Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಟ್ಟಡ ಕಾರ್ಮಿಕ ಫಲಾನುಭವಿಗಳಿಗೆ ಪಿಂಚಣಿ...

ಕಟ್ಟಡ ಕಾರ್ಮಿಕ ಫಲಾನುಭವಿಗಳಿಗೆ ಪಿಂಚಣಿ ಯೋಜನೆಯ ಪ್ರಮಾಣಪತ್ರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ14 May 2016 11:56 PM IST
share
ಕಟ್ಟಡ ಕಾರ್ಮಿಕ ಫಲಾನುಭವಿಗಳಿಗೆ ಪಿಂಚಣಿ ಯೋಜನೆಯ ಪ್ರಮಾಣಪತ್ರ ವಿತರಣೆ

ಮಂಗಳೂರು, ಮೇ 14: ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಅರ್ಹ ಫಲಾನುಭವಿಗಳಿಗೆ ಪಿಂಚಣಿ ಯೋಜನೆಯ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಚಾಲನೆ ನೀಡಿದರು.

60 ವರ್ಷದ ಮಹಿಳಾ ಫಲಾನುಭವಿ ಮತ್ತು 60 ವರ್ಷಗಳ ಪುರುಷ ಫಲಾನುಭವಿಗೆ ಪ್ರತೀ ತಿಂಗಳು 1,000 ರೂ. ಪಿಂಚಣಿ ದೊರೆಯುವ ಪ್ರಸ್ತುತ ಯೋಜನೆಯ 11 ಮಂದಿ ಅರ್ಹ ಕಾರ್ಮಿಕ ಫಲಾನುಭವಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ, ದ.ಕ. ಜಿಲ್ಲೆಯಲ್ಲಿ ಕಾರ್ಮಿಕ ಫಲಾನುಭವಿಗಳ ಸಂಖ್ಯೆ ಅಧಿಕ ಇದ್ದರೂ ಕೇವಲ 11 ಮಂದಿಗೆ ಪಿಂಚಣಿ ಯೋಜನೆಯ ಪ್ರಮಾಣ ಪತ್ರ ವಿತರಿಸಲು ಮಾಹಿತಿ ಕೊರತೆಯೇ ಕಾರಣ. ಕಾರ್ಮಿಕರಿಗಾಗಿ ಸರಕಾರದಿಂದ ವಿವಿಧ ಸೌಲಭ್ಯಗಳಿದ್ದರೂ ಮಾಹಿತಿ ಕೊರತೆಯಿಂದಾಗಿ ಇಂತಹ ಸೌಲಭ್ಯಗಳು ದುಡಿಯುವ ವರ್ಗಕ್ಕೆ ತಲುಪುತ್ತಿಲ್ಲ. ಈ ನಿಟ್ಟಿನಲ್ಲಿ ಇಲಾಖಾಧಿಕಾರಿಗಳು ಹೆಚ್ಚು ಮುತುವರ್ಜಿ ವಹಿಸಬೇಕು ಎಂದರು. ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಿ.ಜಿ.ನಾಗೇಶ್ ‘ಕಟ್ಟಡ ಕಾರ್ಮಿಕರು ಫಲಾನುಭವಿ’ಗಳೆಂದು ನೋಂದಾವಣೆಯಾದ ತಕ್ಷಣ ಸರಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಬಳಿಕ ಜಿಲ್ಲಾಧಿಕಾರಿ ಕಾರ್ಮಿಕರ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದರು. ಕಟ್ಟಡ ಅಥವಾ ಇತರ ನಿರ್ಮಾಣ ಕಾರ್ಮಿಕರು ಕೆಲಸದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿ ಮರಣ ಹೊಂದಿದರೆ, ಗಾಯಗೊಂಡು ಆಸ್ಪತ್ರೆಗೆ ದಾಖಲಾದರೆ ಮತ್ತು ಪ್ರಮುಖ ವೈದ್ಯಕೀಯ ವೆಚ್ಚಕ್ಕೆ ಸಂಬಂಧಿಸಿ ಇಲಾಖೆಯಿಂದ ಸಿಗಬೇಕಾದ ಸೌಲಭ್ಯಗಳಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಅಲ್ಲದೆ, ಕೆಲವು ಪ್ರಕರಣಗಳಲ್ಲಿ ಇನ್ನೂ ಹಣ ಮಂಜೂರಾಗದೆ ಬಾಕಿ ಉಳಿದಿದೆ ಎಂದು ಸಭೆಯಲ್ಲಿದ್ದ ಕೆಲವರು ಕಾರ್ಮಿಕ ಇಲಾಖೆಯ ಬಗ್ಗೆ ದೂರಿಕೊಂಡರು.

ಇದನ್ನು ಗಂಭೀರವಾಗಿ ಪ್ರಶ್ನಿಸಿದ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹೀಂ, ಕಾರ್ಮಿಕ ಫಲಾನುಭವಿಗಳಿಗೆ ಹಣ ಮಂಜೂರು ಮಾಡುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಿ.ಜಿ.ನಾಗೇಶ್ ಪ್ರಶ್ನಿಸಿದರು. ಪ್ರಕರಣಗಳಿಗೆ ವಿಳಂಬ ಮಾಡದೆ 1 ತಿಂಗಳೊಳಗೆ ಫಲಾನುಭವಿಗಳಿಗೆ ಹಣವನ್ನು ಮಂಜೂರು ಮಾಡುವುದಾಗಿ ಹೇಳಿದರು. ಅದಲ್ಲದೆ ಕಾರ್ಮಿಕರ ಸಮಸ್ಯೆಯನ್ನು ಆಲಿಸಲು ತಿಂಗಳ ಮೊದಲ ಮತ್ತು ನಾಲ್ಕನೆ ಗುರುವಾರ ಪ್ರತ್ಯೇಕ ದಿನಗಳನ್ನು ನಿಗದಿಪಡಿಸಲಾಯಿತು.

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಅಪಘಾತಕ್ಕೀಡಾಗಿ ಮೃತಪಟ್ಟರೆ 2 ಲಕ್ಷ ರೂ. ಪರಿಹಾರ ಧನ, ಶಾಶ್ವತ ಅಂಗವಿಕಲರಾದರೆ 2 ಲಕ್ಷ ರೂ. ಪರಿಹಾರ (ಶೇ.) ಹಾಗೂ ಕಾರ್ಮಿಕರು ಸರಕಾರಿ ಅಥವಾ ಸರಕಾರದ ಮಾನ್ಯತೆ ಪಡೆದ ಆಸ್ಪತ್ರೆಗಳಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆದರೆ ಗರಿಷ್ಠ 6,000 ರೂ.ವರೆಗೆ ಧನಸಹಾಯ ನೀಡಲಾಗುವುದು. ಅಲ್ಲದೆ ಕಾರ್ಮಿಕರ ಹೃದ್ರೋಗ ಜೋಡಣೆ, ಕಿಡ್ನಿ ಜೋಡಣೆ, ಕ್ಯಾನ್ಸರ್ ಚಿಕಿತ್ಸೆ, ಕಣ್ಣಿನ ಆಪರೇಷನ್, ಪಾರ್ಶ್ವವಾಯು ಚಿಕಿತ್ಸೆ, ಮೂಳೆ ಅಪರೇಷನ್, ಗರ್ಭಕೋಶದ ಆಪರೇಷನ್, ಅಸ್ತಮಾ ಚಿಕಿತ್ಸೆ, ಗರ್ಭಪಾತದ ಪ್ರಕರಣಗಳು, ಪಿತ್ತ ಕೋಶದ ತೊಂದರೆಗೆ ಚಿಕಿತ್ಸೆ, ಮೂತ್ರಪಿಂಡದಲ್ಲಿನ ಕಲ್ಲು ತೆಗೆಯುವುದು, ಮೆದುಳಿನ ರಕ್ತಸ್ರಾವ, ಅಲ್ಸರ್ ಚಿಕಿತ್ಸೆಗಳಿಗಾಗಿ 2 ಲಕ್ಷ ರೂ. ವರೆಗೆ ಧನ ಸಹಾಯ ನೀಡಲಾಗುವುದು. ಕುಷ್ಠರೋಗ, ಕ್ಯಾನ್ಸರ್, ಪಾರ್ಶ್ವವಾಯು, ಕ್ಷಯರೋಗ ಕಾಯಿಲೆಗಳಿಂದ ಶಾಶ್ವತ ಅಂಗವಿಕಲತೆಗಾಗಿ ಮಾಸಿಕ 500 ರೂ. ಅಂಗವಿಕಲತೆ ಪಿಂಚಣಿ, ಮೃತ ಕಾರ್ಮಿಕರಿಗೆ ಅಂತ್ಯಕ್ರಿಯೆಗಾಗಿ 4,000 ರೂ. ಹಾಗೂ ಅನುಗ್ರಹರಾಶಿ 50 ಸಾವಿರ ಸೇರಿ ಒಟ್ಟು 54,000 ರೂ. ಧನಸಹಾಯ ಸಿಗಲಿದೆ.

ಸದಸ್ಯರ ಒಂದು ವರ್ಷ ಸದಸ್ಯತ್ವ ಪೂರ್ಣಗೊಂಡ ಬಳಿಕ ಮಹಿಳಾ ಕಾರ್ಮಿಕರಿಗೆ ಎರಡು ಸಲದ ಹೆರಿಗೆಗಾಗಿ ತಲಾ 15,000 ರೂ. ಸೌಲಭ್ಯ, ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 5ರಿಂದ 7ನೆ ತರಗತಿವರೆಗಿನವರೆಗೆ 3,000 ರೂ., 8ರಿಂದ 9ನೆ ತರಗತಿಗೆ 4,000 ರೂ., 10ನೆ ತರಗತಿ, ಡಿಪ್ಲೊಮಾಗೆ 6,000 ರೂ., ಪ್ರಥಮ ಪಿಯುಸಿಗೆ 5,000 ರೂ., ದ್ವಿತೀಯ ಪಿಯುಸಿ ವಿದ್ಯಾಭ್ಯಾಸಕ್ಕೆ 8,000 ರೂ., ಪ್ರಥಮ, ದ್ವಿತೀಯ, ತೃತೀಯ ಪದವಿ, ಐಟಿಐ ಶಿಕ್ಷಣಕ್ಕಾಗಿ 5,000, ಪ್ರಥಮ, ದ್ವಿತೀಯ ಸ್ನಾತಕೋತ್ತರ ಪದವಿ, ಪಿಎಚ್‌ಡಿ ವ್ಯಾಸಂಗಕ್ಕೆ 20,000 ರೂ., ಕಾರ್ಮಿಕರ ಅಥವಾ ಅವರ ಅವಲಂಬಿತರ ಇಬ್ಬರು ಮಕ್ಕಳ ಮದುವೆಗೆ ತಲಾ 50 ಸಾವಿರ ರೂ. ಧನಸಹಾಯ ಹಾಗೂ ಕಾರ್ಮಿಕರಿಗೆ ಮನೆ ಕಟ್ಟಲು ಅಥವಾ ಖರೀದಿಸಲು 2 ಲಕ್ಷ ರೂ. ಸಾಲ ಸೌಲಭ್ಯವಿದ್ದು, ಇದರಲ್ಲಿ 50 ಸಾವಿರ ರೂ. ಸಬ್ಸಿಡಿಯಾದರೆ ಉಳಿದ 1.5ಲಕ್ಷ ರೂ. ಮೇಲೆ ಶೇ. 5 ಬಡ್ಡಿ ದರ ವಿಧಿಸುವ ಸಾಲ ಸೌಲಭ್ಯಗಳು ದೊರೆಯಲಿದೆ.

 ನೋಂದಾಯಿತರಲ್ಲದ ಕಟ್ಟಡ ಕಾರ್ಮಿಕರಿಗೂ ಸೌಲಭ್ಯಗಳಿದ್ದು, ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತ ಅಪಘಾತದಿಂದ ಮೃತರಾದರೆ ಅವರ ಕುಟುಂಬಕ್ಕೆ 50 ಸಾವಿರ ರೂ., ಅಪಘಾತದಿಂದ ಗಂಭೀರ ಗಾಯಗೊಂಡ ನೋಂದಾಯಿತರಲ್ಲದ ಕಾರ್ಮಿಕರಿಗೆ 10 ಸಾವಿರ ರೂ.ದಿಂದ 20 ಸಾವಿರ ರೂ.ವರೆಗೆ ಎಕ್ಸ್‌ಗ್ರೇಷಿಯಾ ಪರಿಹಾರ ಧನ ವಿತರಿಸಲಾಗುವುದು ಎಂದು ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಿ.ಜಿ.ನಾಗೇಶ್ ಮಾಹಿತಿ ನೀಡಿದರು.

ದ.ಕ. ಜಿಪಂ ಸಿಇಒ ಪಿ.ಐ.ಶ್ರೀವಿದ್ಯಾ, ಅಸಂಘಟಿತ ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾದ ಮುಹಮ್ಮದ್ ರಫೀಕ್, ಪ್ರವೀಣ್ ಸಾಲ್ಯಾನ್, ಕ್ರೈಡೈನ ಜೊತೆ ಕಾರ್ಯದರ್ಶಿ ವಿನೋದ್ ಪಿಂಟೊ ಉಪಸ್ಥಿತರಿದ್ದರು.

ಜಿಲ್ಲೆಯ ಕಾರ್ಮಿಕರಿಗೆ ಮಂಜೂರಾಗಿರುವ ಸೌಲಭ್ಯಗಳು

ರಾಜ್ಯದಲ್ಲಿ ನೋಂದಣಿಯಾಗಿರುವ 10,15,000 ಕಟ್ಟಡ ಕಾರ್ಮಿಕರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 43,308 ಮಂದಿ ಒಳಗೊಂಡಿದ್ದಾರೆ. ರಾಜ್ಯದಲ್ಲಿ 82,475 ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳಡಿಯಲ್ಲಿ 68,36,57,608 ರೂ. ಹಣ ಮಂಜೂರು ಮಾಡಲಾಗಿದೆ ಎಂದರು.

ದ.ಕ. ಜಿಲ್ಲೆಯ 43,308 ನೋಂದಾಯಿತ ಕಾರ್ಮಿಕರಲ್ಲಿ ಶೈಕ್ಷಣಿಕ ಧನ ಸಹಾಯವಾಗಿ 5,390 ಫಲಾನುಭವಿಗಳಿಗೆ 2,43,75,582 ರೂ., ಒಳರೋಗಿ ವೈದ್ಯಕೀಯಕ್ಕೆ 4 ಮಂದಿ ಫಲಾನುಭವಿಗಳಿಗೆ 1,900 ರೂ., ಪ್ರಮುಖ ವೈದ್ಯಕೀಯ ಧನಸಹಾಯವಾಗಿ 34 ಮಂದಿ ಫಲಾನುಭವಿಗಳಿಗೆ 12,03,403 ರೂ., ಹೆರಿಗೆ ಭತ್ತೆಗಾಗಿ 19 ಮಂದಿ ಫಲಾನುಭವಿಗಳಿಗೆ 2,76,000 ರೂ., ಮದುವೆಗಾಗಿ 724 ಫಲಾನುಭವಿಗಳಿಗೆ 3,59,45,000 ರೂ., ಅಂತ್ಯ ಸಂಸ್ಕಾರ ವೆಚ್ಚ ಮತ್ತು ಅನುಗ್ರಹರಾಶಿ 109 ಫಲಾನುಭವಿಗಳಿಗೆ 57,61,367 ರೂ., ಅಪಘಾತ ಪರಿಹಾರ ಒಬ್ಬರಿಗೆ 1.7 ಲಕ್ಷ ರೂ. ಸಹಿತ ಒಟ್ಟು 6,77,33,252 ರೂ. ಮಂಜೂರು ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X