ಪಕ್ಷಿಕೆರೆ: ಸಿಡಿಲು ಬಡಿದು ಮನೆಗೆ ಹಾನಿ

ಮುಲ್ಕಿ, ಮೇ 15: ಇಂದು ಮುಂಜಾನೆ ಗುಡುಗು ಸಹಿತ ಸುರಿದ ಭಾರೀ ಮಳೆಗೆ ಪಕ್ಷಿಕೆರೆ ಸಮೀಪದ ಸುರಗಿರಿ ಪಡ್ಪುನಿವಾಸಿ ತಿಮಪ್ಪ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದು ಅಪಾರ ನಷ್ಟ ಸಂಭವಿಸಿದ ಘಟನೆ ವರದಿಯಾಗಿದೆ.
ಮುಂಜಾನೆ 3ರ ವೇಳೆಗೆ ಮನೆಗೆ ಸಿಡಿಲು ಬಡಿದಿದ್ದು, ಮನೆಯ ವಯರಿಂಗ್ ಸಂಪೂರ್ಣ ಸುಟ್ಟು ಹೋಗಿದೆ. ಅಲ್ಲದೆ, ಮನೆಯ ಒಳಗಿದ್ದ ವಿದ್ಯುತ್ ಉಪಕರಣಗಳು, ಪೀಠೋಪಕರಣಗಳು ಸುಟ್ಟು ಕರಕಲಾಗಿವೆ ಎಂದು ತಿಳಿದು ಬಂದಿದೆ.
ಮನೆಯ ಮುಂಭಾಗದ ಗೋಡೆ ಸಂಪೂರ್ಣ ಬಿರುಕು ಬಿಟ್ಟಿದ್ದು, ಮನೆಯ ಪಕ್ಕದಲ್ಲಿದ್ದ ತೆಂಗಿನ ಮರಕ್ಕೂ ಸಿಡಿಲು ಬಡಿದು ಅಪಾರ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.
Next Story





