Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶ ಸೇವೆಗೆ ಸಿಕ್ಕ ಸುವರ್ಣ ಅವಕಾಶ:...

ದೇಶ ಸೇವೆಗೆ ಸಿಕ್ಕ ಸುವರ್ಣ ಅವಕಾಶ: ಆಸೀಮ್ ಅನ್ವರ್

ವಾರ್ತಾಭಾರತಿವಾರ್ತಾಭಾರತಿ15 May 2016 11:41 PM IST
share
ದೇಶ ಸೇವೆಗೆ ಸಿಕ್ಕ ಸುವರ್ಣ ಅವಕಾಶ: ಆಸೀಮ್ ಅನ್ವರ್

- ಅಮ್ಜದ್‌ಖಾನ್ ಎಂ.
ಬೆಂಗಳೂರು, ಮೇ 15: 2015ನೆ ಸಾಲಿನ ಯುಪಿಎಸ್ಸಿ ಪರೀಕ್ಷೆಯಲ್ಲಿ 149ನೆ ರ್ಯಾಂಕ್ ಪಡೆದಿರುವ ಬೆಂಗಳೂರಿನ ಇಂದಿರಾನಗರದ ಆಸೀಮ್ ಅನ್ವರ್, ದೇಶ ಹಾಗೂ ಪ್ರಜೆಗಳ ಸೇವೆಗೆ ಸಿಕ್ಕಿದಂತಹ ಸುವರ್ಣ ಅವಕಾಶ ಇದಾಗಿದೆ ಎಂದು ಸಂಸತ ವ್ಯಕ್ತಪಡಿಸಿದ್ದಾರೆ.
ನನ್ನ ತಂದೆ ಎಚ್.ಅತೀಖ್ ಅನ್ವರ್ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಆರ್ಥಿಕ ವ್ಯವಹಾರಗಳ ಪ್ರಮುಖರಾಗಿ ಸೇವೆ ಸಲ್ಲಿಸುತ್ತಿದ್ದು, ತಾಯಿ ಗೃಹಿಣಿಯಾಗಿದ್ದಾರೆ. ನನ್ನ ಪೋಷಕರಿಗೆ ನಾನು ಏಕೈಕ ಪುತ್ರನಾಗಿದ್ದು, ಬಾಲ್ಯದಿಂದಲೇ ನನ್ನ ಎಲ್ಲ ಶೈಕ್ಷಣಿಕ ಚಟುವಟಿಕೆಗಳಿಗೆ ಅವರು ಬೆಂಬಲವಾಗಿ ನಿಂತಿದ್ದಾರೆ.
   ಬೆಂಗಳೂರಿನ ಪೆಸಿಟ್ ಕಾಲೇಜಿನಲ್ಲಿ ಬಿಇ ಪದವಿ ಪಡೆದು ನಾನು, ಆನಂತರ ಉನ್ನತ ಶಿಕ್ಷಣಕ್ಕಾಗಿ ಪಶ್ಚಿಮ ಬಂಗಾಳಕ್ಕೆ ತೆರಳಿದೆ. ಕೋಲ್ಕತ್ತಾದ ಐಐಎಂನಲ್ಲಿ ಎಂಬಿಎ ಪದವಿಯನ್ನುಗಳಿಸಿದೆ. ದೇಶದ ಆಡಳಿತ ವ್ಯವಸ್ಥೆಯ ಭಾಗವಾಗಬೇಕು ಎಂಬ ಮಹದಾಸೆ ನನ್ನನ್ನು ನಿರಂತರವಾಗಿ ಕಾಡುತ್ತಿತ್ತು. ನನ್ನ ಕನಸನ್ನು ಸಾಕಾರಗೊಳಿಸಲು ಪೋಷಕರು ಹಾಗೂ ನನ್ನ ಪತ್ನಿ ಸಾಕಷ್ಟು ಬೆಂಬಲ, ಪ್ರೋತ್ಸಾಹ ನೀಡಿದ್ದಾರೆ. ಐಎಎಸ್, ಐಪಿಎಸ್, ಐಎಫ್‌ಎಸ್ ಸೇವೆಗೆ ಆಯ್ಕೆ ಯಾಗಬೇಕು ಎಂಬುದು ತನ್ನ ಬಹುದಿನಗಳ ಕನಸಾಗಿತ್ತು. ಈ ಹಿನ್ನೆಲೆಯಲ್ಲಿ 2013ರಲ್ಲಿ ಯುಪಿಎಸ್ಸಿ ಪರೀಕ್ಷೆಯನ್ನು ಬರೆದು 486ನೆ ರ್ಯಾಂಕ್ ಪಡೆದು ಭಾರತೀಯ ಕಂದಾಯ ಸೇವೆ(ಐಆರ್‌ಎಸ್)ಗೆ ಆಯ್ಕೆಯಾದೆ. ಆನಂತರ, ನನ್ನನ್ನು ಬೆಂಗಳೂರಿನ ಐಆರ್‌ಎಸ್ ವಿಭಾಗದ ಸಹಾಯಕ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು. ಪ್ರಸ್ತುತ ಅಲ್ಲಿಯೆ ಸೇವೆ ಸಲ್ಲಿಸುತ್ತಿದ್ದೇನೆ. 2015ರಲ್ಲಿ ಮತ್ತೊಮ್ಮೆ ಯುಪಿಎಸ್ಸಿ ಪರೀಕ್ಷೆ ಬರೆಯುವ ನಿರ್ಧಾರವನ್ನು ಕೈಗೊಂಡು ಕಠಿಣ ಪರಿಶ್ರಮದಿಂದ ಮುಂದುವರಿದೆ. ಅದರ ಪ್ರತಿಫಲವಾಗಿ ಈ ಬಾರಿ 149ನೆ ರ್ಯಾಂಕ್ ಪಡೆದೆ.
ಐಎಫ್‌ಎಸ್ ಅಥವಾ ಐಪಿಎಸ್ ಸಿಗಬಹುದು ಎಂಬ ನಿರೀಕ್ಷೆಯಿದೆ. ಯಾವುದೇ ಹುದ್ದೆ ಸಿಕ್ಕರೂ ಅದನ್ನು ಸಂತೋಷವಾಗಿ ಸ್ವೀಕರಿಸುತ್ತೇನೆ. ದೇಶ ಹಾಗೂ ಪ್ರಜೆಗಳ ಸೇವೆಗೆ ಈ ಅವಕಾಶವನ್ನು ಬಳಸಿಕೊಳ್ಳುತ್ತೇನೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಜನರಿಗೆ ಸೇವೆ ಒದಗಿಸಲು ಸಾಕಷ್ಟು ಅವಕಾಶಗಳು ನಮಗೆ ಸಿಗುತ್ತವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X