ಮಂಗಳೂರು ಜೈಲಿನ ಕೈದಿ ಮೃತ್ಯು
ಮಂಗಳೂರು, ಮೇ 16: ನಗರದ ಜೈಲಿನಲ್ಲಿ ವಿಚಾರಣಾಧೀನ ಕೈದಿ ಆಗಿರುವ ಶೇಖರ ನಲ್ಕೆ (30) ಎಂಬಾತ ತೀವ್ರವಾಗಿ ಅಸ್ವಸ್ಥಗೊಂಡು ರವಿವಾರ ರಾತ್ರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಶೇಖರ್ ನಲ್ಕೆಗೆ ಶುಕ್ರವಾರ ತೀವ್ರವಾಗಿ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಆತನನ್ನು ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಆತನ ಕಿಡ್ನಿ ವಿಫಲವಾಗಿರುವುದಾಗಿ ತಿಳಿಸಿದ್ದಾರು. ಚಿಕಿತ್ಸೆ ಪಡೆಯುತ್ತಿದ್ದ ಶೇಖರ್ ರವಿವಾರ ರಾತ್ರಿ 11.45ಕ್ಕೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಶೇಖರ್ ಕಡಬ ಠಾಣಾ ವ್ಯಾಪ್ತಿಯಲ್ಲಿ ಅತ್ಯಾಚಾರಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿ ಕಳೆದ 10 ತಿಂಗಳಿನಿಂದ ಮಂಗಳೂರು ಜೈಲಿನಲ್ಲಿದ್ದರು.
Next Story