ಕಾಸರಗೋಡಿನಲ್ಲಿ ಭಾರೀ ಗಾಳಿಮಳೆ
ಕಾಸರಗೋಡು, ಮೇ 14: ಕಾಸರಗೋಡಿನಲ್ಲಿ ಶನಿವಾರ ರಾತ್ರಿ ಗುಡುಗು-ಮಿಂಚು, ಗಾಳಿಯಿಂದ ಕೂಡಿದ ಭಾರೀ ಮಳೆ ಸುರಿದಿದ್ದು, ಎಲ್ಲೆಡೆ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ.
ಹಲವೆಡೆಗಳಲ್ಲಿ ಮರಗಳು ಉರುಳಿಬಿದ್ದ ಪರಿಣಾಮ ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿದೆ. ಚುನಾವಣಾ ಪ್ರಚಾರಕ್ಕಾಗಿ ರಾಜಕೀಯ ಪಕ್ಷಗಳು ಅಳವಡಿಸಿದ್ದ ಫ್ಲೆಕ್ಸ್‌ಗಳು ನೆಲಕಚ್ಚಿವೆ.
ಕಾಸರಗೋಡು ಜನರಲ್ ಆಸ್ಪತ್ರೆ ಪರಿಸರ, ಚೆರ್ಕಳ, ಬೇವಿಂಜೆ ಮೊದಲಾದೆಡೆಗಳಲ್ಲಿ ಕೆಲವು ವಿದ್ಯುತ್ ಕಂಬಗಳು ಧರಾಶಾಯಿಯಾಗಿವೆ. ಕೋಟೆ ರಸ್ತೆಯಲ್ಲಿ ನಿಲುಗಡೆಗೊಳಿಸಿದ್ದ ಕಾರಿನ ಮೇಲೆ ಮರಬಿದ್ದು ಕಾರು ನಜ್ಜುಗುಜ್ಜಾಗಿದೆ. ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದ್ದು, ದುರಸ್ತಿಗೆ ಎರಡು ದಿನ ತಗಲಬಹುದು ಎಂದು ವಿದ್ಯುನ್ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
Next Story





