Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎತ್ತಿನಹೊಳೆ ಯೋಜನೆಗೆ ಬೆಂಬಲ: ಕೋಡಿಜಾಲ್‌

ಎತ್ತಿನಹೊಳೆ ಯೋಜನೆಗೆ ಬೆಂಬಲ: ಕೋಡಿಜಾಲ್‌

ವಾರ್ತಾಭಾರತಿವಾರ್ತಾಭಾರತಿ14 May 2016 3:06 PM IST
share
ಎತ್ತಿನಹೊಳೆ ಯೋಜನೆಗೆ ಬೆಂಬಲ: ಕೋಡಿಜಾಲ್‌

ಮಂಗಳೂರು, ಮೇ 14: ಎತ್ತಿನಹೊಳೆ ಯೋಜನೆಗೆ ದ.ಕ. ಜಿಲ್ಲಾ ಕಾಂಗ್ರೆಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ ಎಂದು ಮುಡಾ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಎತ್ತಿನಹೊಳೆ ಯೋಜನೆಗೂ ನೇತ್ರಾವತಿ ನದಿಗೂ ಯಾವುದೇ ಸಂಬಂಧವಿಲ್ಲ. ಅದೇ ರೀತಿ ಎತ್ತಿನಹೊಳೆ ಹಾಗೂ ಬರ ಪರಿಸ್ಥಿತಿಗೂ ಸಂಬಂಧವಿಲ್ಲ. ಯೋಜನೆ ಅನುಷ್ಠಾನದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಯಾವುದೇ ಹಾನಿಯೂ ಆಗುವುದಿಲ್ಲ ಎಂದರು.

ವೀರಪ್ಪ ಮೊಲಿ, ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಶೆಟ್ಟರ್ ಅವರೆಲ್ಲ ತಿಳುವಳಿಕೆ ಇಲ್ಲದವರಲ್ಲ. ಎಲ್ಲಾ ತಾಂತ್ರಿಕ ಅಭಿಪ್ರಾಯಗಳನ್ನು ಅವರು ಪಡೆದು ಯೋಜನೆ ಮಾಡಿಸಿದ್ದಾರೆ ಎಂದವರು ಹೇಳಿದರು.

‘ಈ ಯೋಜನೆ ಆರಂಭವಾಗುವಾಗ ಇದಕ್ಕೆ ಮೊದಲಾಗಿ ವಿರೋಧ ಮಾಡಿದವರು ಸಚಿವ ರಮಾನಾಥ ರೈ. ಯೋಜನೆ ವಿರೋಧಿಸಿ ಡಾನ್‌ಬಾಸ್ಕೊದಲ್ಲಿ ಆಗ ಸಭೆಯನ್ನೂ ನಡೆಸಿದ್ದರು’ ಎಂದು ಕೋಡಿಜಾಲ್ ಹೇಳಿದರು. ಮೊದಲಿಗೆ ವಿರೋಧ ಮಾಡಿದ ಅವರು ಈಗ ಯೋಜನೆಯನ್ನು ಬೆಂಬಲಿಸುತ್ತಿದ್ದಾರೆ’ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಕೋಡಿಜಾಲ್, ‘ಈ ಯೋಜನೆಯಿಂದ ಇಲ್ಲಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿದ ನಂತರ ಅವರು ಬೆಂಬಲ ನೀಡುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರ್ಣಗೊಳಿಸಿದೆ. ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಈಡೇರಿಸುತ್ತಿದೆ. ಈಗಾಗಲೇ 110ಕ್ಕೂ ಅಧಿಕ ಭರವಸೆಗಳನ್ನು ಸರಕಾರ ಈಡೇರಿಸಿದೆ. ಸಿದ್ದರಾಮಯ್ಯನವರು ಓರ್ವ ಪ್ರಶ್ನಾತೀತ ಮುಖ್ಯಮಂತ್ರಿಯಾಗಿ ಯಶಸ್ವಿಯಾಗಿ ಐದು ವರ್ಷಗಳನ್ನು ಪೂರ್ಣಗೊಳಿಸಲಿದ್ದಾರೆ ಎಂದು ಕೋಡಿಜಾಲ್ ಹೇಳಿದರು.

ಕೇರಳದಲ್ಲಿ ಬಿಜೆಪಿಗೆ ಒಂದೂ ಸ್ಥಾನವೂ ಸಿಗುವುದಿಲ್ಲ. ಕೇರಳದ ಜನತೆ ನರೇಂದ್ರ ಮೋದಿಯವರ ಬಗ್ಗೆ ಕೋಪಗೊಂಡಿದ್ದಾರೆ. ಸಾಕ್ಷರತೆಯಲ್ಲಿ ದೇಶದಲ್ಲೇ ಮುಂದುವರಿದ ಕೇರಳವನ್ನು ಸೋಮಾಲಿಯಾಕ್ಕೆ ಹೋಲಿಸಿರುವುದು ಖಂಡನೀಯ. ಹೀಗಾಗಿ ಕೇರಳದಲ್ಲಿ ಬಿಜೆಪಿಗೆ ಒಂದೇ ಒಂದು ಸ್ಥಾನವೂ ಸಿಗುವುದಿಲ್ಲ. ಕಪ್ಪು ಹಣ ತರುತ್ತೇನೆ ಎಂದು ಹೇಳಿದವರು ಒಂದು ಪೈಸೆಯನ್ನೂ ತರಲು ಸಾಧ್ಯವಾಗಲಿಲ್ಲ ಎಂದವರು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಮುಖರಾದ ವಿಶ್ವಾಸ್ ಕುಮಾರ್ ದಾಸ್, ಪದ್ಮನಾಭ ನರಿಂಗಾನ, ಮುಸ್ತಾ, ನಝೀರ್ ಬಜಾಲ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X