Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಟ್ಟಡ ಕಾಮಗಾರಿಗಳು ಅನಿಶ್ಚಿತತೆಯಲ್ಲಿ:...

ಕಟ್ಟಡ ಕಾಮಗಾರಿಗಳು ಅನಿಶ್ಚಿತತೆಯಲ್ಲಿ: ಡಿ.ಬಿ.ಮೆಹ್ತಾ

ಮರಳಿನ ಸಮಸ್ಯೆ ಬಳಿಕ ನೀರಿನ ಕೊರತೆ!

ವಾರ್ತಾಭಾರತಿವಾರ್ತಾಭಾರತಿ14 May 2016 11:48 PM IST
share

ಮಂಗಳೂರು, ಮೇ 14: ಕಳೆದ ನಾಲ್ಕೈದು ತಿಂಗಳಿನಿಂದ ಮರಳಿನ ಕೊರತೆಯಿಂದ ಕಟ್ಟಡ ಕಾಮಗಾರಿಗಳಿಗೆ ಈಗಾಗಲೇ ತೊಂದರೆಯಾಗಿದ್ದರೆ, ಇದೀಗ ನಗರದಲ್ಲಿ ನೀರಿನ ಸಮಸ್ಯೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆದೇಶದನ್ವಯ ಕಟ್ಟಡ ಕಾಮಗಾರಿಗಳಿಗೆ ನೀರಿನ ಪೂರೈಕೆ ಸ್ಥಗಿತಗೊಂಡಿರುವುದರಿಂದ ಮತ್ತಷ್ಟು ತೊಂದರೆಯಾಗಿದೆ ಎಂದು ಕ್ರೆಡೈ ಅಧ್ಯಕ್ಷ ಡಿ.ಬಿ.ಮೆಹ್ತಾ ಹೇಳಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯ ಸಂದರ್ಭ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಗರದಲ್ಲಿ ನೀರಿನ ಸಮಸ್ಯೆಯನ್ನು ನಿವಾರಿಸುವಲ್ಲಿ ಕಟ್ಟಡ ನಿರ್ಮಾಣ ಅಸೋಸಿಯೇಶನ್ ಕೂಡಾ ಜಿಲ್ಲಾಡಳಿತದ ಜತೆ ಕೈಜೋಡಿಸುತ್ತಿದೆ. ಹಾಗಿದ್ದರೂ ಈಗಾಗಲೇ ಹಲವಾರು ಕಾರಣಗಳಿಂದ ನಾಲ್ಕೈದು ತಿಂಗಳಿನಿಂದ ಕಾರ್ಮಿಕರಿಗೆ ಸೂಕ್ತವಾದ ಕೆಲಸವಿಲ್ಲದೆ ತೊಂದರೆಯಲ್ಲಿದ್ದಾರೆ. ಇದೀಗ ಕಟ್ಟಡ ಕಾಮಗಾರಿ ನಡೆಯುವಲ್ಲಿನ ತೆರೆದ ಬಾವಿಗಳು ಹಾಗೂ ಬೋರ್‌ವೆಲ್‌ಗಳಲ್ಲಿನ ನೀರು ಕಟ್ಟಡ ಕಾಮಗಾರಿಗಳಿಗೆ ಬಳಸದಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಇನ್ನು ಮಳೆಗಾಲದ ಆರಂಭದಲ್ಲಿ ಹೊರ ರಾಜ್ಯ ಜಿಲ್ಲೆಗಳ ಕಾರ್ಮಿಕರು ಅನಿವಾರ್ಯವಾಗಿ ತಮ್ಮ ಊರುಗಳಿಗೆ ತೆರಳುತ್ತಾರೆ. ಆಮೇಲೆ ಮಳೆಗಾಲ ಮುಗಿಯುವವರೆಗೆ ಅವರು ಹಿಂತಿರುಗುವುದಿಲ್ಲ. ಇದರಿಂದ ನಗರದಲ್ಲಿ ಕಟ್ಟಡ ಕಾಮಗಾರಿಗಳು ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ನಗರದ ಕಟ್ಟಡಗಳು ಕೂಡಾ ಆರ್ಥಿಕತೆಯ ಬೆನ್ನೆಲುಬಾಗಿದೆ. ಹಾಗಾಗಿ ಮುಂಗಾರು ಪೂರ್ವ ಮಳೆಯನ್ನೇ ಇದೀಗ ಕಟ್ಟಡ ನಿರ್ಮಾಣ ಕಾಮಗಾರಿಗೂ ಆಶ್ರಯಿಸಬೇಕಾಗಿದೆ ಎಂದು ಅವರು ಹೇಳಿದರು.

ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನೀರಿನ ಬಳಕೆ ಬಗ್ಗೆ ಜಾಗೃತಿ

ನಗರದಲ್ಲಿನ ನೀರಿನ ಕೊರತೆ ಹಿನ್ನೆಲೆಯಲ್ಲಿ ಈಗಾಗಲೇ ಆಸ್ಪತ್ರೆಯ ಹಾಸ್ಟೆಲ್‌ಗಳಲ್ಲಿರುವ ವಿದ್ಯಾರ್ಥಿಗಳನ್ನು 15 ದಿನಗಳ ಹಿಂದೆಯೇ ರಜೆಯ ಮೇಲೆ ಕಳುಹಿಸಲಾಗಿದೆ. ಉಳಿದಂತೆ ಆಸ್ಪತ್ರೆಯ ರೋಗಿಗಳಿಗೆ ತೊಂದರೆ ಆಗದಂತೆ ನೀರಿನ ಬಳಕೆ ಕುರಿತು ಮುಂಜಾಗೃತಾ ಕ್ರಮಗಳನ್ನು ವಹಿಸಲಾಗಿದೆ ಎಂದು ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ಫಾ. ರಿಚರ್ಡ್ ಕುವೆಲ್ಲೋ ತಿಳಿಸಿದರು. ಆಸ್ಪತ್ರೆಯಲ್ಲಿ ದಿನದಲ್ಲಿ ಆರು ಬಾರಿ ಕನ್ನಡ, ಮಲಯಾಳಿ ಹಾಗೂ ಆಂಗ್ಲ ಭಾಷೆಯಲ್ಲಿ ನೀರಿನ ಮಿತ ಬಳಕೆಯ ಕುರಿತಂತೆ ಜಾಗೃತಿ ಮೂಡಿಸಲಾಗುತ್ತಿದೆ. ರೋಗಿಗಳು ಹಾಗೂ ಅವರನ್ನು ನೋಡಿಕೊಳ್ಳುವವರಿಗೆ ತೊಂದರೆಯಾಗದಂತೆ ಹಾಗೂ ನೀರು ಪೋಲಾಗದ ರೀತಿಯಲ್ಲಿ ಮಿತವಾಗಿ ಪೈಪ್‌ಗಳಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ಶೌಚಾಲಯಗಳ ಫ್ಲಶಿಂಗ್‌ಗೆ ಆಸ್ಪತ್ರೆಯ ಸಂಸ್ಕರಣಾ ಘಟಕದಲ್ಲಿ ಶುದ್ಧೀಕರಿಸಲಾಗುವ ನೀರನ್ನೇ ಬಳಕೆ ಮಾಡಲಾಗುತ್ತಿದೆ. ಈ ಮೂಲಕ ಆಸ್ಪತ್ರೆಯು ನಗರದಲ್ಲಿ ತಲೆದೋರಿರುವ ನೀರಿನ ಸಮಸ್ಯೆಗೆ ಜಿಲ್ಲಾಡಳಿತದ ಜತೆ ಸ್ಪಂದಿಸುತ್ತಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X