ತಮಿಳುನಾಡು, ಪುದುಚೇರಿ , ಕೇರಳ ವಿಧಾನಸಭೆ ಚುನಾವಣೆ; ಮತದಾನ ಆರಂಭ
ಹೊಸದಿಲ್ಲಿ, ಮೇ.16: ತಮಿಳುನಾಡು, ಪುದುಚೇರಿ ಮತ್ತು ಕೇರಳದ ವಿಧಾನಸಭೆ ಚುನಾವಣೆಗೆ ಮತದಾನ ಸೋಮವಾರ ಬೆಳಗ್ಗೆ ಆರಂಭಗೊಂಡಿದೆ.
ಮೂರೂ ರಾಜ್ಯಗಳಲ್ಲಿಯೂ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ತಮಿಳುನಾಡಿನ 232, ಕೇರಳದ 140 ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯ 30 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಬಿರುಸಿನಿಂದ ಸಾಗಿದೆ.
ಈ ಮೊದಲು ನಡೆದಿದ್ದ ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳ ವಿಧಾನಸಭೆ ಚುನಾವಣೆ ಮತದಾನ ಫಲಿತಾಂಶ, ತಮಿಳುನಾಡು, ಪುದುಚೇರಿ ಮತ್ತು ಕೇರಳದ ವಿಧಾನಸಭೆ ಚುನಾವಣೆಯ ಫಲಿತಾಂಶ ಮೇ.19ರಂದು ಒಟ್ಟಿಗೆ ಪ್ರಕಟಗೊಳ್ಳಲಿದೆ.
ತಮಿಳುನಾಡಿನಲ್ಲಿ ಒಟ್ಟು 3,740 ಅಭ್ಯರ್ಥಿಗಳಿದ್ದು, 5.79 ಕೋಟಿ ಮತದಾರರು ಇವರ ಭವಿಷ್ಯ ನಿರ್ಧರಿಸಲಿದ್ದಾರೆ. ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಎಐಎಡಿಎಂಕೆ ಮತ್ತು ಎಂ. ಕರುಣಾನಿಧಿ ಕಣದಲ್ಲಿದ್ದಾರೆ. ಪುದುಚೇರಿಯಲ್ಲಿ 9.41 ಲಕ್ಷ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. 344 ಅಭ್ಯರ್ಥಿಗಳು ಕಣದಲ್ಲಿದ್ದು, .
ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತು ಸಿಪಿಎಂ ನೇತೃತ್ವದ ಎಲ್ಡಿಎಫ್ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ಈ ಬಾರಿ ಖಾತೆ ತೆರೆಯುವ ಪ್ರಯತ್ನ ನಡೆಸಲಿದೆ. ಕೇರಳದಲ್ಲಿ 2.6 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. 1203 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ .