನಿವಾಸಿ ಫೈಝಿ ಯಾನೆ ಮುಹಮ್ಮದ್ ಫಯಾಜ್ (20) ಎಂಬಾತನನ್ನು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದರು. ಎ.29 ರಂದು ಚಿಟ್ ಫಂಡ್ ಕಲೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಧನರಾಜ್ ಬೈಕಿನಲ್ಲಿ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ತೊಕ್ಕೊಟ್ಟು ಟಿ.ಸಿ.ರೋಡಿನಲ್ಲಿ ಮೂವರಿದ್ದ ಯುವಕರ ತಂಡ ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿತ್ತು.
ಘಟನೆಗೆ ಸಂಬಂದಿಸಿದಂತೆ ಇನ್ನೋರ್ವ ಆರೋಪಿಯ ಬಂಧನಕ್ಕೆ ಶೋಧಕಾರ್ಯ ಮುಂದುವರಿದಿದೆ.
Next Story





