ಭಾರತದ ಅತ್ಯಂತ ಹಿರಿಯ ಟೆಸ್ಟ್ ಕ್ರಿಕೆಟಿಗ ದೀಪಕ್ ಶೋಧನ್ ನಿಧನ

ಮುಂಬೈ, ಮೇ 16: ತನ್ನ ಚೊಚ್ಚಲ ಇನಿಂಗ್ಸ್‌ನಲ್ಲಿ ಸ್ಮರಣೀಯ ಶತಕ ಬಾರಿಸಿದ್ದ ಭಾರತದ ಅತ್ಯಂತ ಹಿರಿಯ ಟೆಸ್ಟ್ ಕ್ರಿಕೆಟಿಗ ದೀಪಕ್ ಶೋಧನ್(87 ವರ್ಷ) ಹುಟ್ಟೂರಾದ ಹೈದರಾಬಾದ್‌ನಲ್ಲಿ ಸೋಮವಾರ ನಿಧನರಾಗಿದ್ದಾರೆ.
ಕಳೆದ ಕೆಲವು ಸಮಯದಿಂದ ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಶೋಧನ್ ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು ಮೂಲಗಳು ತಿಳಿಸಿವೆ. ಎಡಗೈ ದಾಂಡಿಗ ಶೋಧನ್ 60ರ ಸರಾಸರಿಯಲ್ಲಿ ಕೇವಲ 3 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.
ಭಾರತ ಹಾಗೂ ಪಾಕಿಸ್ತಾನದ ವಿಭಜನೆಗೊಂಡ ಬಳಿಕ 1952-53ರಲ್ಲಿ ಕೋಲ್ಕತಾದಲ್ಲಿ ನಡೆದಿದ್ದ ಮೊದಲ ಟೆಸ್ಟ್ ಸರಣಿಯ ಐದನೆ ಹಾಗೂ ಅಂತಿಮ ಪಂದ್ಯದ ತನ್ನ ಚೊಚ್ಚಲ ಇನಿಂಗ್ಸ್‌ನಲ್ಲಿ ಶೋಧನ್ ಔಟಾಗದೆ 110 ರನ್ ಗಳಿಸಿ ಗಮನ ಸೆಳೆದಿದ್ದರು. ಆ ಪಂದ್ಯ ಡ್ರಾನಲ್ಲಿ ಕೊನೆಗೊಂಡಿತ್ತು.
ವೆಸ್ಟ್‌ಇಂಡೀಸ್ ಪ್ರವಾಸದಲ್ಲಿ ತಂಡಕ್ಕೆ ಆಯ್ಕೆಯಾಗಿದ್ದ ಶೋಧನ್ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಪೋರ್ಟ್ ಆಫ್ ಸ್ಪೇನ್‌ನಲ್ಲಿ 45 ರನ್ ಹಾಗೂ 11 ರನ್ ಗಳಿಸಿದ್ದರು.
43 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ಶೋಧನ್ 1802 ರನ್ ಗಳಿಸಿದ್ದು, ಇದರಲ್ಲಿ 4 ಶತಕ ಹಾಗೂ 7 ಅರ್ಧಶತಕಗಳಿವೆ. 34.05ರ ಸರಾಸರಿಯಲ್ಲಿ 73 ವಿಕೆಟ್‌ಗಳನ್ನು ಕಬಳಿಸಿದ್ದಾರೆ.





