Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮತ್ತೆ ಗಿರಿಜನ ಅಭಿವೃದ್ಧಿ ಇಲಾಖೆ ಎದುರು...

ಮತ್ತೆ ಗಿರಿಜನ ಅಭಿವೃದ್ಧಿ ಇಲಾಖೆ ಎದುರು ಧರಣಿ

ಆದಿವಾಸಿಗಳ ಹೋರಾಟಕ್ಕೆ ಸ್ಪಂದಿಸದ ಸರಕಾರ

ವಾರ್ತಾಭಾರತಿವಾರ್ತಾಭಾರತಿ16 May 2016 10:01 PM IST
share
ಮತ್ತೆ ಗಿರಿಜನ ಅಭಿವೃದ್ಧಿ  ಇಲಾಖೆ ಎದುರು ಧರಣಿ

ಮಡಿಕೇರಿ, ಮೇ 16: ಕೊಡಗಿನ ಬುಡಕಟ್ಟು ಜನರ ಬೇಡಿಕೆಗಳಿಗೆ ಒಂದು ತಿಂಗಳೊಳಗೆ ಸ್ಪಂದಿಸುವುದಾಗಿ ಜಿಲ್ಲಾಡಳಿತ ನೀಡಿದ್ದ ಭರವಸೆ ಹುಸಿಯಾಗಿದೆ ಎಂದು ಆರೋಪಿಸಿ ಬುಡಕಟ್ಟು ಸಮುದಾಯಗಳ ಒಕ್ಕೂಟ ಮತ್ತೆ ನಗರದ ಗಿರಿಜನ ಅಭಿವೃದ್ಧಿ ಇಲಾಖೆೆ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಆರಂಭಿಸಿದೆ. ಬುಡಕಟ್ಟು ಜನರ ಬೇಡಿಕೆಗಳನ್ನು ಈಡೇರಿಸು ವಂತೆ ಒತ್ತಾಯಿಸಿ ಇತ್ತೀಚೆಗೆ ಐಟಿಡಿಪಿ ಕಚೇರಿ ಎದುರು 16 ದಿನಗಳ ಕಾಲ ಅಹೋರಾತ್ರಿ ಧರಣಿ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಶೇಷ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವರು ಮುಂದಿನ ಒಂದು ತಿಂಗಳಿನೊಳಗೆ ಸೂಕ್ತ ಕ್ರಮ ಕೈಗೊಳ್ಳು ವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಭರವಸೆ ಹಿನ್ನೆಲೆ ಧರಣಿಯನ್ನು ಕೈಬಿಟ್ಟಿದ್ದ ಬುಡಕಟ್ಟು ಜನರು ಮತ್ತೆ ಐಟಿಡಿಪಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ನಿರಂತರವಾಗಿ ಮೂಲನಿವಾಸಿ ಬುಡಕಟ್ಟು ಜನರನ್ನು ಕಡೆಗಣಿಸುತ್ತಲೇ ಬರಲಾಗುತ್ತಿದೆ ಎಂದು ಧರಣಿನಿರತರು ಆರೋಪಿಸಿದ್ದಾರೆ.

ಪ್ರಕೃತಿಯೊಂದಿಗೆ ಭಾವನಾತ್ಮಕವಾಗಿ ಬದುಕುತ್ತಿರುವ ಆದಿವಾಸಿಗಳ ಸಂಖ್ಯೆ ಕೊಡಗು ಜಿಲ್ಲೆಯಲ್ಲಿ 54 ಸಾವಿರವಿದ್ದು, ಉದಾರೀಕರಣ, ಜಾಗತೀಕರಣ, ಖಾಸಗೀಕರಣದ ಹೆಸರಿನಲ್ಲಿ ಒಕ್ಕಲೆಬ್ಬಿಸುತ್ತಿದ್ದಾರೆ. ಮಹಿಳೆಯರು, ಮಕ್ಕಳು ತೀವ್ರ ರಕ್ತಹೀನತೆಯಿಂದ ಬಳಲುತ್ತಿದ್ದು, ಸಾವು ನೋವುಗಳು ಸಂಭವಿಸುತ್ತಿದೆ ಎಂದು ಒಕ್ಕೂಟದ ಜಿಲ್ಲಾ ಸಂಚಾಲಕ ವೈ.ಪಿ.ತಮ್ಮಯ್ಯ ಆರೋಪಿ ಸಿದ್ದಾರೆ.

<ಬೇಡಿಕೆಗಳು:  ಜಿಲ್ಲಾ ಐಟಿಡಿಪಿ ಅಧಿಕಾರಿ ಯನ್ನು ತಕ್ಷಣ ವಜಾಗೊಳಿಸಬೇಕು. ಐದು ವರ್ಷಗಳ ಐಟಿಡಿಪಿ ಯೋಜನೆಗಳ ಸಮಗ್ರ ತನಿಖೆ ನಡೆಸಬೇಕು. ಬುಡಕಟ್ಟು ಅಭಿವೃದ್ಧಿ ಯೋಜನೆಗಳ ಅನು ಷ್ಟಾನ ಉಸ್ತುವಾರಿಗಾಗಿ ಬುಡ ಕಟ್ಟು ಅಭಿವೃದ್ಧಿಪ್ರಗತಿ ಪರಿಶೀಲನೆ ಸಮಿತಿ ರಚನೆಯಾಗಬೇಕು. ವೀರಾಜ ಪೇಟೆ ತಾಲೂಕಿನ ದೇವರಪುರ ಪಂ. ಹೆಬ್ಬಾಲೆ ಬುಡಕಟ್ಟು ಹಾಡಿಯಲ್ಲಿರುವ 130 ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಅರುವತ್ತೋಕ್ಲು ಗ್ರಾಪಂ ವ್ಯಾಪ್ತಿಗೆ ಬರುವ ಹಳ್ಳಿಗಟ್ಟುವಿನಲ್ಲಿರುವ ಬುಡಕಟ್ಟು ಕುಟುಂಬಗಳಿಗೆ ಭೂಮಿ ಮತ್ತು ಸೂಕ್ತ ಪುನರ್ವಸತಿ ವ್ಯವಸ್ಥೆಗಳನ್ನು ಕಲ್ಪಿಸಬೇಕು. ನಾಗರಹೊಳೆ ಅಭಯಾರಣ್ಯ ಪ್ರದೇಶಕ್ಕೆ ಸಂಬಂಧಿಸದಂತೆ ಪ್ರೊ. ಮುಝಾಫರ್ ಅಸಾದಿ ವರದಿಯನ್ನು ಅನುಷ್ಟಾನಗೊಳಿಸಬೇಕು. ಕೊಡಗು ಜಿಲ್ಲೆಯ ನಾಕೂರು ಶಿರಂಗಾಲ, ನಂಜರಾಯಪಟ್ಟಣ, ವಾಲ್ನೂರು, ಗ್ರಾಪಂ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕುಪತ್ರ ನೀಡಬೇಕು. ಈಗಾಗಲೇ ಕರ್ನಾಟಕ ರಾಜ್ಯ ಸರಕಾರದಿಂದ ವಿಶೇಷ ಘಟಕ ಯೋಜನೆ/ಗಿರಿಜನ ಉಪಯೋಜನೆಯ ನಿಯಮಗಳನ್ನು ರೂಪಿಸಿ ಜಾರಿಗೆ ತರಬೇಕು, ಕರ್ನಾಟಕ ರಾಜ್ಯದಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳನ್ನು ಅಳಿವಿನಂಚಿನಲ್ಲಿರುವ ಸಮು ದಾಯಗಳೆಂದು ಗುರುತಿಸಿ ವಿಶೇಷ ಸ್ಥಾನಮಾನ ನೀಡಬೇಕು ಎಂದು ಬುಡಕಟ್ಟು ಸಮುದಾಯಗಳ ಒಕ್ಕೂಟ, ಬುಡಕಟ್ಟು ಮಹಿಳಾ ಸಂಘಟನೆಗಳು ಹಾಗೂ ಬುಡಕಟ್ಟು ಕೃಷಿಕರ ಸಂಘ ಒತ್ತಾಯಿಸಿದೆ.ಪ್ರಮುಖರಾದ ಪ್ರೇಮಾ, ಮಾದೇವಿ, ಸುನೀಲ್, ದಾಸಪ್ಪ, ಪಿ.ಕೆ.ರವಿ, ವೈ.ಕೆ.ಅಪ್ಪಣ್ಣ, ಗಪ್ಪು, ಸೀತೆ ಮತ್ತಿತರರು ಧರಣಿ ಸತ್ಯಾಗ್ರಹದಲದಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X