ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ
ಬ್ರಹ್ಮಾವರ, ಮೇ 15: ಸೀಮೆಎಣ್ಣೆ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡಿದ್ದ ಕೊಕ್ಕರ್ಣೆ ಸೂರಾಲು ನಿವಾಸಿ ಅನಂತ(30) ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದರೆನ್ನಲಾದ ಇವರು ಮೇ 14ರಂದು ಮನೆಯ ಹೊರಗಡೆ ಹಟ್ಟಿಯಲ್ಲಿ ಸೀಮೆಎಣ್ಣೆಯನ್ನು ಮೈಮೇಲೆ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡಿದ್ದರು. ಬಳಿಕ ಆಸ್ಪತ್ರೆಗೆ ದಾಖಲುಗೊಂಡಿದ್ದ ಅವರು ಚಿಕಿತ್ಸೆ ಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





