Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್: ನಿರಾಶಾದಾಯಕ ವರದಿಯಿಂದ...

ಗುಜರಾತ್: ನಿರಾಶಾದಾಯಕ ವರದಿಯಿಂದ ಕಂಗೆಟ್ಟಿರುವ ಬಿಜೆಪಿ

ಮುಖ್ಯಮಂತ್ರಿ ಆನಂದಿ ಬೆನ್ ಎತ್ತಂಗಡಿಗೆ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ16 May 2016 11:22 PM IST
share

ಹೊಸದಿಲ್ಲಿ,ಮೇ 16: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಮುಂದಿನ ವರ್ಷ ನಡೆಯಲಿರುವ ತವರು ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಕಾರ್ಯತಂತ್ರವೊಂದನ್ನು ರೂಪಿಸುತ್ತಿದ್ದು, ಗುಜರಾತ್ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ಅವರ ಸ್ಥಾನಕ್ಕೆ ಇನ್ನೊಬ್ಬರನ್ನು ನೇಮಿಸುವ ಬಗ್ಗೆ ಬಿಜೆಪಿ ಪರಿಶೀಲಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ವರ್ಷದ ಭಾರೀ ಪ್ರತಿಷ್ಠೆಯ ಚುನಾವಣೆಯಲ್ಲಿ ಹೋರಾಟಕ್ಕೆ ಸಿದ್ಧತೆಗಾಗಿ ಮೇಲಿಂದ ಮೇಲೆ ಸಭೆಗಳು ನಡೆಯುತ್ತಲೇ ಇವೆ. ನೂತನ ಮುಖ್ಯಮಂತ್ರಿ ನೇಮಕಕ್ಕೆ ಮಾರ್ಗವನ್ನು ಸುಗಮಗೊಳಿಸಲು ಆನಂದಿ ಬೆನ್ ಅವರನ್ನು ಯಾವುದಾದರೊಂದು ರಾಜ್ಯಕ್ಕೆ ರಾಜ್ಯಪಾಲರನ್ನಾಗಿ ನೇಮಿಸಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಗುಜರಾತ್‌ನಲ್ಲಿ ಆರೋಗ್ಯ ಸೇರಿದಂತೆ ಹಲವಾರು ಪ್ರಮುಖ ಖಾತೆಗಳನ್ನು ಹೊಂದಿರುವ ನಿತಿನ್‌ಭಾಯಿ ಪಟೇಲ್ ಅವರು ಮುಖ್ಯಮಂತ್ರಿ ಹುದ್ದೆಯ ರೇಸಿನಲ್ಲಿ ಮುಂಚೂಣಿಯಲ್ಲಿದ್ದಾರೆನ್ನಲಾಗಿದ್ದು, ಕಳೆದ ವಾರ ದಿಲ್ಲಿಯಲ್ಲಿ ಪ್ರಧಾನಿಯವರನ್ನು ಭೇಟಿಯಾಗಿದ್ದರು.

ಎರಡು ವರ್ಷಗಳ ಹಿಂದೆ ಪ್ರಧಾನಿ ಗಾದಿಯನ್ನೇರುವ ಮುನ್ನ ಖುದ್ದು ಮೋದಿಯವರೇ ತನ್ನ ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಿದ್ದ ಆನಂದಿ ಬೆನ್ ರಾಜ್ಯದಲ್ಲಿ ಮೀಸಲಾತಿಗಾಗಿ ನಡೆದ ಪಟೇಲ್ ಸಮುದಾಯದ ಭಾರೀ ಪ್ರತಿಭಟನೆಯನ್ನು ನಿಭಾಯಿಸುವಲ್ಲಿ ಹೈರಾಣಾಗಿದ್ದರು. ಕಳೆದ ವರ್ಷದ ಆಗಸ್ಟ್ ನಲ್ಲಿ ಆರಂಭಗೊಂಡ ಈ ಮುಷ್ಕರದಿಂದಾಗಿ ಬಿಜೆಪಿಯು ತನ್ನ ಅತ್ಯಂತ ಪ್ರಬಲ ಮತ್ತು ಅತ್ಯಂತ ನಿಷ್ಠ ವೋಟ್‌ಬ್ಯಾಂಕ್‌ನ್ನು ಕಳೆದುಕೊಳ್ಳುವ ಅಪಾಯದಲ್ಲಿದೆ. ಪಟೇಲ್ ಪ್ರತಿಭಟನೆಯ ನಾಯಕ ಹಾರ್ದಿಕ ಪಟೇಲ್ ಅವರು ದೇಶದ್ರೋಹದ ಆರೋಪದಲ್ಲಿ ಜೈಲು ಸೇರಿ 200 ದಿನಗಳೇ ಕಳೆದು ಹೋಗಿವೆ. 2017ರ ಚುನಾವಣೆ ಸಮೀಪಿಸುತ್ತಿರುವುದರಿಂದ ತನ್ನ ರಾಜಕೀಯ ಬೆಂಬಲದ ಬುನಾದಿಯನ್ನು ಗಟ್ಟಿ ಮಾಡಿಕೊಳ್ಳಲು ಮತ್ತು ತನ್ನ ಎರಡು ದಶಕಗಳ ಆಡಳಿತದಲ್ಲಿ ಯಾವುದೇ ಆಡಳಿತ ವಿರೋಧಿ ಭಾವನೆಯನ್ನು ಕಿತ್ತು ಹಾಕಲು ಬಿಜೆಪಿ ಬಯಸಿದೆ.
 ಮೋದಿಯವರ ನಿಕಟವರ್ತಿ ಓಂ ಮಾಥುರ್ ರಾಜ್ಯದಲ್ಲಿಯ ರಾಜಕೀಯ ಸ್ಥಿತಿ ಕುರಿತು ಸಲ್ಲಿಸಿರುವ ವರದಿಯು ಗುಜರಾತ್ ಬಿಜೆಪಿಯ ಕಳವಳಕ್ಕೆ ಮೂಲಕಾರಣವಾಗಿದೆ. ಪಟೇಲ್ ಚಳುವಳಿಯನ್ನು ನಿರ್ವಹಿಸುವಲ್ಲಿ ಆನಂದಿ ಬೆನ್ ವಿಫಲರಾಗಿದ್ದಾರೆ ಎಂದು ಬೆಟ್ಟು ಮಾಡಿರುವ ವರದಿಯು, ರಾಜ್ಯ ಘಟಕದಲ್ಲಿಯ ಒಳಜಗಳಕ್ಕೆ ತುರ್ತಾಗಿ ಅಂತ್ಯ ಹಾಡಬೇಕಾದ ಅಗತ್ಯವಿದೆ ಎಂದು ಹೇಳಿದೆಯೆನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X