Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಕ್ಷದೊಳಗೆ ಪ್ರಶಾಂತ್ ಹಸ್ತಕ್ಷೇಪ ಬೇಡ: ...

ಪಕ್ಷದೊಳಗೆ ಪ್ರಶಾಂತ್ ಹಸ್ತಕ್ಷೇಪ ಬೇಡ: ಚುನಾವಣಾ ತಂತ್ರಜ್ಞನಿಗೆ ಅಮರಿಂದರ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ15 May 2016 12:01 PM IST
share
ಪಕ್ಷದೊಳಗೆ ಪ್ರಶಾಂತ್ ಹಸ್ತಕ್ಷೇಪ ಬೇಡ:  ಚುನಾವಣಾ ತಂತ್ರಜ್ಞನಿಗೆ ಅಮರಿಂದರ್ ಎಚ್ಚರಿಕೆ

ಅಮೃತಸರ, ಮೇ 15: ಚುನಾವಣಾ ತಂತ್ರ ರೂಪಿಸುವುದಷ್ಟೇ ಪ್ರಶಾಂತ್ ಕಿಶೋರ್ ಕೆಲಸ. ಪಕ್ಷ ನಡೆಸುವುದು ನನ್ನ ಜವಾಬ್ದಾರಿ. ಈ ವಿಚಾರದಲ್ಲಿ ಪ್ರಶಾಂತ್ ಯಾವುದೇ ಹಸ್ತಕ್ಷೇಪ ಮಾಡುವುದನ್ನು ನಾನು ಸಹಿಸುವುದಿಲ್ಲ. ಮತ್ತೊಬ್ಬರನ್ನು ಪಕ್ಷಕ್ಕೆ ವಾಪಾಸು ಸೇರಿಸಿಕೊಳ್ಳುವುದು ಅಥವಾ ಮತ್ತೊಬ್ಬರನ್ನು ಉಚ್ಚಾಟಿಸಲು ಶಿಫಾರಸ್ಸು ಮಾಡುವುದು ನನ್ನ ಕೆಲಸ. ಪಂಜಾಬ್ ರಾಜಕೀಯದ ಒಳಸುಳಿಗಳನ್ನು ಅವರು ಅರಿಯರು ಎಂದು ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಸಾಗರೋತ್ತರ ಪ್ರವಾಸದ ಫಲಶ್ರುತಿ, ಪ್ರಶಾಂತ್ ಕಿಶೋರ್ ಅವರ ತಂತ್ರಗಾರಿಕೆ, ಪಕ್ಷಕ್ಕೆ ಎದುರಾಗಿರುವ ಹಣದ ಮುಗ್ಗಟ್ಟು, ಮಾಜಿ ಸಹೋದ್ಯೋಗಿಗಳಾದ ಬೀರ್ ದೇವೇಂದರ್ ಹಾಗೂ ಜಗಮೀತ್ ಸಿಂಗ್ ಬ್ರಾರ್ ಬಗ್ಗೆಯೂ ವಿವರವಾಗಿ ಸಿಂಗ್ ಮಾತನಾಡಿದ್ದಾರೆ. "ನಾನು ಪಕ್ಷದಲ್ಲಿರುವವರೆಗೂ ಬ್ರಾರ್ ಹಾಗೂ ಬೀರ್ ದೇವೇಂದರ್ ಪಕ್ಷಕ್ಕೆ ಮರಳುವ ಪ್ರಶ್ನೆಯೇ ಇಲ್ಲ. ನನಗೆ ಜೀವನ ಎಂದರೆ ಶಿಸ್ತು. ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿ ಮಾತನಾಡುವವರನ್ನು ಹೇಗೆ ವಾಪಾಸು ಕರೆಸಿಕೊಳ್ಳಲು ಸಾಧ್ಯ" ಎಂದು ಮರುಪ್ರಶ್ನೆ ಹಾಕಿದ್ದಾರೆ.

ಆದರೆ ಪ್ರಶಾಂತ್ ಕಿಶೋರ್ ಅವರು, ಉಭಯ ಮುಖಂಡರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಮುಖಂಡ ಚರಣ್‌ಜಿತ್ ಸಿಂಗ್ ಚನ್ನಿ ಅವರ ನಿವಾಸದಲ್ಲಿ ಭೇಟಿ ಮಾಡಿದ ಬಗ್ಗೆ ಗಮನ ಸೆಳೆದಾಗ, ಚುನಾವಣಾ ತಂತ್ರ ರೂಪಿಸುವುದಷ್ಟೇ ಪ್ರಶಾಂತ್ ಕಿಶೋರ್ ಕೆಲಸ. ಪಕ್ಷ ನಡೆಸುವುದು ನನ್ನ ಜವಾಬ್ದಾರಿ. ಈ ವಿಚಾರದಲ್ಲಿ ಪ್ರಶಾಂತ್ ಯಾವುದೇ ಹಸ್ತಕ್ಷೇಪ ಮಾಡುವುದನ್ನು ನಾನು ಸಹಿಸುವುದಿಲ್ಲ. ಮತ್ತೊಬ್ಬರನ್ನು ಪಕ್ಷಕ್ಕೆ ವಾಪಾಸು ಸೇರಿಸಿಕೊಳ್ಳುವುದು ಅಥವಾ ಮತ್ತೊಬ್ಬರನ್ನು ಉಚ್ಚಾಟಿಸಲು ಶಿಫಾರಸ್ಸು ಮಾಡುವುದು ನನ್ನ ಕೆಲಸ" ಎಂದು ತೀಕ್ಷ್ಣವಾಗಿ ಪ್ರತಿಕ್ರಿಯುಸಿದರು.

ವಿದೇಶಗಳಲ್ಲಿರುವ ಸಿಕ್ಖ್ ಸಮುದಾಯವನ್ನು ಮನವೊಲಿಸಲು ಕೈಗೊಂಡ ಪ್ರಯತ್ನದ ಬಗ್ಗೆ ಕೇಳಿದಾಗ, "ಅದ್ಭುತ ಸ್ಪಂದನೆ ದೊರಕಿದೆ. ಎಎಪಿ ವಂಚಕರ ದಂಡು ಎನ್ನುವುದು ಸಿಕ್ಖ್ ಸಮುದಾಯದ ಒಟ್ಟಾಭಿಪ್ರಾಯ. ಚಿಕಾಗೊ, ಫ್ರೆಸ್ನೊ, ಲಾಸ್‌ಎಂಜಲೀಸ್, ಟೊರಂಟೊ, ವ್ಯಾಂಕೋವರ್‌ಗಳಲ್ಲೂ ಇದೇ ಅಭಿಪ್ರಾಯ ವ್ಯಕ್ತವಾಗಿದೆ. ಎಎಪಿಗೆ ವಾತಾವರಣ ಪೂರಕವಾಗಿದೆ ಎಂದೆನಿಸುವುದಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X