ರಾಷ್ಟ್ರೀಯ ಬೌದ್ಧಿಕ ಹಕ್ಕು ನೀತಿಗೆ ಸಂಪುಟ ಅಸ್ತು
ಹೊಸದಿಲ್ಲಿ, ಮೇ 13: ಸಮಾಜದ ಎಲ್ಲಾ ವರ್ಗಗಳಲ್ಲಿ ಸೃಜನಶೀಲತೆ,ಸಂಶೋಧನೆ ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ರಾಷ್ಟ್ರೀಯ ಬೌದ್ಧಿಕ ಹಕ್ಕು ಹಕ್ಕುಗಳ ಕಾಯ್ದೆ (ಐಪಿಆರ್) ನೀತಿಗೆ ಕೇಂದ್ರ ಸಂಪುಟವು ಅನುಮೋದನೆ ನೀಡಿದೆ.
ಬೌದ್ಧಿಕ ಆಸ್ತಿ ಹಕ್ಕುಗಳ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಯೋಜನಗಳ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವುದೇ ಇದರ ಉದ್ದೇಶವಾಗಿದೆಯೆಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಶುಕ್ರವಾರ ಹೊಸದಿಲ್ಲಿಯಲ್ಲಿ ತಿಳಿಸಿದರು. ಗುರುವಾರ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರಗಳ ಬಗ್ಗೆ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಬೌದ್ಧಿಕ ಆಸ್ತಿ ಹಕ್ಕು ಕಾಯ್ದೆಯ ಉಲ್ಲಂಘನೆಯನ್ನು ತಡೆಗಟ್ಟಲು ಪರಿಣಾಮಕಾರಿ ಹಾಗೂ ಪ್ರಬಲವಾದ ಕಾನೂನುಗಳನ್ನು ಜಾರಿಗೆ ತರುವ ಅಗತ್ಯವಿದೆಯೆಂದು ಅವರು ತಿಳಿಸಿದರು.
Next Story





