Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಸವಣ್ಣನ ಚಿಂತನೆ ಜಾತಿ-ಧರ್ಮಗಳನ್ನು...

ಬಸವಣ್ಣನ ಚಿಂತನೆ ಜಾತಿ-ಧರ್ಮಗಳನ್ನು ಮೀರಿದ್ದು: ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ15 May 2016 11:44 PM IST
share
ಬಸವಣ್ಣನ ಚಿಂತನೆ ಜಾತಿ-ಧರ್ಮಗಳನ್ನು ಮೀರಿದ್ದು: ಯಡಿಯೂರಪ್ಪ

ಬೆಂಗಳೂರು, ಮೇ 15: ಕನ್ನಡ ಮಾತನಾಡುವ ಕೊನೆಯ ವ್ಯಕ್ತಿ ಇರುವವರೆಗೂ ವಚನ ಸಾಹಿತ್ಯ ಜೀವಂತವಾಗಿರಲಿದ್ದು, ವಚನಕಾರ ಬಸವಣ್ಣನ ಚಿಂತನೆಗಳು ಯಾವುದೆ ಒಂದು ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಿಸಿದ್ದಾರೆ.
 ರವಿವಾರ ಬಸವ ವೇದಿಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ‘ಬಸವ ಜಯಂತಿ’ ಹಾಗೂ ‘ಬಸವಶ್ರೀ’ ಹಾಗೂ ‘ವಚನ ಸಾಹಿತ್ಯಶ್ರೀ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಸವಣ್ಣ ಚಿಂತನೆಗಳನ್ನು ಜಾತಿ, ಧರ್ಮದ ಚೌಕಟ್ಟುಗಳನ್ನು ಮೀರಿದಾಗಿದೆ. ಅವರು ಸ್ಥಾಪಿಸಿದ ‘ಅನುಭವ ಮಂಟಪ’ವು ಜಗತ್ತಿನ ಮೊದಲ ಪ್ರಜಾಪ್ರಭುತ್ವದ ವೇದಿಕೆಯಾಗಿದ್ದು, ಆ ಮೂಲಕ ದೀನ, ದಲಿತ ಹಾಗೂ ಮಹಿಳೆಯರ ಕನಸು, ಚಿಂತನೆಗಳಿಗೆ ಜೀವ ತುಂಬಿದರು ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಅಶಾಂತಿಯ ತಾಣವಾಗುತ್ತಿರುವ ಜಗತ್ತಿಗೆ ಬಸವಣ್ಣ ನವರ ಚಿಂತನೆಗಳು ತೀರ ಅಗತ್ಯವಾಗಿದ್ದು, ಸಂಘ-ಸಂಸ್ಥೆಗಳು ಜಗತ್ತಿನಾದ್ಯಂತ ಬಸವಣ್ಣನ ವಚನಗಳ ಸಾರವನ್ನು ಪಸರಿಸುವ ಜವಾಬ್ದಾರಿ ಹೊರಬೇಕಾಗಿದೆ. ಇದಕ್ಕೆ ಬೇಕಾದ ಅಗತ್ಯ ನೆರವನ್ನು ನೀಡಲು ನಾಡಿನ ಜನತೆ ಸಿದ್ಧರಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದರು.
 ಮಾಹಿತಿ ತಂತ್ರಜ್ಞಾನ ಸಚಿವ ಎಸ್.ಆರ್.ಪಾಟೀಲ್ ಮಾತನಾಡಿ, ಜಗತ್ತು ಸಮ ಸಮಾಜದೆಡೆಗೆ ಹೋಗಬೇಕಾದರೆ ಬಸವಣ್ಣ ಚಿಂತನೆಗಳು ಅಗತ್ಯವಾಗಿದೆ. ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ ಸೇರಿದಂತೆ ವಚನಕಾರರ ಚಿಂತನೆಗಳನ್ನು ಜಗತ್ತಿನಾದ್ಯಂತ ಪಸರಿಸುವ ಅಗತ್ಯವಿದೆ ಎಂದು ತಿಳಿಸಿದರು.
 ದೇಶದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಸೇರಿದಂತೆ ಅನೇಕ ಮಹಾನ್ ವ್ಯಕ್ತಿಗಳು ಜನಿಸಿ, ಮಾನವೀಯತೆಯ ಸಂದೇಶಗಳನ್ನು ನೀಡಿ ಹೋಗಿದ್ದಾರೆ. ಆದರೆ, ಅವರು ಹಾಕಿಕೊಟ್ಟ ಸಂದೇಶಗಳನ್ನು ಪ್ರತಿಯೊಬ್ಬರು ಪಾಲಿಸಿದರೆ, ಭಾರತ ಸರ್ವಜನರ ಶಾಂತಿಯ ತೋಟವಾಗುತ್ತದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಮಹಾನ್ ವ್ಯಕ್ತಿಗಳ ಜೀವನ ಸಂದೇಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಅವರು ಆಶಿಸಿದರು.
ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, 12ನೆ ಶರಮಾನದಲ್ಲಿ ಬಸವಣ್ಣ ಮಾಡಿದ ಸಾಮಾಜಿಕ ಕ್ರಾಂತಿ ಸಾಮಾನ್ಯವಾದುದ್ದಲ್ಲ. ಜಾತಿ ಶಕ್ತಿಗಳನ್ನು ಮೀರಿ ದೀನ ದಲಿತರಿಗೆ ಸಾಮಾಜಿಕ ನ್ಯಾಯವನ್ನು ದೊರಕಿಸಿಕೊಡುವಲ್ಲಿ ಅವರು ಮಾಡಿದ ಪ್ರಯತ್ನ ನಮ್ಮೆಲ್ಲರಿಗೂ ಮಾದರಿಯಾದದ್ದು .ಅವರ ಹಾದಿಯಲ್ಲಿ ನಾವೆಲ್ಲರೂ ಮುನ್ನಡೆಯೋಣವೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉದ್ಯಮಿ ವಿಜಯ ಸಂಕೇಶ್ವರ್‌ರವರಿಗೆ ‘ಬಸವಶ್ರೀ’ ಹಾಗೂ ಹಿರಿಯ ಸಾಹಿತಿ ಪ್ರೊ.ಜಿ.ಎಚ್.ಹನ್ನೆರಡುಮಠ, ಡಾ.ಮಂಗಳಾ ಪ್ರಿಯದರ್ಶಿನಿ ಅವರಿಗೆ ‘ವಚನಸಾಹಿತ್ಯ ಶ್ರೀ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಈ ವೇಳೆ ಬೆಕ್ಕಿನ ಕಲ್ಮಠದ ಮುರುಘರಾಜೇಂದ್ರ ಸ್ವಾಮೀಜಿ, ನಾಡೋಜ ಹಂಪ ನಾಗರಾಜಯ್ಯ, ಬಸವ ವೇದಿಕೆಯ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X