ಉಡುಪಿಗೆ ‘ಸಖಿ’ ಒನ್ ಸ್ಟಾಪ್ ಸೆಂಟರ್ ಮಂಜೂರು: ಕರಂದ್ಲಾಜೆ

ಉಡುಪಿ, ಮೇ 17: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ, ಪೊಲೀಸ್ ನೆರವು, ಕಾನೂನು ಸೇವೆ, ಸಮಾಲೋಚನೆ, ತಾತ್ಕಾಲಿಕ ಆಶ್ರಯ ಸೇರಿದಂತೆ ಅಗತ್ಯ ನೆರವನ್ನು ಒದಗಿಸುವ ಕೇಂದ್ರ ಸರಕಾರದ ಯೋಜನೆಯಾದ ‘ಸಖಿ’ (ಒನ್ ಸ್ಟಾಪ್ ಸೆಂಟರ್) ಕೇಂದ್ರವು ಕರ್ನಾಟಕ ರಾಜ್ಯದಲ್ಲಿ ಉಡುಪಿ ಜಿಲ್ಲೆಗೆ ಮಂಜೂರಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಮಣಿಪಾಲದಲ್ಲಿರುವ ಉಡುಪಿ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಟ್ಟೂರಿನಲ್ಲಿರುವ ಸೀ ಸೇವಾನಿಕೇತನ ಸಂಸ್ಥೆಯ ಆವರಣದಲ್ಲಿ ಈ ಕೇಂದ್ರದ ಕಟ್ಟಡ ನಿರ್ಮಿಸಲಾಗುವುದು. ಇದಕ್ಕಾಗಿ ಒಟ್ಟು 45.87 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಕೇಂದ್ರದ ಸಮರ್ಪಕ ನಿರ್ವಹಣೆಗೆ ರಾಜ್ಯಮಟ್ಟದ ಚಾಲನಾ ಮತ್ತು ಮೇಲ್ವಿಚಾರಣಾ ಸಮಿತಿಯನ್ನು ರಚಿಸ ಲಾಗಿದೆ ಎಂದು ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ಸಭೆಗೆ ತಿಳಿಸಿದರು.
225 ಲಕ್ಷ ರೂ. ವೆಚ್ಚದ ಮಲ್ಪೆ ಬಂದರಿನ ಡ್ರೆಜ್ಜಿಂಗ್ ಕಾಮಗಾರಿ ಪ್ರಗತಿಯಲ್ಲಿದ್ದು, ಶೇ.30ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಮಲ್ಪೆ ಮೂರನೆ ಹಂತದ ಕಾಮಗಾರಿಗೆ ಸಂಬಂಸಿ ಗುತ್ತಿಗೆದಾರರಿಗೆ ನೀಡಲು 8 ಕೋಟಿ ರೂ. ಹಣ ಕೇಂದ್ರದಿಂದ ಬಿಡುಗಡೆಯಾಗಲು ಬಾಕಿ ಇದೆ ಎಂದು ಬಂದರು ಇಲಾಖಾ ಕಾರಿಗಳು ತಿಳಿಸಿದರು.
ಕೋಡಿಕನ್ಯಾಣ ಬಂದರಿನ ಕಾಮಗಾರಿ ಟೆಂಡರ್ ಹಂತದಲ್ಲಿದೆ. ಗಂಗೊಳ್ಳಿ ಬ್ರೇಕ್ ವಾಟರ್ ಕಾಮಗಾರಿಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಹೆಜಮಾಡಿ ಬಂದರು ಕಾಮಗಾರಿಯ ಪ್ರಸ್ತಾವವನ್ನು ಕೇಂದ್ರ ಸರಕಾರಕ್ಕೆ ಕಳುಹಿಸಲಾಗಿದ್ದು, ಇದರ ಪರಿಸರ ಕುರಿತ ಸಾರ್ವಜನಿಕ ಅಭಿಪ್ರಾಯವನ್ನು ಕರ್ನಾಟಕ ಮಾಲಿನ್ಯ ಮಂಡಳಿ ನಡೆಸಬೇಕಾಗಿದೆ ಎಂದು ಶೋಭಾ ಮಾಹಿತಿ ನೀಡಿದರು.
ಕುಡಿಯುವ ನೀರಿಗಾಗಿ ಸರಕಾರದಿಂದ ಎರಡು ಕೋಟಿ ರೂ. ಬಿಡುಗಡೆಯಾಗಿದ್ದು, ವಿವಿಧ ಕಾಮಗಾರಿಗಳಿಗೆ ಸುಮಾರು ಎಂಟು ಕೋಟಿ ರೂ. ಹಣ ಬಿಡುಗಡೆಗೆ ಬಾಕಿ ಇದೆ ಎಂದು ಅಕಾರಿಗಳು ತಿಳಿಸಿದರು. ದೇಶದಲ್ಲೇ ಅತಿಹೆಚ್ಚು ಮಳೆ ಬೀಳುವ ಪ್ರದೇಶವಾಗಿರುವ ಕರಾವಳಿಯಲ್ಲಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಿ ಸುವಂತಹ ಪರಿಸ್ಥಿತಿ ಇದೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಯೋಜನೆ ಹಾಕಿಕೊಳ್ಳಬೇಕು ಎಂದು ಶೋಭಾ ಕರಂದ್ಲಾಜೆ ಸಂಬಂಧಪಟ್ಟ ಅಕಾರಿಗಳಿಗೆ ಸೂಚನೆ ನೀಡಿದರು.
ಉಡುಪಿ ಜಿಲ್ಲೆಯಲ್ಲಿ ಒಟ್ಟು 2,837 ಬಿಪಿಎಲ್ ಕುಟುಂಬಗಳ ಮನೆಗಳಲ್ಲಿ ವಿದ್ಯುತ್ ಸಂಪರ್ಕವಿಲ್ಲ. ಪಟ್ಟಣ ಪ್ರದೇಶಗಳಲ್ಲಿ ಕೇಂದ್ರದ ವಿದ್ಯುದೀಕರಣ ಯೋಜನೆಯಲ್ಲಿ 23.65 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಈ ಎಲ್ಲ ಮನೆಗಳಿಗೆ ವಿದ್ಯುತ್ ಒದಗಿಸಲಾಗುವುದು ಎಂದು ಮೆಸ್ಕಾಂ ಅಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಉಡುಪಿ ಜಿಲ್ಲೆಯಲ್ಲಿ ಒಟ್ಟು 202 ಗ್ರಾಮಗಳಲ್ಲಿ ಶಾಖಾ ಅಂಚೆ ಕಚೇರಿ ಗಳಿದ್ದು, ಉಳಿದ ಕಡೆಗಳಲ್ಲಿ ಅಂಚೆ ಕಚೇರಿ ತೆರೆಯಲು ಆಯಾ ಗ್ರಾಪಂ ಕಟ್ಟಡಗಳಿಗೆ ಅವಕಾಶ ಕಲ್ಪಿಸುವಂತೆ ಇಲಾಖಾಕಾರಿಗಳು ಸಭೆಯಲ್ಲಿ ಮನವಿ ಮಾಡಿದರು. ಈ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಕಾರಿ ಪ್ರಿಯಾಂಕಾ ಮೇರಿ ್ರಾನ್ಸಿಸ್ ಹೇಳಿದರು. ಮಲ್ಪೆ-ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿಗೆ ಸಂಬಂಸಿ ಈಗಾಗಲೇ ವಾಹನ ದಟ್ಟಣೆಯ ಸರ್ವೆ ನಡೆಸಲಾಗಿದ್ದು, ಇದೀಗ ರೋಡ್ ಸರ್ವೇ ನಡೆಸಲಾಗುತ್ತಿದೆ ಎಂದು ಹೆದ್ದಾರಿ ಇಲಾಖಾಕಾರಿಗಳು ಹೇಳಿದರು.
ಸಭೆಯಲ್ಲಿ ಉಡುಪಿ ಜಿಲ್ಲಾಕಾರಿ ಡಾ.ಆರ್.ವಿಶಾಲ್, ಜಿಪಂ ಅಧ್ಯಕ್ಷ ದಿನಕರ ಬಾಬು, ಸಮಿತಿಯ ಸದಸ್ಯ ಬೋಳ ಸದಾಶಿವ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.







